Sunday | June 14, 2026 |

ನೆಹರು ಮಹಾಪುರುಷ; ‘ಫರೋಸ್‌ ಇನ್‌ ಎ ಫೀಲ್ಡ್‌’ನಲ್ಲಿ ಗೌಡರ ಬಣ್ಣನೆ, ಬಿಜೆಪಿಗೆ ತಿರುಗೇಟು

Support THE-FILE

spot_img

ಬೆಂಗಳೂರು; ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿದ ಕಳೆದ 7 ವರ್ಷಗಳಲ್ಲಿ ಮಾಜಿ ಪ್ರಧಾನಿ ಜವಹರ್​ಲಾಲ್ ನೆಹರೂ ವಿರುದ್ಧ ಅನೇಕ ವಾಗ್ದಾಳಿಗಳು ನಡೆದಿವೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಸಂಸತ್​ನಲ್ಲಿ ಇಂದಿನ ಎಲ್ಲಾ ಸಮಸ್ಯೆಗಳಿಗೆ ಮಾಜಿ ಪ್ರಧಾನಿ ಜವಹರ್​ಲಾಲ್ ನೆಹರೂ ಅವರೇ ಕಾರಣ ಎಂದು ಹೇಳಿಕೆ ನೀಡಿದ್ದು ಸಹ ಸಾಕಷ್ಟು ಟೀಕೆಗೆ ಗುರಿಯಾಗಿರುವ ಬೆನ್ನಲ್ಲೇ ‘ಯಾರೇ ಪ್ರಧಾನಿ ಹುದ್ದೆಗೇರಿದರೂ ನೆಹರು ಎಂಬ ಮಹಾಪುರುಷನ ನೆರಳಿನಲ್ಲಿ ಕೆಲಸ ಮಾಡಬೇಕಾಗುತ್ತದೆ,’ ಎಂದು ಮಾಜಿ ಪ್ರಧಾನಿ ದೇವೇಗೌಡರು ಬಣ್ಣಿಸಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರು ಜವಹರ್‌ ಲಾಲ್‌ ನೆಹರೂ ಅವರ ಕುರಿತು ನೀಡಿರುವ ಅಭಿಪ್ರಾಯವು  ಲೇಖಕ ಸುಗತ ಶ್ರೀನಿವಾಸರಾಜು ಅವರು ರಚಿಸಿರುವ ‘ಫರೋಸ್‌ ಇನ್‌ ಎ ಫೀಲ್ಡ್‌’ ನ ಪುಸ್ತಕದಲ್ಲಿ ಉಲ್ಲೇಖವಾಗಿದೆ.

ಫರೋಸ್‌ ಇನ್‌ ಎ ಫೀಲ್ಡ್‌’ ನಲ್ಲಿ  ನೆಹರು ಗಾಂಧಿ ಪರಿವಾರದ ಕುರಿತಾಗಿ ದೊಡ್ಡ ಅಧ್ಯಾಯದಲ್ಲಿ ಇದು ವಿಸ್ತೃತವಾಗಿ ಮೂಡಿಬಂದಿದೆ. ನೆಹರು ಕುರಿತು ಗೌಡರು ವ್ಯಕ್ತಪಡಿಸಿರುವ ಅಭಿಪ್ರಾಯ ಇರುವ ಕೃತಿಯ ಅಧ್ಯಾಯವೊಂದರ ತುಣಕೊಂದನ್ನು ಲೇಖಕ ಸುಗತ ಶ್ರೀನಿವಾಸರಾಜು ಅವರು ಟ್ವೀಟ್‌ ಮಾಡಿದ್ದಾರೆ.

‘ಪಂಡಿತ್‌ ನೆಹರು ಅವರು ಒಂದು ದೊಡ್ಡ ಮನೆತನದಿಂದ ಬಂದವರು. ಪ್ರಕಾಂಡ ಪಂಡಿತರು. ಆದರೆ ನಾನು ಸಾಧಾರಣ ವ್ಯಕ್ತಿ. ಅವರ ಹೆಸರಿರುವ ಕುರ್ಚಿಯ ಮುಂದೆ ನಿಂತಾಗ ನಾನು ಪೂರ್ವ ಜನ್ಮದಲ್ಲಿ ಪುಣ್ಯ ಮಾಡಿರಬೇಕು ಎಂದು ನನ್ನ ತಲೆಯಲ್ಲಿ ಹರಿದು ಹೋಯಿತು. ಯಾರೇ ನೆಹರು ಅವರ ಕುರ್ಚಿಯಲ್ಲಿ ಕೂತಾಗ ಆ ದೊಡ್ಡ ಮನುಷ್ಯನ ನೆರಳಿನಲ್ಲಿಯೇ ಕೆಲಸ ಮಾಡಬೇಕಾಗಿ ಬರುತ್ತದೆ. ಅವರದ್ದು ಅಷ್ಟು ದೊಡ್ಡ ವ್ಯಕ್ತಿತ್ವ. ಅವರ ದೊಡ್ಡತನವನ್ನು ನಾವು ಒಪ್ಪಿಕೊಂಡರೆ ಮುಂದುವರೆದು ನಾವು ಒಳ್ಳೆಯ ಕೆಲಸವನ್ನು ಮಾಡಬಹುದು. ಅದನ್ನು ಬಿಟ್ಟು ಅವರ ವ್ಯಕ್ತಿತ್ವವನ್ನು, ಚರಿತ್ರೆಯಲ್ಲಿ ಅವರ ಸ್ಥಾನವನ್ನು ನಾವು ಪ್ರಶ್ನಿಸುತ್ತ ಹೋದರೆ ಜೀವನ ಪರ್ಯಂತ ಬರೀ ಅದನ್ನೇ ಮಾಡಬೇಕಾಗುತ್ತದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ನೆಹರೂ ತರಹದ ದಿಗ್ಗಜನನ್ನು ನಡೆಸಿಕೊಂಡ ರೀತಿ, ಹೀಯಾಳಿಸಿದ ರೀತಿ ಬಿಂಬಿಸಿದ ರೀತಿ ನನಗೆ ತುಂಬಾ ಬೇಸರ ಮತ್ತು ಸಿಟ್ಟನ್ನು ಉಂಟು ಮಾಡಿದೆ.’ ಎಂದು ಎಂದು ಮಾಜಿ ಪ್ರಧಾನಿ ದೇವೇಗೌಡರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ನೆಹರು ಕುರಿತಾಗಿ ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಅಭಿಪ್ರಾಯವು ನೆಹರೂ ಅವರನ್ನು ದ್ವೇಷಿಸುತ್ತಿದ್ದ ಬಿಜೆಪಿಗೆ ತಿರುಗೇಟು ನೀಡಿದಂತಾಗಿದೆ.

ವಿಭಜಿತ ಭಾರತವನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವ ಮೂಲಕ, ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ದೊಡ್ಡ ತಪ್ಪು ಮಾಡಿದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದರು. ಲೋಕಸಭೆಯಲ್ಲಿ ಮಾತನಾಡಿದ್ದ ಅಮಿತ್ ಶಾ, ಕಾಶ್ಮೀರದ ಇಂದಿನ ಬಿಕ್ಕಟ್ಟು ಮತ್ತು ಸಮಸ್ಯೆಗಳಿಗೆ ನೆಹರೂ ಅವರ ನೀತಿಗಳೇ ಕಾರಣ ಎಂದು ದೂರಿದ್ದರು.

ಧರ್ಮದ ಆಧಾರದ ಮೇಲೆ ದೇಶ ವಿಭಜನೆ ಮಾಡಿದ್ದು ಐತಿಹಾಸಿಕ ತಪ್ಪು ಎಂದ ಶಾ, ದೇಶದ ಮೊದಲ ಪ್ರಧಾನಿಯ ತಪ್ಪು ನೀತಿಗಳಿಂದಾಗಿ ದೇಶ ಇಂದಿಗೂ ಬೆಲೆ ತೆರುತ್ತಿದೆ ಎಂದು ಹರಿಹಾಯ್ದಿದ್ದರು. ಇನ್ನು ನೆಹರೂ ಹೆಸರು ಪ್ರಸ್ತಾಪವಾಗುತ್ತಿದ್ದಂತೇ ಕೆರಳಿದ ಕಾಂಗ್ರೆಸ್ ಸದಸ್ಯರು, ದೇಶ ಕಟ್ಟಿದ ಮಹಾನ್ ನಾಯಕನಿಗೆ ಗೃಹ ಸಚಿವರು ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರೂ ಅವರನ್ನು ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಲವು ಧುರೀಣರು ದ್ವೇಷಕಾರಕ ಭಾಷಣಗಳನ್ನು ಮಾಡಿದ್ದರು. ಶಿಕ್ಷಣ ಸಚಿವಾಲಯದ ಮಂಡಳಿ ಹೊರತಂದಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪೋಸ್ಟರ್‌ನಲ್ಲಿ ಮಾಜಿ ಪ್ರಧಾನಿ ನೆಹರೂ ಅವರ ಭಾವಚಿತ್ರವನ್ನು ಕೈಬಿಟ್ಟಿದ್ದನ್ನು ಸ್ಮರಿಸಬಹುದು.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ, ತಮಿಳುನಾಡಿನ ಜೆ ಜಯಲಲಿತಾ, ಮಹಾರಾಷ್ಟ್ರದ ಶರದ್‌ ಪವಾರ್‌, ಉತ್ತರ ಪ್ರದೇಶದ ಮುಲಾಯಂ ಸಿಂಗ್‌ ಯಾದವ್‌ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಮಾಜಿ ಪ್ರಧಾನಿ ನರಸಿಂಹರಾವ್‌ ಅವರು ತಮ್ಮ ಬಳಿ ಇರಿಸಿಕೊಂಡಿದ್ದರು ಎಂಬ ಸ್ಪೋಟಕ ಮಾಹಿತಿಯನ್ನು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ಕುರಿತಾದ ಪುಸ್ತಕವು ಈಗಾಗಲೇ ಬಹಿರಂಗಗೊಳಿಸಿದೆ.

ಖ್ಯಾತ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಎಚ್‌ ಡಿ ದೇವೇಗೌಡ ಅವರ ಕುರಿತು ಇಂಗ್ಲಿಷ್‌ನಲ್ಲಿ ರಚಿಸಿರುವ ಫರೋಸ್‌ ಇನ್‌ ಎ ಫೀಲ್ಡ್‌ ಕೃತಿಯಲ್ಲಿ ಹಲವು ಸ್ಫೋಟಕ ಮಾಹಿತಿಗಳಿವೆ. ಪೆಂಗ್ವಿನ್ ರಾಂಡಮ್ ಹೌಸ್‌ ಪ್ರಕಟಿಸಿರುವ ಈ ಕೃತಿ ಸದ್ಯದಲ್ಲೇ ಬಿಡುಗಡೆಯಾಗಲಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img