Wednesday | June 17, 2026 |

ತೇಜಸ್ವಿ ಸೂರ್ಯ ಸೇರಿ 20 ಮಂದಿ ವಿರುದ್ಧ ದೂರು ಸಲ್ಲಿಕೆ; ದಾಖಲಾಗದ ಎಫ್‌ಐಆರ್‌

Support THE-FILE

spot_img

ಬೆಂಗಳೂರು; ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬೈಕ್‌ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಸಂಸದ ತೇಜಸ್ವಿ ಸೂರ್ಯ ಮತ್ತು ಕೆಂಪೇಗೌಡರ ಕಂಚಿನ ಪ್ರತಿಮೆ ಸ್ಥಾಪನೆ ಸಂಬಂಧ ನಡೆದಿದ್ದ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಸ್ಕ್‌, ಸಾಮಾಜಿಕ ಅಂತರ ಸೇರಿದಂತೆ ಇತರೆ ನಿಯಮಗಳನ್ನು ಉಲ್ಲಂಘಿಸಿದ್ದ ಸಚಿವ ಗೋಪಾಲಯ್ಯ ಸೇರಿದಂತೆ ಇನ್ನಿತರೆ ಚುನಾಯಿತ ಜನಪ್ರತಿನಿಧಿಗಳ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್‌ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಪಿ ಸಿ ಮೋಹನ್‌, ಸಚಿವ ಗೋಪಾಲಯ್ಯ ಶಾಸಕ ಕೆ ಶ್ರೀನಿವಾಸಗೌಡ ಸೇರಿ ನಾಲ್ವರು ಶಾಸಕರು ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದನ್ನು ಒಪ್ಪಿಕೊಂಡಿದ್ದರು. ಆದರೆ ಪೊಲೀಸರು ಕೇವಲ ಅತ್ಯಲ್ಪ ಪ್ರಮಾಣದ ದಂಡ ಪಾವತಿಸಿ ಜೈಲು ಶಿಕ್ಷೆಯಿಂದ ಪಾರು ಮಾಡಿದ್ದರು. ಹೀಗಾಗಿ ಜನಾಧಿಕಾರ ಸಂಘರ್ಷ ಪರಿಷತ್‌ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರಡಿಯಲ್ಲಿ ದೂರು ದಾಖಲಿಸಿದೆ. ದೂರಿನ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಜನಾಧಿಕಾರ ಸಂಘರ್ಷ ಪರಿಷತ್‌ 2021ರ ನವೆಂಬರ್‌ 3ರಂದು ವೈಯಾಲಿಕಾವಲ್‌ ಠಾಣೆಗೆ ದೂರು ಸಲ್ಲಿಸಿದೆ. ದೂರು ಸಲ್ಲಿಕೆಯಾಗಿ ಆರು ದಿನಗಳಾದರೂ ಠಾಣಾಧಿಕಾರಿ ಎಫ್‌ಐಆರ್‌ ದಾಖಲಿಸಿಲ್ಲ. ಅಲ್ಲದೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್‌ ಠಾಣೆಗೂ ಹಲವು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದರೂ ಅಲ್ಲಿನ ಠಾಣಾಧಿಕಾರಿಯೂ ಎಫ್‌ಐಆರ್‌ ದಾಖಲಿಸಿಲ್ಲ ಎಂದು ತಿಳಿದು ಬಂದಿದೆ.

ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್‌ ನಿಯಂತ್ರಣ ಮಾರ್ಗಸೂಚಿಗಳನ್ನು ಉಲ್ಲಂಘನೆ ಆರೋಪದಡಿಯಲ್ಲಿ ರಾಜ್ಯದಾದ್ಯಂತ 5,846 ಮಂದಿ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ್ದ ಪೊಲೀಸರು, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಸಚಿವ ಗೋಪಾಲಯ್ಯ, ಸಂಸದ ಪಿ ಸಿ ಮೋಹನ್‌ , ಇನ್ನಿತರೆ ಶಾಸಕರೂ ಸಹ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸದೇ ಅವರನ್ನು ಈ ಪ್ರಕರಣಗಳಿಂದ ಪಾರು ಮಾಡಲು ಮುಂದಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ತಪ್ಪೆಸಗಿರುವವರಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 5 ರಡಿಯಲ್ಲಿ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಹೀಗಾಗಿಯೇ ಚುನಾಯಿತ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿದ್ದ ಸರ್ಕಾರವು ಈ ಅಧಿನಿಯಮವನ್ನು ಪರಿಷ್ಕೃತಗೊಳಿಸಿ ಅವರನ್ನು ಜೈಲು ಶಿಕ್ಷೆಯಿಂದ ಪಾರು ಮಾಡಿತ್ತು. ಆದರೀಗ ಜನಾಧಿಕಾರ ಸಂಘರ್ಷ ಪರಿಷತ್‌ ಇದನ್ನು ಕಾನೂನಿನ ಚೌಕಟ್ಟಿನಡಿಯಲ್ಲಿ ಪ್ರಕರಣವನ್ನು ಮುಂದುವರೆಸಿದೆ.

ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ಪರಿಷ್ಕೃತವಾಗುವ ಮುನ್ನವೇ ಚುನಾಯಿತ ಜನಪ್ರತಿನಿಧಿಗಳು ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ದಂಡವನ್ನೂ ಪಾವತಿಸಿರುವುದರಿಂದ ಈ ಅಧಿನಿಯಮದಡಿ ಕ್ರಮ ಕೈಗೊಳ್ಳಬೇಕು ಎಂದು ಜನಾಧಿಕಾರ ಸಂಘರ್ಷ ಪರಿಷತ್‌ ದೂರಿನಲ್ಲಿ ವಿವರಿಸಿದೆ.

ಅಧಿನಿಯಮದಲ್ಲೇನಿದೆ?

ಇದರ ಪ್ರಕಾರ ಯಾವೊಬ್ಬ ವ್ಯಕ್ತಿ, ಸಂಸ್ಥೆ ಅಥವಾ ಕಂಪನಿಯು 4ನೇ ಪ್ರಕರಣದ ಯಾವುದೇ ಉಪಬಂಧಗಳನ್ನು ಈ ಅಧಿನಿಯಮದಡಿಯಲ್ಲಿ ಮಾಡಲಾಧ ನಿಯಮಗಳು, ವಿನಿಮಯ ಅಥವಾ ಆದೇಶವನ್ನು ಉಲ್ಲಂಘಿಸತಕ್ಕದ್ದಲ್ಲ ಅಥವಾ ಅವಿಧೇಯತೆಯನ್ನು ತೋರಿಸತಕ್ಕದ್ದಲ್ಲ ಎಂದು ಅಧಿನಿಯಮದಲ್ಲಿ ಹೇಳಲಾಗಿದೆ.

ಅದೇ ರೀತಿ ಈ ಅಧಿನಿಯಮದ ಅಥವಾ ಅದರಡಿಯಲ್ಲಿ ಮಾಡಲಾದ ನಿಯಮಗಳೂ, ವಿನಿಯಮಗಳು ಅಥವಾ ಆದೇಶಗಳ ಯಾವುದೇ ಉಪಬಂಧಗಳ ಅನುಸರಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಥವಾ ಕಾರ್ಯನಿರ್ವಹಿಸುತ್ತಿರುವನೆಂದು ಅಥವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಯಾವೊಬ್ಬ ಅಧಿಕಾರಿ ಅಥವಾ ಯಾವೊಬ್ಬ ಸಾರ್ವಜನಿಕ ನೌಕರನಿಗೆ ಯಾವೊಬ್ಬ ವ್ಯಕ್ತಿಯು ಅಡಚಣೆಯನ್ನು ಮಾಡತಕ್ಕದ್ದಲ್ಲ ಎಂದು ವಿವರಿಸಲಾಗಿದೆ.

ಹಾಗೆಯೇ (1) (2) ಅಥವಾ (3)ನೇ ಉಪಪ್ರಕರಣದ ಯಾವುದೇ ಉಪಬಂಧಗಳನ್ನು ಉಲ್ಲಂಘಿಸುವ ಯಾವೊಬ್ಬನು ಅಪರಾಧ ನಿರ್ಣಯವಾದ ಮೇಲೆ ಮೂರು ತಿಂಗಳಿಗೆ ಕಡಿಮೆಯಿಲ್ಲ ಆದರೆ ಐದು ವರ್ಷಗಳಿಗೆ ವಿಸ್ತರಿಸಬಹುದಾದ ಅವಧಿಯ ಕಾರವಾಸದೊಂದಿಗೆ ಮತ್ತುಐವತ್ತು ಸಾವಿರ ರು.ಗಳಿಗೆ ಕಡಿಮೆಯಲ್ಲ ಆದರೆ ಎರಡು ಲಕ್ಷ ರೂಪಾಯಿಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗತಕ್ಕದ್ದು ಎಂದಿದೆ.

ಈ ಅಧಿನಿಯಮವು ಚಾಲ್ತಿಯಲ್ಲಿರುವಾಗಲೇ ಸಂಸದ ತೇಜಸ್ವಿ ಸೂರ್ಯ, ಪಿ ಸಿ ಮೋಹನ್‌, ಸಚಿವ ಗೋಪಾಲಯ್ಯ, ಕೆ ಶ್ರೀನಿವಾಸಗೌಡ, ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಪ್ಪ, ವಿಧಾನಪರಿಷತ್‌ ಸದಸ್ಯ ರಮೇಶ್‌ಗೌಡ, ಮಾಜಿ ಶಾಸಕ ಎಲ್‌ ಆರ್‌ ಶಿವರಾಮೇಗೌಡ ಮತ್ತು ಇತರರು ಉಲ್ಲಂಘಿಸಿದ್ದರು. ಆದರೆ ಸಕ್ಷಮ ಪ್ರಾಧಿಕಾರವು ಇವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದರು. ಅಲ್ಲದೆ ಈ ಪ್ರಕರಣವು ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದ್ದಾಗಲೇ ಇವರ ರಕ್ಷಣೆಗೆ ಧಾವಿಸಿದ್ದ ಸರ್ಕಾರವು ಅಧಿನಿಯಮವನ್ನು ಪರಿಷ್ಕೃತಗೊಳಿಸಿತ್ತು.

ತೇಜಸ್ವಿ ಸೂರ್ಯ ಪ್ರಕರಣದ ವಿವರ

ಸಂಸದ ತೇಜಸ್ವಿ ಸೂರ್ಯ ಅವರು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾದ ನಂತರ 2020ರ ಸೆಪ್ಟಂಬರ್‌ 30ರಂದು ತಮ್ಮ ಬೆಂಬಲಿಗರೊಂದಿಗೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರೆದ ವಾಹನದಲ್ಲಿ ಮೆರವಣಿಗೆಯೊಂದಿಗೆ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಮಧ್ಯಾಹ್ನ 15-15ರಿಂದ 16-30ರ ಮಧ್ಯೆ ಬಂದಿದ್ದರು.

ಆ ಸಮಯದಲ್ಲಿ ವೈಯಾಲಿಕಾವಲ್‌ ಪೊಲೀಸ್‌ ಠಾಣೆ ಸರಹದ್ದಿನ ರಸ್ತೆಯಲ್ಲಿ ತೇಜಸ್ವಿ ಸೂರ್ಯ  ವರ ಬೆಂಬಲಿಗರು ಸುಮಾರು 100 ಜನರು ಗುಂಪು ಸೇರಿದ್ದು ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ಆ ಜನರಿಗೆ ಕೋವಿಡ್‌-19 ಹರಡದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕೆಂದು ಮತ್ತು ಎಲ್ಲರೂ ಸರಿಯಾದ ರೀತಿಯಲ್ಲಿ ಮಾಸ್ಕ್‌ ಧರಿಸಬೇಕು ಎಂದು ತಿಳಿಸಿದ್ದರೂ ಅವರೆಲ್ಲರೂ ನಿರ್ಲಕ್ಷ್ಯ ವಹಿಸಿದ್ದರು ಎಂದು ವೈಯಾಲಿಕಾವಲ್‌ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಅವರು ನ್ಯಾಯಾಲಯಕ್ಕೆ 2020ರ ನವೆಂಬರ್‌ 4ರಂದು ವರದಿ ಮಾಡಿದ್ದರು.

ಅಷ್ಟೇ ಅಲ್ಲದೆ ತೇಜಸ್ವಿ ಸೂರ್ಯ ಮತ್ತು ಬಿಜೆಪಿ ಪಕ್ಷದ ಇತರೆ ಕಾರ್ಯಕರ್ತರುಗಳು 2020ರ ಸೆಪ್ಟಂಬರ್‌ 30ರಂದು ನಡೆದಿದ್ದ ಬೈಕ್‌ ಜಾಥಾದಲ್ಲಿ ಮಾಸ್ಕ್‌ ಧರಿಸಿರಲಿಲ್ಲ ಮತ್ತು ಸಾಮಾಜಿಕ ಅಂತರ ಕಾಪಾಡಿರಲಿಲ್ಲ. ಆದರೂ ಪೊಲೀಸ್‌ ಅಧಿಕಾರಿಗಳು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರಡಿ ಕ್ರಮ ಕೈಗೊಂಡಿಲಿಲ್ಲ. ಬದಲಿಗೆ ಅತ್ಯಲ್ಪ ಪ್ರಮಾಣದ ಅಂದರೆ 250 ರು. ದಂಡ ವಿಧಿಸಿದ್ದರು. ತೇಜಸ್ವಿ ಸೂರ್ಯ (ರಶೀದಿ ಸಂಖ್ಯೆ; EZ202011070511428603)ಸೇರಿ ಬಿಜೆಪಿಯ ಇತರೆ ಕಾರ್ಯಕರ್ತರು 250 ರು. ದಂಡ ಪಾವತಿಸಿದ್ದರು.

ಅದೇ ರೀತಿ ಕೆಂಪೇಗೌಡರ ಕಂಚಿನ ಪ್ರತಿಮೆ ಸ್ಥಾಪನೆ ಸಂಬಂಧ ನಡೆದಿದ್ದ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚುನಾಯಿತ ಜನಪ್ರತಿನಿಧಿಗಳು ಮಾಸ್ಕ್‌, ಸಾಮಾಜಿಕ ಅಂತರ ಸೇರಿದಂತೆ ಇತರೆ ನಿಯಮಗಳನ್ನು ಉಲ್ಲಂಘಿಸಿರುವ ಆರೋಪಕ್ಕೆ ಗುರಿಯಾಗಿದ್ದರು. ಈ ಸಂಬಂಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್‌ ಠಾಣೆಯ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಅವರು ಹೈಕೋರ್ಟ್‌ಗೆ ಪಾಲನಾ ವರದಿ ಸಲ್ಲಿಸಿದ್ದರು.

ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಕೋಲಾರ ಶಾಸಕ ಕೆ ಶ್ರೀನಿವಾಸಗೌಡ, ಸಚಿವ ಕೆ ಗೋಪಾಲಯ್ಯ (ಮಹಾಲಕ್ಷ್ಮಿ ಲೇಔಟ್‌ ಶಾಸಕ), ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಪ್ಪ, ಸಂಸದ ಪಿ ಸಿ ಮೋಹನ್‌, ವಿಧಾನಪರಿಷತ್‌ ಸದಸ್ಯ ರಮೇಶ್‌ಗೌಡ, ಮಾಜಿ ಶಾಸಕ ಎಲ್‌ ಆರ್‌ ಶಿವರಾಮೇಗೌಡ, ಬಿಜೆಪಿ ಮುಖಂಡ ಆನಂದ್‌, ಬೆಂಗಳೂರಿನ ರಂಝಿತ್‌, ಬಿಐಎಲ್ ಉದ್ಯೋಗಿ ಬಿರಾದಾರ್‌, ಮೋಹನ್‌ ಆರಾಧ್ಯ, ರೂಪಿಣಿ ಅವರ ವಿರುದ್ಧ ಕ್ರಮ ಜರುಗಿಸಿದ್ದರು.

ಒಟ್ಟು 12 ಮಂದಿ ವಿರುದ್ಧ 2020ರ ಅಕ್ಟೋಬರ್‌ 15ರಂದು ಪ್ರಕರಣ ದಾಖಲಿಸಿಕೊಂಡು ಅವರಿಂದ 1,200 ರು. ದಂಡ ಪಾವತಿಸಿಕೊಂಡಿದ್ದರು. ಇದೇ ಅವಧಿಯಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದರು ಎಂಬ ಆರೋಪದಡಿಯಲ್ಲಿ ರಾಜ್ಯಾದಾದ್ಯಂತ ಒಟ್ಟು 2,52,904 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿತ್ತು.

ಈ ಪೈಕಿ 12,344 ಮಂದಿಯನ್ನು ಬಂಧಿಸಲಾಗಿತ್ತು. 1,13,154 ವಾಹನಗಳನ್ನು ಜಫ್ತಿ ಮಾಡಿಕೊಳ್ಳಲಾಗಿತ್ತಲ್ಲದೆ 5,846 ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು. ಅದೇ ರೀತಿ 7,38,74,890 ರು. ಗಳ ದಂಡವನ್ನೂ ವಿಧಿಸಲಾಗಿತ್ತು ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮಾಹಿತಿಯನ್ನು ನೀಡಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img