Sunday | June 14, 2026 |

ಪಿಐಎಲ್‌ ವಿಚಾರಣೆ ; ಪೊಲೀಸ್‌ ಪೇದೆಗಳು ಮುಚ್ಚಿಟ್ಟಿದ್ದ ಸತ್ಯ ಬಹಿರಂಗಗೊಳ್ಳುವುದೇ?

Support THE-FILE

spot_img

ಬೆಂಗಳೂರು; ಸಂಜಯನಗರ ಠಾಣೆಯ ಪೊಲೀಸ್‌ ಪೇದೆಗಳಿಬ್ಬರು ಅನಾಗರಿಕವಾಗಿ ವರ್ತಿಸಿದ್ದಲ್ಲದೆ  ಯುವಕರಿಬ್ಬರ ಮೇಲೆ ಹಲ್ಲೆ ನಡೆಸಿ, ಕಾಲಿಗೆ ಗುಂಡು ಹಾರಿಸಿದ್ದ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಪ್ರಕರಣಕ್ಕೆ  ಸಂಬಂಧಿಸಿದಂತೆ ಬೆಂಗಳೂರಿನ  ಜನಾಧಿಕಾರ ಸಂಘರ್ಷ ಪರಿಷತ್‌  ವೇದಿಕೆ ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ಓಕಾ  ಅವರ ನೇತೃತ್ವದ ದ್ವಿ ಸದಸ್ಯ ಪೀಠ ಇಂದು ವಿಡಿಯೋ ಕಾನ್ಫರೆನ್ಸಿಂಗ್‌  ಮೂಲಕ ವಿಚಾರಣೆ ನಡೆಸಿತು. ಅಡ್ವೋಕೇಟ್‌ ಜನರಲ್‌ ಈ ಸಂಬಂಧ ಹೇಳಿಕೆ ನೀಡಿದ್ದು 2020ರ ಏಪ್ರಿಲ್‌ 3ರಂದು ಈ ಕುರಿತು ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದ್ದಾರೆ.  ಹೀಗಾಗಿ  ಪ್ರಕರಣ ಏಪ್ರಿಲ್‌ 3ಕ್ಕೆ ಮುಂದೂಡಿಕೆಯಾಗಿದೆ. 

ಪ್ರಕರಣದಲ್ಲಿ ಸಂಜಯನಗರ ಪೊಲೀಸ್‌ ಠಾಣೆಯ ಪೇದೆ ಬಸವರಾಜ್, ಮಂಜುನಾಥ್, ಸಬ್‌ ಇನ್ಸ್‌ಪೆಕ್ಟರ್‌,ಇನ್ಸ್‌ಪೆಕ್ಟರ್‌,ಎಸಿಪಿ, ಡಿಸಿಪಿ ಅಲ್ಲದೆ ಬೆಂಗಳೂರು ಪೊಲೀಸ್‌ ಕಮಿಷನರ್‌, ರಾಜ್ಯ ಪೊಲೀಸ್‌ ಮಹಾನಿರ್ದೇಶಕ, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನು ಪ್ರತಿವಾದಿಯನ್ನಾಗಿಸಿದೆ. 

ಏನದು ಪ್ರಕರಣ?

ಕರೋನಾ ವೈರಸ್‌ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಘೋಷಣೆ ನಂತರ ರಸ್ತೆಗೆ ಇಳಿದಿದ್ದ ಕಾರಣಕ್ಕೆ ತಾಜುದ್ದೀನ್‌ ಮತ್ತು ಕುತುಬುದ್ದೀನ್‌ ಎಂಬಿಬ್ಬರು ಸಂಜಯನಗರ ಠಾಣೆಯ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಹರಿದಾಡಿತ್ತಲ್ಲದೆ, ಇದು ಪೊಲೀಸ್‌ ಸಮೂಹವನ್ನು ಸಿಟ್ಟಿಗೆಬ್ಬಿಸಿತ್ತು.  

ಆದರೆ ಅದಕ್ಕೂ ಮುನ್ನ  ಪೊಲೀಸ್‌ ಪೇದೆಗಳಿಬ್ಬರು ಈ ಇಬ್ಬರು ಯುವಕರ ಮೇಲೆ ಅನಾಗರಿಕವಾಗಿ  ವರ್ತಿಸಿದ್ದಲ್ಲದೆ ಗಂಭೀರ  ಹಲ್ಲೆ ನಡೆಸಿದ್ದರು. ಈ ಕುರಿತಾದ  ವಿಡಿಯೋ ವೈರಲ್‌ ಆಗಿತ್ತು. ಯುವಕರಿಬ್ಬರ ಮೇಲೆ  ಪೊಲೀಸ್‌ ಪೇದೆಗಳು ನಡೆಸಿದ್ದ ಹಲ್ಲೆಗೆ ಸಾರ್ವಜನಿಕ ವಲಯದಲ್ಲಿ  ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಅಲ್ಲದೆ ಬಂಧಿತ ಆರೋಪಿಗಳಿಬ್ಬರ ಜತೆ ಸೇರಿ ಕೆಲವು ಸಾರ್ವಜನಿಕರೂ ಪೊಲೀಸ್‌ ಪೇದೆಗೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸಾಮಾಜಿಕ  ಜಾಲತಾಣದಲ್ಲಿ ಹರಿದಾಡಿದ್ದವು. ಇದರ  ಬೆನ್ನಲ್ಲೇ ವೈರಲ್‌ ಆಗಿದ್ದ ಮತ್ತೊಂದು ವಿಡಿಯೋದಲ್ಲಿ  ಪೊಲಿಸ್‌ ಪೇದೆಯೇ ತಾಜುದ್ದೀನ್‌ ಕೊರಳಪಟ್ಟಿ ಹಿಡಿದು ಹಲ್ಲೆ ನಡೆಸುತ್ತಿರುವುದು, ಬೂಟು ಕಾಲಿನಲ್ಲಿ ಒದೆಯುವುದು, ಗೋಡೆಗೆ ಒತ್ತಿ ಹಿಡಿದು ಮುಖಕ್ಕೆ ಗುದ್ದುವುದು, ಜೇಬಿಗೆ ಬಲವಂತವಾಗಿ ಕೈ ತುರುಕುವುದು, ಮೊಬೈಲ್‌ ಕಸಿದುಕೊಳ್ಳುವ ದೃಶ್ಯಗಳಿದ್ದವು. 

ಈ ವಿಡಿಯೋ ಹೊರಬೀಳುವ ಮುನ್ನವೇ ಪೊಲೀಸ್‌ ಪೇದೆಗಳಿಬ್ಬರ ಮೇಲೆ ನಡೆದಿದ್ದ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಉತ್ತರ ಡಿಸಿಪಿ ವಿಭಾಗದ ಪೊಲೀಸರು ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದರಲ್ಲದೆ ಇಬ್ಬರ ಮೇಲೆ  ಎಫ್‌ಐಆರ್‌ ದಾಖಲಿಸಿದ್ದರು. ಅಲ್ಲದೆ ಬಂಧಿತ ತಾಜುದ್ದೀನ್‌ ಎಂಬಾತನನ್ನು ಕಳೆದ ಗುರುವಾರ ನಸುಕಿನಲ್ಲಿ ಮಹಜರ್‌ಗೆಂದು ಕರೆದುಕೊಂಡು ಹೋಗುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಎಂದು ಬಿಂಬಿಸಲಾಗಿತ್ತು. 

ಈ ವೇಳೆ ಸಬ್‌ ಇನ್ಸ್‌ಪೆಕ್ಟರ್‌ ರೂಪಾ ಮತ್ತು ಹೆಡ್‌ ಕಾನ್‌ಸ್ಟೆಬಲ್‌ ಮಂಜಣ್ಣಗೆ ಗಾಯವಾಗಿತ್ತು ಎಂದು ಹೇಳಿದ್ದ  ಪೊಲೀಸ್‌ ಇಲಾಖೆ, ತಕ್ಷಣ ಸಂಜಯನಗರ ಇನ್‌ಸ್ಪೆಕ್ಟರ್‌ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಮಾತು ಕೇಳದಿದ್ದಾಗ ಆರೋಪಿ ಶರಣಾಗಿರಲಿಲ್ಲ  ಎಂದು ಕಾರಣ  ನೀಡಿದ್ದ ಪೊಲೀಸರು ಎಡಗಾಲಿಗೆ ಗುಂಡು ಹೊಡೆದಿದ್ದರು. 

ತಾಜುದ್ದೀನ್‌ಗೆ ಮೊದಲು ಹೊಡೆದು ಆತನಿಂದ ಮೊಬೈಲ್‌ ಕಿತ್ತುಕೊಂಡಿದ್ದ ಪೇದೆಗಳಿಬ್ಬರು ಹಿರಿಯ ಅಧಿಕಾರಿಗಳಿಗೆ ಅರ್ಧ ಸತ್ಯವನ್ನು ಮಾತ್ರ ಹೇಳಿ, ಉಳಿದರ್ಧ ಸತ್ಯವನ್ನು ಮುಚ್ಚಿಟ್ಟು ಕತೆ ಕಟ್ಟಿದ್ದಾರೆಯೇ ಎಂಬ  ಅನುಮಾನಗಳು ವ್ಯಕ್ತವಾಗಿದ್ದವು. 

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ಇದು ಇಡೀ ಇಲಾಖೆಗೆ ಆದ ಅವಮಾನ. ಅವರು ಹೊಡೆದಿದ್ದು ಅವರಿಬ್ಬರಿಗರಲ್ಲ (ಕಾನ್‌ಸ್ಟೆಬಲ್‌ಗಳು) ಇಡೀ ಪೊಲೀಸ್ ಸಮೂಹಕ್ಕೆ’ ಎಂದಿದ್ದನ್ನು ಸ್ಮರಿಸಬಹುದು. 

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img