Sunday | September 13, 2026 |

ಆಪ್ತ ಕಾರ್ಯದರ್ಶಿ ವಿಶ್ವನಾಥ ಹಿರೇಮಠರಿಗಷ್ಟೇ ಗ್ರೂಪ್‌ ಎ ಹುದ್ದೆ; ಯಡಿಯೂರಪ್ಪರಿಂದ ಸ್ವಜನಪಕ್ಷಪಾತ?

Support THE-FILE

spot_img

ಬೆಂಗಳೂರು; 1998, 99 ಮತ್ತು 2004ನೇ ಸಾಲಿನ ಕೆಎಎಸ್‌ ಅಧಿಕಾರಿಗಳ ನೇಮಕಾತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಮತ್ತು ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿದ್ದ ಯಾವ ತೀರ್ಪನ್ನು ಪಾಲಿಸದೇ ನ್ಯಾಯಾಂಗ ನಿಂದನೆಗೆ ಗುರಿಯಾಗಿರುವ ರಾಜ್ಯ ಸರ್ಕಾರವು, ಲಾಕ್‌ಡೌನ್‌ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಪ್ತ ಕಾರ್ಯದರ್ಶಿ (1)ಯಾಗಿರುವ ವಿಶ್ವನಾಥ ಪಿ ಹಿರೇಮಠ ಅವರಿಗಷ್ಟೇ ಸೀಮಿತಗೊಳಿಸಿ ಗ್ರೂಪ್‌-ಎ (ಕೆಎಎಸ್‌ ಕಿರಿಯ ಶ್ರೇಣಿ) ಹುದ್ದೆಯನ್ನು ಕರುಣಿಸಿದೆ.

ಸರ್ಕಾರದ ಈ ಕ್ರಮ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ. ಈ ಕುರಿತು 2020ರ ಜುಲೈ 13ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ವಿಶ್ವನಾಥ ಪಿ ಹಿರೇಮಠ ಅವರ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು ಸ್ವಜನಪಕ್ಷಪಾತ ಎಸಗಿರುವ ಗಂಭೀರ ಆರೋಪಕ್ಕೆ ಗುರಿಯಾಗಿದ್ದಾರೆ. ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ನ್ಯಾಯಾಂಗ ನಿಂದನೆ ಪ್ರಕರಣವನ್ನು ಉಲ್ಲೇಖಿಸಿರುವ ರಾಜ್ಯ ಸರ್ಕಾರ, ಶಂಕರಗೌಡ ದೊಡ್ಡಮನಿ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ಅಧಿಕಾರಿಯೊಬ್ಬರಿಗೆ ಗ್ರೂಪ್‌ ಎ ಹುದ್ದೆಯನ್ನು ನೀಡದೇ ಕೇವಲ ವಿಶ್ವನಾಥ ಪಿ ಹಿರೇಮಠ ಅವರಿಗಷ್ಟೇ ಗ್ರೂಪ್‌ ಎ ಹುದ್ದೆಯನ್ನು ಅನುಗ್ರಹಿಸಿರುವುದು ಸ್ವಜನಪಕ್ಷಪಾತಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಪ್ರಕರಣದ ವಿವರ

ವಿಶ್ವನಾಥ ಪಿ ಹಿರೇಮಠ ಅವರು ಸೇರಿದಂತೆ ಒಟ್ಟು 5 ಅಭ್ಯರ್ಥಿಗಳನ್ನು 2009ರ ಮಾರ್ಚ್‌ 19ರಂದು ಶಾಖಾಧಿಕಾರಿ ಹುದ್ದೆಗಳಿಗೆ ನೇಮಕ ಮಾಡಿ ಅಧಿಸೂಚನೆ ಹೊರಡಿಸಿತ್ತು. ನಂತರದಲ್ಲಿ ಇವರು ಕೆಎಟಿಯಲ್ಲಿ ಸಲ್ಲಿಸಿದ್ದ ಅರ್ಜಿ( ಸಂಖ್ಯೆ 2121/2010)ಗೆ ಸಂಬಂಧಿಸಿದಂತೆ 2017ರ ಡಿಸೆಂಬರ್‌ 15ರಂದು ತೀರ್ಪು ನೀಡಿತ್ತು. ವಿಶೇಷವೆಂದರೆ ಕೆಎಟಿಯಲ್ಲಿ ಈ ಅರ್ಜಿ 10 ವರ್ಷಗಳಿಂದ ವಿಚಾರಣೆ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಆಕ್ಷೇಪಣೆಯನ್ನೇ ಸಲ್ಲಿಸದೇ ಇರುವುದು ಹಲವು ಅನುಮಾನಗಳಿಗೂ ದಾರಿ ಮಾಡಿಕೊಟ್ಟಿದೆ.

ಅಲ್ಲದೆ ಪ್ರಕರಣವು ಕೆಎಟಿಯ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೆಎಟಿಯ ಆಡಳಿತಾತ್ಮಕ ಸದಸ್ಯರೊಬ್ಬರು ಆಕ್ಷೇಪಣೆ ಎತ್ತಿದ್ದರು. ಹಾಗೆಯೇ ಅವರು ರಜೆ ಮೇಲೆ ತೆರಳಿದ್ದ ಸಂದರ್ಭವನ್ನು ಬಳಸಿಕೊಂಡು ಅಂದಿನ ನ್ಯಾಯಾಂಗ ಸದಸ್ಯರೋರ್ವರು ಸರ್ಕಾರ ಆಕ್ಷೇಪಣೆ ಸಲ್ಲಿಸದೇ ಇದ್ದರೂ ಈ ಪ್ರಕರಣದಲ್ಲಿ ವಿಶ್ವನಾಥ ಪಿ ಹಿರೇಮಠ ಅವರಿಗೆ ಗ್ರೂಪ್‌ ಎ ಹುದ್ದೆಯನ್ನು ನೀಡಲು ತೀರ್ಪು ನೀಡಿದ್ದರು. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೂಡ ಒಬ್ಬ ಪ್ರತಿವಾದಿಯಾಗಿದ್ದರೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈವರೆವಿಗೂ ಮೇಲ್ಮನವಿಯನ್ನು ಸಲ್ಲಿಸಿಲ್ಲ ಎಂದು ಗೊತ್ತಾಗಿದೆ.

2017ರಲ್ಲಿ ಕೆಎಟಿ ನೀಡಿದ್ದ ತೀರ್ಪು 3 ವರ್ಷಗಳಾದರೂ ಅನುಷ್ಠಾನಕ್ಕೆ ಬಂದಿರಲಿಲ್ಲ. ಅಲ್ಲದೆ ಸರ್ಕಾರವೂ ಮೇಲ್ಮನವಿಯನ್ನೂ ಸಲ್ಲಿಸಿರಲಿಲ್ಲ. ಈ ಮಧ್ಯೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಿದ್ದಂತೆ ವಿಶ್ವನಾಥ ಹಿರೇಮಠ ಅವರು 2019ರಲ್ಲಿ ಸರ್ಕಾರದ ವಿರುದ್ಧ ಕರ್ನಾಟಕ ನ್ಯಾಯ ಮಂಡಳಿಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ(104/2019) ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಬಾಕಿ ಇದೆ. ಇದರ ಮಧ್ಯೆಯೇ ರಾಜ್ಯ ಸರ್ಕಾರ ಇವರಿಗೆ ಗ್ರೂಪ್‌ ಎ ಹುದ್ದೆಯನ್ನು ಕರುಣಿಸಿರುವುದು ಸಂಶಯಗಳಿಗೆ ಕಾರಣವಾಗಿದೆ.

ಅಲ್ಲದೆ ಇದೇ ಪ್ರಕರಣದಲ್ಲಿ ರಾಜ್ಯದ ಅಡ್ವೋಕೇಟ್‌ ಜನರಲ್‌ ಅವರು ರಾಜ್ಯ ಸರ್ಕಾರವೇ ಹೊರಡಿಸಿರುವ ರೋಸ್ಟರ್‌ ಬಿಂದುವಿನ ಆದೇಶ ಮತ್ತು ಸುಪ್ರೀಂ ಕೋರ್ಟ್ ಕಾಲಕಾಲಕ್ಕೆ ನೀಡಿರುವ ಆದೇಶಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ.

ಗ್ರೂಪ್‌ ಎ ಹುದ್ದೆಯನ್ನು ಕರುಣಿಸಿರುವ ರಾಜ್ಯ ಸರ್ಕಾರ, ಕೆಪಿಎಸ್‌ಸಿಯ ನೇಮಕಾತಿ ಅಧಿಸೂಚನೆ 2004ರ ನವೆಂಬರ್‌ 4ರ ಪ್ರಕಾರ ಕೆಎಎಸ್‌(ಕಿರಿಯ ಶ್ರೇಣಿ) ಹುದ್ದೆಗೆ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಅನ್ವಯವಾಗಿರುವ ಎಲ್ಲಾ ಸೌಲಭ್ಯಗಳನ್ನು ಅನ್ವಯಿಸಿ ಗ್ರೂಪ್‌ ಎ ಹುದ್ದೆಯನ್ನು ಕರುಣಿಸಿದೆ.
1998, 99 ಹಾಗೂ 2004ನೇ ಸಾಲಿನಲ್ಲಿ ಒಟ್ಟು 60 ಕೆಎಎಸ್‌ ಸಹಾಯಕ ಆಯುಕ್ತರ ಹುದ್ದೆಗಳು ಲಭ್ಯವಿದ್ದವು. ಇದರಲ್ಲಿ ಸಂಖ್ಯಾತಿರಿಕ್ತ ಹುದ್ದೆಯನ್ನು ಸೃಜಿಸಲಾಗಿತ್ತು. ಆದರೆ ವಿಶ್ವನಾಥ ಪಿ ಹಿರೇಮಠ ಅವರು ಈ ಹುದ್ದೆಯನ್ನು ಪಡೆಯಲು ರೋಸ್ಟರ್‌ ಬಿಂದುವಾಗಲಿ, ಅರ್ಹತೆಯನ್ನಾಗಲಿ ಹೊಂದಿರಲಿಲ್ಲ ಎಂದು ದಾಖಲೆಯಿಂದ ತಿಳಿದು ಬಂದಿದೆ.

1995ರಲ್ಲಿ ರೂಪಿತವಾಗಿದ್ದ ಅಂಗವಿಕಲರ ಸಮಾನ ಹಕ್ಕುಗಳ ಕಾಯ್ದೆ 1996ರಲ್ಲಿ ಜಾರಿಗೆ ಬಂದಿತ್ತು. ಈ ಕಾಯ್ದೆ ಪ್ರಕಾರ ವೃಂದ ಬಲದಲ್ಲಿ ಶೇ. 3ಕ್ಕೆ ಕಡಿಮೆ ಇಲ್ಲದಂತೆ ಮೀಸಲಾತಿ ನೀಡಬೇಕಿತ್ತು. ಶೇ. 4ಕ್ಕೆ ಕಡಿಮೆ ಇಲ್ಲದಂತೆ ಮೀಸಲಾತಿ ನೀಡಬೇಕು ಎಂದು 2016ರಲ್ಲಿ ಇದೇ ಕಾಯ್ದೆಗೆ ತಿದ್ದುಪಡಿಯಾಗಿತ್ತು.

ಕರ್ನಾಟಕ ಸರ್ಕಾರ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿ ನಿಯಮಗಳನ್ನು 1997ರ ಜುಲೈ 24ರಲ್ಲಿ ಜಾರಿಗೆ ತಂದಿತ್ತು. 1995ರ ಕಾಯ್ದೆ ನಂತರ 1998 ಮತ್ತು 1999ರಲ್ಲಿ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು. ತದ ನಂತರ 2004ರ ನವೆಂಬರ್‌ 4ರಂದು ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿತ್ತು.

1998ರ ನೇಮಕಾತಿ ಅಧಿಸೂಚನೆಯಲ್ಲಿ 20 ಸಹಾಯಕ ಆಯುಕ್ತರ ಹುದ್ದೆಯು, 1999 ಮತ್ತು 2004ರಲ್ಲೂ ತಲಾ 20 ಸಹಾಯಕ ಆಯುಕ್ತರ ಹುದ್ದೆಗಾಗಿ ಕೆಪಿಎಸ್‌ಸಿ ಅರ್ಜಿ ಕರೆದಿತ್ತು. ಸರ್ವೋಚ್ಛ ನ್ಯಾಯಾಲಯದ ಬೇರೆ ಬೇರೆ ತೀರ್ಪಿನ ಪ್ರಕಾರ 1996ರಿಂದಲೇ ಎಲ್ಲಾ ವೃಂದಗಳಲ್ಲೂ ವಿಕಲಚೇತನರಿಗೆ ಮೀಸಲಾತಿ ನೀಡಲೇಬೇಕಿತ್ತು.

ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ 1999, 2002, 2005ರ ಆದೇಶಗಳಲ್ಲಿ ಪ್ರತಿ ವರ್ಗದ 19ನೇ ರೋಸ್ಟರ್‌ ಬಿಂದುಗಳನ್ನು ವಿವಿಧ ಪ್ರಕಾರದ ಅಂಗವಿಕಲ ಅಭ್ಯರ್ಥಿಗಳಿಗಾಗಿ ಮೀಸಲಿಡಬೇಕಿತ್ತು. ಆದರೆ ರಾಜ್ಯ ಸರ್ಕಾರ ಮೀಸಲಿಟ್ಟಿರಲಿಲ್ಲ. ಸಾಮಾನ್ಯ ವರ್ಗದ 19ನೇ ರೋಸ್ಟರ್‌ ಬಿಂದು 1998ನೇ ಸಾಲಿನಲ್ಲೂ ಬಂದಿತ್ತು. 2004ನೇ ಸಾಲಿಗೆ 19ನೇ ರೋಸ್ಟರ್‌ ಬಿಂದು ಲಭ್ಯಗೊಳಿಸಿರಲಿಲ್ಲ.

ಆದರೂ ಅಡ್ವೋಕೇಟ್‌ ಜನರಲ್‌ ಅವರು ರಾಜ್ಯ ಸರ್ಕಾರದ ನಿಯಮ ಮತ್ತು ಸರ್ವೋಚ್ಛ ನ್ಯಾಯಾಲಯದ ಆದೇಶಗಳನ್ನು ಗಾಳಿಗೆ ತೂರಿ ವಿಶ್ವನಾಥ ಪಿ ಹಿರೇಮಠ ಅವರಿಗೇ ಗ್ರೂಪ್‌ ಎ ಹುದ್ದೆಯನ್ನು ಕರುಣಿಸಬೇಕೆಂದು ನೀಡಿರುವ ಅಭಿಪ್ರಾಯ ಸ್ವಜನಪಕ್ಷಪಾತದ ಆರೋಪಕ್ಕೆ ಹೆಚ್ಚು ಪುಷ್ಠಿ ನೀಡಿದಂತಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img