Wednesday | September 16, 2026 |

ಮರಾಠ ಅಭಿವೃದ್ಧಿ ಪ್ರಾಧಿಕಾರ ಆದೇಶಕ್ಕೆ ತಿದ್ದುಪಡಿ; ಪ್ರಾಧಿಕಾರದ ಬದಲಿಗೆ ನಿಗಮ ಎಂದ ಸರ್ಕಾರ

Support THE-FILE

spot_img

ಬೆಂಗಳೂರು; ಚಳಿಗಾಲದ ಅಧಿವೇಶನ ಹತ್ತಿರವಾದಂತೆ ಮತ್ತು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಸಜ್ಜುಗೊಳ್ಳುತ್ತಿರುವ ಹೊತ್ತಿನಲ್ಲೇ ರಾಜ್ಯ ಬಿಜೆಪಿ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ನಿಗಮ ಎಂದು ಇದೀಗ ತಿದ್ದುಪಡಿ ಮಾಡಿದೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಸರ್ಕಾರ 2020ರ ನವೆಂಬರ್‌ 27ರಂದು ಹೊರಡಿಸಿದ್ದ ಆದೇಶಕ್ಕೆ ಡಿಸೆಂಬರ್‌ 1ರಂದು ತಿದ್ದುಪಡಿ ಆದೇಶ ಹೊರಡಿಸಿದೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಬೆಳಗಾವಿ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾಸಭೆ ಕ್ಷೇತ್ರ ಉಪ ಚುನಾವಣೆ ಹೊಸ್ತಿಲಲ್ಲಿರುವಾಗಲೇ ತರಾತುರಿಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದ ಬಿಜೆಪಿ ಸರ್ಕಾರ 50 ಕೋಟಿ ಘೋಷಣೆ ಮಾಡಿತ್ತು. ಇದು ಕನ್ನಡ ಸಂಘಟನೆಗಳನ್ನು ಕೆರಳಿಸಿತ್ತಲ್ಲದೆ ಲಿಂಗಾಯತ ಸಮುದಾಯದ ಆಕ್ರೋಶಕ್ಕೂ ಕಾರಣವಾಗಿತ್ತು.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಸಮರ್ಥಿಸಿಕೊಂಡಿದ್ದ ಬಿಜೆಪಿ ಸರ್ಕಾರ, ಪ್ರತಿರೋಧ ಹೆಚ್ಚುತ್ತಿದ್ದಂತೆ ಪ್ರಾಧಿಕಾರದ ಬದಲಿಗೆ ನಿಗಮ ಎಂದು ಬದಲಾಯಿಸಿ ಆಕ್ರೋಶವನ್ನು ತಣ್ಣಗಾಗಿಸಲು ಯತ್ನಿಸಿದೆ. ಕರ್ನಾಟಕ ಆರ್ಯವೈಶ್ಯ, ಅಲೆಮಾರಿ/ಅರೆ ಅಲೆಮಾರಿ, ಉಪ್ಪಾರ, ನಿಜಶರಣರ ಅಂಬಿಗರ ಚೌಡಯ್ಯ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿಗೆ ನಿಗಮ ಸ್ಥಾಪಿಸಿರುವುದನ್ನು ಸ್ಮರಿಸಬಹುದು.

ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ನಡುವೆ ಲಾಗಾಯ್ತಿನಿಂದಲೂ ಸಂಘರ್ಷಗಳು ನಡೆಯುತ್ತಿವೆ. ಹೀಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಸಲ್ಲದು ಎಂಬುದು ಕನ್ನಡ ಸಂಘಟನೆಗಳು ಮುಂದೊಡ್ಡಿದ್ದ ವಾದವನ್ನು ಆಲಿಸಿದ್ದ ಬಿಜೆಪಿ ಸರ್ಕಾರ, ಇದು ಮರಾಠ ಭಾಷೆಯ ಪ್ರಾಧಿಕಾರವಲ್ಲ, ಬದಲಿಗೆ ಕರ್ನಾಟಕದಲ್ಲಿ ಮರಾಠಿಗರು ಹಿಂದುಳಿದಿದ್ದಾರೆ. ಅವರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿತ್ತು. ಸರ್ಕಾರದ ಈ ಸಮರ್ಥನೆಯನ್ನು ಒಪ್ಪದ ಕನ್ನಡ ಪರ ಸಂಘಟನೆಗಳು ಇದೇ 5ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img