Saturday | June 20, 2026 |

ಕೋವಿಡ್‌-19; ಆರೋಗ್ಯ ಇಲಾಖೆಗೆ ಬಿಡುಗಡೆಯಾದ ಅನುದಾನ ಖರ್ಚಿನ ಲೆಕ್ಕ ಕೇಳಿದ ಅಂದಾಜು ಸಮಿತಿ

Support THE-FILE

spot_img

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒದಗಿಸಲಾದ ವಿಶೇಷ ಅನುದಾನದಲ್ಲಿ ಖರ್ಚು ಮಾಡಿರುವುದು ಮತ್ತು ಉಳಿಕೆ ಅನುದಾನದ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ವಿಧಾನಸಭೆಯ ಸದಸ್ಯ ಸಿ ಎಂ ಉದಾಸಿ ಅವರ ಅಧ್ಯಕ್ಷತೆಯಲ್ಲಿರುವ ಅಂದಾಜು ಸಮಿತಿ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರಿಗೆ  ಸೂಚಿಸಿದೆ.

ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಆಗಿದೆ ಎನ್ನಲಾಗಿರುವ ಗಂಭೀರ ಸ್ವರೂಪದ ಅಕ್ರಮಗಳ ಕುರಿತು ಸಾರ್ವಜನಿಕ ಲೆಕ್ಕಪತ್ರ ಸಮಿತಿ ವಿಶೇಷ ಲೆಕ್ಕಪರಿಶೋಧನೆ ನಡೆಸಬೇಕು ಎಂದು ಸಿಎಜಿಗೆ ಪತ್ರ ಬರೆದಿರುವ ಬೆನ್ನಲ್ಲೇ ಇದೀಗ ಅಂದಾಜು ಸಮಿತಿ ಕೂಡ ಕೋವಿಡ್‌-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖರ್ಚು ಮಾಡಿರುವ ಹಣದ ಲೆಕ್ಕ ಕೇಳಲಾರಂಭಿಸಿದೆ.

ಈ ಕುರಿತು ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರಿಗೆ 2020ರ ಆಗಸ್ಟ್‌ 12ರಂದು ಪತ್ರ ಬರೆದಿದ್ದಾರೆ. ಈ ಕುರಿತು 15 ಪ್ರಶ್ನಾವಳಿಗಳನ್ನು ನೀಡಿರುವ ಅವರು ಇದೇ 19ರಂದು ನಡೆಯಲಿರುವ ಸಭೆಗೆ ಮಾಹಿತಿ ಒದಗಿಸಬೇಕು ಎಂದು ನಿರ್ದೇಶಿಸಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಕೋವಿಡ್‌-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹೆಚ್ಚಿನ ಉತ್ತೇಜನ ನೀಡಲು ಒದಗಿಸಲಾದ ವಿಶೇಷ ಅನುದಾನದಡಿ ಖರ್ಚಾದ ಹಾಗೂ ಬಾಕಿ ಉಳಿದಿರುವ ಅನುದಾನದ ಇತ್ತೀಚಿನ ಪೂರ್ಣ ಮಾಹಿತಿ ಒದಗಿಸಬೇಕು,’ ಎಂದು ಕಾರ್ಯದರ್ಶಿ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

ಕಳೆದ 3 ವರ್ಷಗಳಲ್ಲಿ ಮೂಲ ಆಯವ್ಯಯ ಅನುದಾನವನ್ನು ಮತ್ತು ಪೂರಕ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಬೇಡಿಕೆ ಎಷ್ಟು, ಅನುದಾನ ಬೇಡಿಕೆಯ ಪ್ರಸ್ತಾವನೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ನೀಡಿದ ಸಮರ್ಥನೆಗಳ ವಿವರಗಳು, ಇದೇ ಅವಧಿಯಲ್ಲಿ ಮೂಲ ಅನುದಾನ, ಪೂರಕ ಅನುದಾನ ಬಿಡುಗಡೆ, ವೆಚ್ಚ, ಹೆಚ್ಚುವರಿ ವೆಚ್ಚ , ಉಳಿತಾಯಗಳಿಗೆ ಕಾರಣಗಳು, ಕೇಂದ್ರದ ಅನುದಾನದ ಲೆಕ್ಕ ಶೀರ್ಷಿಕೆವಾರು ಯೋಜನೆವಾರು ವಿವರಗಳನ್ನು ಒದಗಿಸಬೇಕು ಎಂದು ಕಾರ್ಯದರ್ಶಿ ಸೂಚಿಸಿರುವುದು ಪತ್ರದಿಂದ ಗೊತ್ತಾಗಿದೆ.

ಹಾಗೆಯೇ ಇಲಾಖೆಯ ಆಯವ್ಯಯದಲ್ಲಿ ಒದಗಿಸಲಾದ ಅನುದಾನದ ಸದ್ಬಳಕೆ, ಮಿತವ್ಯಯ, ಆರ್ಥಿಕ ಶಿಸ್ತು, ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಆಡಳಿತದಲ್ಲಿ ದಕ್ಷತೆ, ಸುಧಾರಣೆ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಪೂರ್ಣ ವಿವರವನ್ನೂ ಒದಗಿಸಲು ನಿರ್ದೇಶಿಸಿರುವುದು ತಿಳಿದು ಬಂದಿದೆ.

ಇಲಾಖೆಯಲ್ಲಿರುವ ಸ್ವಂತ ವಾಹನಗಳ ಸಂಖ್ಯೆ, ಇಂಧನ ನಿರ್ವಹಣೆ, ದುರಸ್ತಿಗೆ ವಾರ್ಷಿಕ ವೆಚ್ಚದ ಮೊತ್ತ, ಬಾಡಿಗೆ ಆಧಾರದ ಮೇಲೆ ತೆಗೆದುಕೊಂಡಿರುವ ವಾಹನಗಳು ಮತ್ತು ನೀಡುತ್ತಿರುವ ಬಾಡಿಗೆ ಮೊತ್ತದ (ಕಳೆದ 3 ವರ್ಷಗಳ ಮಾಹಿತಿ) ವಿವರ ಒದಗಿಸಲು ಸೂಚಿಸಿದ್ದಾರೆ.

ಅಂದಾಜು ಸಮಿತಿಯಲ್ಲಿ ಸತೀಶ್‌ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಅಮರೇಗೌಡ ಬಯ್ಯಾಪುರ, ಕೆ ಎಂ ಶಿವಲಿಂಗೇಗೌಡ, ಸಿ ಎನ್‌ ಬಾಲಕೃಷ್ಣ, ಸೋಮಶೇಖರರೆಡ್ಡಿ, ಸಿ ಎಸ್‌ ನಿರಂಜನಕುಮಾರ್‌, ಮಹೇಶ್‌ ಕುಮಠಳ್ಳಿ, ವೀರಣ್ಣ ಚರಂತಿಮಠ್‌, ಶರಣಬಸಪ್ಪ ದರ್ಶಾನಪುರ ಸೇರಿದಂತೆ ಒಟ್ಟು 18 ಮಂದಿ ಸದಸ್ಯರಿದ್ದಾರೆ.

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯು ವೈದ್ಯಕೀಯ ಸಲಕರಣೆ ವೆಚ್ಚ/ವೈದ್ಯಕೀಯ ಸಾಮಗ್ರಿಗಳಿಗೆ ಸಂಬಂಧಿಸಿದಂತೆ ಒಟ್ಟು 316.43 ಕೋಟಿ ರು ಖರ್ಚು ಮಾಡಿದೆ. ಇದರಲ್ಲಿ ರಾಷ್ಟ್ರೀಯ ಅರೋಗ್ಯ ಅಭಿಯಾನದಡಿ 103.27 ಕೋಟಿ, ಎಸ್‌ಡಿಆರ್‌ಎಫ್‌ ಅಡಿ 50.00 ಕೋಟಿ, ವೈದ್ಯಕೀಯ ಸೇವೆ, ಟೆಲಿ ಮೆಡಿಸಿನ್‌ಗಾಗಿ ಎಸ್‌ಡಿಆರ್‌ಎಫ್‌ ಅಡಿ 20.00 ಕೋಟಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಡಿ 109.10 ಕೋಟಿ, ಕೆಡಿಎಲ್‌ಡಬ್ಲ್ಯಎಸ್‌ ಅಡಿ 104.33 ಕೋಟಿಯೂ ಒಳಗೊಂಡಿದೆ.

ಕೋವಿಡ್‌-19ರ ನಿರ್ವಹಣೆಗಾಗಿ ಆರೋಗ್ಯ ಇಲಾಖೆಯು ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ವೇರ್‌ ಹೌಸಿಂಗ್‌ ಸೊಸೈಟಿ ಮೂಲಕ ದುಬಾರಿ ದರದಲ್ಲಿ ಪಿಪಿಇ ಕಿಟ್‌, ಸ್ಯಾನಿಟೈಸರ್‌, ವೆಂಟಿಲೇಟರ್ಸ್‌, ಗ್ಲೋವ್ಸ್‌, ಆರ್‌ಟಿಪಿಸಿಆರ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳನ್ನು ಖರೀದಿಸಿದೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದೆ. ವೈದ್ಯಕೀಯ ಪರಿಕರಗಳ ಖರೀದಿಯಲ್ಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಷ್ಟ್ರಸಮಿತಿಯು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ದೂರು ಸಲ್ಲಿಸಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img