Monday | September 14, 2026 |

ಇ-ವಿಧಾನಮಂಡಲಕ್ಕೆ 253 ಕೋಟಿ ವೆಚ್ಚ; ಆರ್ಥಿಕ ಸಂಕಷ್ಟದಲ್ಲೂ ದುಂದುವೆಚ್ಚ!

Support THE-FILE

spot_img

ಬೆಂಗಳೂರು; ಪ್ರಾಯೋಗಿಕವಾಗಿ ಇ-ವಿಧಾನ ಮಂಡಲ ಯೋಜನೆಯನ್ನು ಅನುಷ್ಠಾನಗೊಳಿಸದೆಯೇ ನೇರವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ವಿಧಾನಸಭೆ ಸಚಿವಾಲಯವು ಆರ್ಥಿಕ ಸಂಕಷ್ಟದ ಹೊತ್ತಿನಲ್ಲೇ ಕೋಟ್ಯಂತರ ರುಪಾಯಿ ದುಂದುವೆಚ್ಚ ಮಾಡಲು ಮುಂದಾಗಿದೆ.

ಈ ಯೋಜನೆ ಅನುಷ್ಠಾನಕ್ಕೆ ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಯೋಜನೆ ಹೊಣೆಗಾರಿಕೆಯನ್ನು ಕಿಯೋನಿಕ್ಸ್‌ಗೆ ವಹಿಸಲಾಗಿದೆ ಎಂದು ಗೊತ್ತಾಗಿದೆ. ಯೋಜನೆ ಸಂಬಂಧ ಡಿಪಿಆರ್‌ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಕಳೆದ 4 ವರ್ಷದ ಹಿಂದೆ 60.84 ಕೋಟಿ ರು. ಅಂದಾಜು ವೆಚ್ಚದಲ್ಲಿ ಇದೇ ಯೋಜನೆಯನ್ನು ಸಿದ್ಧಪಡಿಸಿದ್ದ ವಿಧಾನಸಭೆ ಸಚಿವಾಲಯ ಇದೀಗ ಅದೇ ಯೋಜನೆಯ ವೆಚ್ಚವನ್ನು 253 ಕೋಟಿ ರು.ಗೆ ಹೆಚ್ಚಳ ಮಾಡಿದೆ. ಸಚಿವಾಲಯದ ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೋವಿಡ್‌ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಹೊತ್ತಿನಲ್ಲಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದಕ್ಕೆ ರಾಜ್ಯ ಸರ್ಕಾರ ನಿರ್ಬಂಧಿಸಿದೆ. ಆದರೂ ವಿಧಾನಸಭೆ ಸಚಿವಾಲಯವು 253 ಕೋಟಿ ರು.ವೆಚ್ಚದಲ್ಲಿ ಇ-ವಿಧಾನಮಂಡಲ್‌ ಯೋಜನೆ ಅನುಷ್ಠಾನಗೊಳಿಸಲು ಮುಂದಾಗಿದೆ. ಅಲ್ಲದೆ ಇ-ವಿಧಾನಮಂಡಲ ಯೋಜನೆ ಕುರಿತು ಶಾಸಕರಿಗೆ ಯಾವುದೇ ಪ್ರಾಥಮಿಕ ತರಬೇತಿಯನ್ನೂ ನೀಡಿಲ್ಲ. ಇ-ಆಫೀಸ್‌ ತಂತ್ರಾಂಶವನ್ನು ಸಚಿವಾಲಯದ ಅಧಿಕಾರಿಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಬಳಸುತ್ತಿಲ್ಲ. ಹೀಗಿರುವಾಗ ಇ-ವಿಧಾನಮಂಡಲ ಯೋಜನೆ ಅನುಷ್ಠಾನಗೊಳಿಸಲು ನಡೆಸುತ್ತಿರುವ ತರಾತುರಿಯ ಹಿಂದೆ ‘ಕಮಿಷನ್‌ ವ್ಯವಹಾರ’ ವೂ ನಡೆದಿದೆ ಎಂಬ ಮಾತುಗಳು ಕೇಳಿ ಬಂದಿವೆ.

ಕಾಗದ ರಹಿತ ವಿಧಾನಮಂಡಲ ವಹಿವಾಟು/ಕಲಾಪ ವ್ಯವಸ್ಥೆ ಮಾಡುವುದು ಮತ್ತು ಕಾಗದಕ್ಕಾಗಿ ವ್ಯಯ ಮಾಡುತ್ತಿರುವ ಸರ್ಕಾರದ ಹಣವನ್ನು ಉಳಿತಾಯ ಮಾಡುವ ಉದ್ದೇಶ ಹೊಂದಿರುವ ಈ ಯೋಜನೆಗೆ ಕೇಂದ್ರ ಸರ್ಕಾರವೇ ಶೇ. 60ರಷ್ಟು ನೀಡುವ ಹಣವನ್ನು ಒದಗಿಸಲಿದೆ. ಆರಂಭಿಕ ಹಂತದಲ್ಲಿ ಕೇಂದ್ರದ ಅನುದಾನವನ್ನು ಬಳಸಿಕೊಳ್ಳುತ್ತಿಲ್ಲ ಎಂದು ತಿಳಿದು ಬಂದಿದೆ. ಪ್ರಾಯೋಗಿಕ ಹಂತದಲ್ಲಿ ಯಶಸ್ಸನ್ನಾಧರಿಸಿ ಯೋಜನೆಯನ್ನು ವಿಸ್ತರಿಸಬೇಕಿದ್ದ ಸಚಿವಾಲಯವು ಅನಗತ್ಯವಾಗಿ ವೆಚ್ಚ ಮಾಡುತ್ತಿರುವುದು ದುಂದುವೆಚ್ಚಕ್ಕೆ ದಾರಿಮಾಡಿಕೊಡಲಿದೆ ಎಂಬ ಮಾತುಗಳು ಕೇಳಿ ಬಂದಿವೆ.

ಯೋಜನೆ ಅನುಷ್ಠಾನದ ಮೊದಲ ಹಂತದಲ್ಲಿ ಸಾಫ್ಟ್‌ವೇರ್‌ಗೆ 39.20 ಕೋಟಿ, ಹಾರ್ಡ್‌ವೇರ್‌, ನೆಟ್‌ವರ್ಕಿಂಗ್‌ಗೆ 1,24,26,14,655 ರು ಸೇರಿ ಒಟ್ಟು 1,63,46,87,002 ರು. ವೆಚ್ಚ ಅಂದಾಜಿಸಲಾಗಿದೆ. ಮೊದಲ ಹಂತಕ್ಕೆ ಖರೀದಿಯಾಗುವ ಸಾಫ್ಟ್‌ವೇರ್‌ ಮತ್ತು ಹಾರ್ಡ್‌ವೇರ್‌ಗೆ ಜಿ ಎಸ್‌ ಟಿ 29.42 ಕೋಟಿ ರು ಭರಿಸಬೇಕು. ಅದೇ ರೀತಿ ಯೋಜನೆ ಅನುಷ್ಠಾನದ 2ನೇ ಹಂತದಲ್ಲಿ 63.15 ಲಕ್ಷ ರು., ಸಾಫ್ಟ್‌ವೇರ್‌ಗೆ ಎಂದು ಅಂದಾಜಿಸಿರುವ ವಿಧಾನಸಭೆ ಸಚಿವಾಲಯವು ಹಾರ್ಡ್‌ವೇರ್‌, ನೆಟ್‌ವರ್ಕಿಂಗ್‌ಗೆ 50.94 ಕೋಟಿ ರು. ಸೇರಿ ಒಟ್ಟು 51,57,50,173 ರು. ಎಂದು ಅಂದಾಜಿಸಿದೆ. 2ನೇ ಹಂತದ ಉಪಕರಣಗಳ ಖರೀದಿಗೆ ಜಿ ಎಸ್‌ ಟಿ ಶುಲ್ಕ 9,28,35,031 ರು. ಎಂದು ಅಂದಾಜಿಸಿದೆ ಎಂದು ಗೊತ್ತಾಗಿದೆ.

ವಿಧಾನಮಂಡಲವನ್ನು ಕಾಗದ ರಹಿತವನ್ನಾಗಿಸುವ ಸಂಬಂಧ 2014ರಲ್ಲಿ ಉಭಯ ಸದನಗಳ ಅಂದಿನ ಪೀಠಾಧ್ಯಕ್ಷರು ಅಧ್ಯಯನ ಸಮಿತಿ ರಚಿಸಿದ್ದರು. ಈ ಸಮಿತಿಯು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿ ಈ ಸಂಬಂಧ ವರದಿಯನ್ನು ನೀಡಿತ್ತು. ಈ ಮಧ್ಯೆ ಬಜೆಟ್‌ ಪೂರ್ವದಲ್ಲಿ ಸುಮಾರು 66.00 ಕೋಟಿ ರು.ಗಳ ಅಂದಾಜು ಪಟ್ಟಿಯನ್ನು ನೀಡಿತ್ತು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img