Monday | June 15, 2026 |

ಉಲ್ಲಂಘನೆ; ವನ್ಯಜೀವಿ ಮಂಡಳಿಯಲ್ಲಿ ಪರಿಶಿಷ್ಟ ವರ್ಗಕ್ಕೆ ಸಿಗದ ಪ್ರಾತಿನಿಧ್ಯ

Support THE-FILE

spot_img

ಬೆಂಗಳೂರು; ರಾಜ್ಯ ವನ್ಯಜೀವಿ ಮಂಡಳಿಗೆ ಅಧಿಕಾರೇತರ ಸದಸ್ಯರನ್ನು ಪ್ರಸಕ್ತ ಅವಧಿಗೆ ನಾಮನಿರ್ದೇಶನ ಮಾಡಿರುವ ಬಿಜೆಪಿ ಸರ್ಕಾರ, ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಪ್ರಾತಿನಿಧ್ಯವನ್ನೇ ನೀಡದೇ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿರುವ ಆರೋಪಕ್ಕೆ ಗುರಿಯಾಗಿದೆ.

ಬಿಜೆಪಿಯೊಂದಿಗೆ ನೇರವಾಗಿ ಗುರುತಿಸಿಕೊಂಡರವರಿಗೆ ಮತ್ತು ಸಚಿವರ ಶಿಫಾರಸ್ಸಿಗೆ ಮನ್ನಣೆ ನೀಡಿರುವ ಬೆನ್ನಲ್ಲೇ ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಪ್ರಾತಿನಿಧ್ಯವನ್ನೇ ನೀಡದಿರುವ ವಿಚಾರ ಇದೀಗ ಮುನ್ನೆಲೆಗೆ ಬಂದಿದೆ. ಹಾಗೆಯೇ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್‌ 6(1)ರ ಪ್ರಕಾರ ವನ್ಯಜೀವಿ ಮಂಡಳಿಯಲ್ಲಿ ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಸೇರಿದವರಿರಬೇಕು. ಅದರಂತೆ ಈ ಹಿಂದಿನ ಕಾಂಗ್ರೆಸ್‌ ಸರ್ಕಾರವು ಅವಧಿಯಲ್ಲಿ 10 ಮಂದಿಯಲ್ಲಿ ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಸೇರಿದ್ದ ವಿರಾಜಪೇಟೆ ತಾಲೂಕಿನ ಜಂಗಲ್‌ ಹಾಡಿಯ ಪಿ ಎಂ ಸುಬ್ರು ಎಂಬುವರನ್ನು ಮಂಡಳಿಗೆ ನಾಮನಿರ್ದೇಶನ ಮಾಡಿ ಪ್ರಾತಿನಿಧ್ಯ ನೀಡಲಾಗಿತ್ತು. ಆದರೆ ಬಿಜೆಪಿ ಸರ್ಕಾರವು ಬುಡಕಟ್ಟು ವರ್ಗಕ್ಕೆ ಪ್ರಾತಿನಿಧ್ಯ ನೀಡದೇ ವಂಚಿಸಿದೆ ಎಂಬ ಬಲವಾದ ಆರೋಪವೂ ಕೇಳಿ ಬಂದಿದೆ.

ಮಂಡಳಿಗೆ ವಿಧಾನಸಭೆ ಸದಸ್ಯರಾದ ರವಿಸುಬ್ರಹ್ಮಣ್ಯ ಮತ್ತು ಪೂರ್ಣಿಮಾ ಶ್ರೀನಿವಾಸ್‌ ಅವರನ್ನು ಹಾಗೂ ವಿಧಾನಪರಿಷತ್‌ ಸದಸ್ಯ ಶಾಂತರಾಮ ಸಿದ್ದಿ ಅವರನ್ನು ನಾಮನಿರ್ದೆಶನ ಮಾಡಲಾಗಿದೆ. ಈ ಪೈಕಿ ಶಾಂತರಾಮ ಸಿದ್ದಿ ಅವರನ್ನು ವಿಧಾನಮಂಡಲದ ಕೋಟಾದಡಿಯಲ್ಲಿ ನಾಮನಿರ್ದೇಶನ ಮಾಡಲಾಗಿದೆಯೇ ಹೊರತು ಪರಿಶಿಷ್ಟ ಬುಡಕಟ್ಟು ವರ್ಗದಡಿಯಲ್ಲಿ ನಾಮನಿರ್ದೇಶನ ಮಾಡಿಲ್ಲ ಎಂದು ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದ್ದಾರೆ.

ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಹೊರತುಪಡಿಸಿದಂತೆ ಮಂಡಳಿಗೆ ನಾಮನಿರ್ದೇಶನಗೊಂಡಿರುವವರ ಪೈಕಿ ಚೇತನ್‌ ಬಿ ದೊಡ್ಡಬಳ್ಳಾಪುರ, ಅಲೋಕ್‌ ವಿಶ್ವನಾಥ್‌, ದಿನೇಶ್‌ ಸಿಂಗಿ ಅವರನ್ನು ಬಿಜೆಪಿ ಸಚಿವರು ಶಿಫಾರಸ್ಸು ಮಾಡಿದ್ದಾರೆ. ಉಳಿದಂತೆ ರವಿಸುಬ್ರಹ್ಮಣ್ಯ, ಪೂರ್ಣಿಮಾ ಶ್ರೀನಿವಾಸ್‌ ಬಿಜೆಪಿ ಶಾಸಕರು.

ಬೇಲೇಕೇರಿ ಅದಿರು ರಫ್ತು ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಭಾರತ್‌ ಮೈನ್ಸ್‌ ಅಂಡ್‌ ಮಿನರಲ್ಸ್‌ ಮತ್ತು ಬಿಎಂಎಂ ಇಸ್ಪಾತ್‌ ಲಿಮಿಟೆಡ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ದಿನೇಶ್‌ ಸಿಂಗಿ ಅವರನ್ನು ವನ್ಯಜೀವಿ ಮಂಡಳಿಗೆ ನಾಮನಿರ್ದೇಶನ ಮಾಡಲು ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರು ಮಾಡಿದ್ದ ಶಿಫಾರಸ್ಸು ವಿವಾದಕ್ಕೆ ದಾರಿಮಾಡಿಕೊಟ್ಟಿತ್ತು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img