Tuesday | June 16, 2026 |

ಇ-ಆಫೀಸ್ ತಂತ್ರಾಂಶ ಅಳವಡಿಸಿಕೊಳ್ಳದ ರಾಜ್ಯಪಾಲರ ಸಚಿವಾಲಯ

Support THE-FILE

spot_img

ಬೆಂಗಳೂರು; ಮುಖ್ಯಮಂತ್ರಿ ಕಚೇರಿಯೂ ಸೇರಿದಂತೆ ರಾಜ್ಯ ಸರ್ಕಾರದ 30ಕ್ಕೂ ಹೆಚ್ಚು ಇಲಾಖೆಗಳು ಇ-ಆಫೀಸ್‌ ತಂತ್ರಾಂಶವನ್ನು ಅಳವಡಿಸಿಕೊಂಡಿದ್ದರೆ, ಸಾಂವಿಧಾನಿಕ ಹುದ್ದೆಯಾದ ರಾಜ್ಯಪಾಲರ ಕಚೇರಿ ಈವರೆವಿಗೂ ಇ-ಆಫೀಸ್, ಎಲ್‍ಎಂಎಸ್ ಮತ್ತು ಎಫ್‍ಎಂಎಸ್ ವ್ಯವಸ್ಥೆಯನ್ನೇ ಅಳವಡಿಸಿಕೊಳ್ಳದಿರುವುದು ಬಹಿರಂಗವಾಗಿದೆ.

ಇ-ಆಫೀಸ್‌ ತಂತ್ರಾಂಶವನ್ನು ಅಳವಡಿಸದ ಕಾರಣ ಈ ಸಚಿವಾಲಯದ ಕಾರ್ಯಭಾರ, ವ್ಯಾಪ್ತಿಯನ್ನು ಸ್ಪಷ್ಟವಾಗಿ ಮೌಲ್ಯಮಾಪನ ಮಾಡಲು ರಾಜ್ಯ ಸರ್ಕಾರಕ್ಕೆ ಈವರೆವಿಗೂ ಸಾಧ್ಯವಾಗಿಲ್ಲ ಎಂಬ ಸಂಗತಿಯೂ ಹೊರಬಿದ್ದಿದೆ.
ಸರ್ಕಾರದ ಬಹುತೇಕ ಇಲಾಖೆಗಳು ಈಗಾಗಲೇ ಇ-ಆಫೀಸ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ನಿಗದಿತ ಕಾಲಾವಧಿಯೊಳಗೆ ಕಡತ ವಿಲೇವಾರಿ ಮಾಡುತ್ತಿವೆ. ಆದರೆ ರಾಜ್ಯಪಾಲರ ಸಚಿವಾಲಯವು ಇ-ಆಫೀಸ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳದ ಕಾರಣಕ್ಕೆ ಸಕಾಲದಲ್ಲಿ ಕಡತ ವಿಲೇವಾರಿ ಆಗದೇ ಬಾಕಿ ಉಳಿದಿರುವುದು ದಾಖಲೆಯಿಂದ ಗೊತ್ತಾಗಿದೆ.

ರಾಜ್ಯಪಾಲರ ಸಚಿವಾಲಯವು ರಾಜ್ಯ ಸರ್ಕಾರದ ಸಚಿವಾಲಯ ಕಾರ್ಯ ಸ್ವರೂಪಕ್ಕಿಂತ ಭಿನ್ನವಾಗಿದೆ. ಆಡಳಿತ, ಮನೆವಾರ್ತೆ, ಲೆಕ್ಕಪತ್ರ ಮತ್ತು ವಿಶ್ವವಿದ್ಯಾಲಯ ವಿಭಾಗ ಹೊಂದಿರುವ ರಾಜ್ಯಪಾಲರ ಸಚಿವಾಲಯ ಈವರೆವಿಗೂ ಇ-ಆಫೀಸ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳದಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಲ್ಲದೆ ರಾಜ್ಯಪಾಲರ ಸಚಿವಾಲಯದ ಆಡಳಿತ ಶಾಖೆಯಲ್ಲಿ ಸರ್ಕಾರದಿಂದ ಸ್ವೀಕೃತವಾಗುವ ವಿಧೇಯಕಗಳು, ಸುಗ್ರೀವಾಜ್ಞೆ ಸಂಬಂಧದ ಕಡತಗಳು, ಉಚ್ಛ ನ್ಯಾಯಾಲಯದ ನ್ಯಾಯಾಧೀಶರು, ಜಿಲ್ಲಾ ನ್ಯಾಯಾಧೀಶರ ನೇಮಕಾತಿ, ವಿಧಾನಪರಿಷತ್ತಿನ ಸದಸ್ಯರ ನೇಮಕಾತಿ, ಲೋಕಸೇವಾ ಆಯೋಗದ ಮತ್ತು ಮಾಹಿತಿ ಹಕ್ಕು ಆಯೋಗದ ಸದಸ್ಯರ ನೇಮಕಾತಿ ಪ್ರಸ್ತಾವನೆಗಳು, ಹಾಗೂ ಇನ್ನಿತರೆ ಇಲಾಖೆಗಳಿಂದ ಸ್ವೀಕೃತವಾಗುವ ರಾಜ್ಯಪಾಲರ ಅನುಮೋದನೆ ಅವಶ್ಯವಿರುವ ಪ್ರಸ್ತಾವನೆಗಳನ್ನು ಪರಿಶೀಲಿಸಲಾಗುತ್ತದೆ. ಇದಲ್ಲದೆ ಇದೇ ಸಚಿವಾಲಯದ ಇನ್ನಿತರೆ ಸಾಮಾನ್ಯ ಆಡಳಿತ ಹಾಗೂ ಸಿಬ್ಬಂದಿ ಸೇವಾ ವಿಷಯಗಳನ್ನು ನಿರ್ವಹಿಸಲಾಗುತ್ತಿದೆ.

ಅದೇ ರೀತಿ ರಾಜ್ಯಪಾಲರ ಸಚಿವಾಲಯದ ಮನೆವಾರ್ತೆ ಶಾಖೆಯಲ್ಲಿ ರಾಜ್ಯಪಾಲರ ಗೃಹ ಕೃತ್ಯ, ಅತಿಥಿಗಳ ಆದರಾತಿಥ್ಯ, ರಾಜಭವನದ ಅತಿಥಿಗಳ ಕೊಠಡಿ, ಕಚೇರಿ ಹಾಗೂ ಪೀಠೋಪಕರಣಗಳ ನಿರ್ವಹಣೆ, ಉಗ್ರಾಣ, ಪಶುಪಾಲನೆ, ತೋಟಗಾರಿಕೆ, 60ಕ್ಕೂ ಹೆಚ್ಚು ಮೀರಿದ ರಾಜಭವನದ ವಸತಿ ಗೃಹಗಳ ಹಂಚಿಕೆ, ಇದಕ್ಕೆ ಸಂಬಂಧಿಸಿದ ವಿಷಯಗಳು, ರಾಜಭವನದ ವಾಹನಗಳ ನಿರ್ವಹಣೆ ಮತ್ತು ಗ್ರೂಪ್ ಡಿ ನೌಕರರ ಸೇವಾ ವಿಷಯಗಳು ನಿರ್ವಹಿಸುತ್ತಿದೆ.

ವಿಶ್ವವಿದ್ಯಾಲಯದ ಶಾಖೆಯಲ್ಲಿ ಉಪ ಕುಲಪತಿ, ಕುಲಸಚಿವ ಸೇರಿ ಇನ್ನಿತರೆ ನೇಮಕಾತಿ ಹಾಗೂ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸುತ್ತಿದೆ. ಅದೇ ರೀತಿ ಲೆಕ್ಕಪತ್ರ ಶಾಖೆಯ ಕಾರ್ಯವು ಹೆಚ್ಚಿದೆ. ಇ-ಆಫೀಸ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳದ ಕಾರಣ ರಾಜ್ಯಪಾಲರ ಸಚಿವಾಲಯದ ಈ ಎಲ್ಲಾ ಶಾಖೆಗಳಲ್ಲಿ ಕಡತಗಳು ಸಕಾಲದಲ್ಲಿ ವಿಲೇವಾರಿ ಆಗುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ತೀರ್ಮಾನಗಳನ್ನು ಕೈಗೊಳ್ಳುವುದರಲ್ಲಿಯೂ ವ್ಯತಿರಿಕ್ತ ಪರಿಣಾಮ ಬೀರಲಾರಂಭಿಸಿವೆ ಎಂದು ಮೂಲಗಳು ತಿಳಿಸಿವೆ.

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕಚೇರಿಗೆ ಸಲ್ಲಿಕೆಯಾಗುವ ಎಲ್ಲಾ ಕಡತಗಳೂ ಮತ್ತು ಪತ್ರಗಳನ್ನು ಇ-ಆಫೀಸ್‌ ತಂತ್ರಾಂಶದ ಮೂಲಕವೇ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚಿಸಿದ್ದನ್ನು ಸ್ಮರಿಸಬಹುದು.

ಅಲ್ಲದೆ ಎಲ್ಲಾ ಸಚಿವರು ಕೂಡ ತಮ್ಮ ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶವನ್ನು ಅಳವಡಿಸಿಕೊಂಡು ಇದರ ಮೂಲಕವೇ ಕಡತ ಮತ್ತು ಪತ್ರಗಳನ್ನು ನಿರ್ವಹಿಸಬೇಕು ಎಂದು ಆದೇಶಿಸಿದ್ದಾರೆ. ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ 2019ರ ಮೇ 1ರಿಂದಲೇ ಇ-ಆಫೀಸ್‌ ತಂತ್ರಾಂಶ ಅಳವಡಿಸುವ ಸಂಬಂಧ ಆದೇಶ ಹೊರಬಿದ್ದಿತ್ತು.

ರಾಜ್ಯಾದ್ಯಂತ ಇರುವ ಎಲ್ಲಾ ಇಲಾಖೆಗಳ ಮುಖ್ಯಸ್ಥರು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿಗಳು, ಜಿಲ್ಲಾ ಪೊಲೀಸ್‌ ಕಚೇರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಈಗಾಗಲೇ ಇ-ಆಫೀಸ್‌ ತಂತ್ರಾಶ ಜಾರಿಯಲ್ಲಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img