Sunday | September 13, 2026 |

ನೃಪತುಂಗ ವಿವಿ ಕಾಮಗಾರಿ; ಕೆಟಿಪಿಪಿ ಕಾಯ್ದೆ ಉಲ್ಲಂಘನೆ, ಟೆಂಡರ್‌ ಮೊತ್ತಕ್ಕಿಂತ ಹೆಚ್ಚಳ ನಮೂದು

Support THE-FILE

spot_img

ಬೆಂಗಳೂರು; ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯದ ಹಾಲಿ ಇರುವ ಕಟ್ಟಡ ನವೀಕರಣ ಮತ್ತು ಹೊಸ ಕಟ್ಟಡ ನಿರ್ಮಾಣ ಕಾಮಗಾರಿಗೆ ಟೆಂಡರಿಗಿಟ್ಟ ಮೊತ್ತಕ್ಕಿಂತ ಹೆಚ್ಚಿನ ಮೊತ್ತ ನಮೂದಿಸಿರುವುದು ಸೇರಿದಂತೆ ಹಲವು ಪ್ರಮುಖ ಅಂಶಗಳಿಗೆ ಸಚಿವ ಸಂಪುಟದ ಅನುಮೋದನೆಯಿಲ್ಲದೆಯೇ ಆದೇಶ ಹೊರಡಿಸಿರುವುದು ಇದೀಗ ಬಹಿರಂಗವಾಗಿದೆ.

 

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಈ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮುಚ್ಛಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಮೂರು ತಿಂಗಳ ಅಂತರದಲ್ಲೇ ಕಟ್ಟಡ ನವೀಕರಣ, ಹೊಸ ಕಟ್ಟಡ ಕಾಮಗಾರಿ ಪ್ರಕ್ರಿಯೆಗಳಲ್ಲಿ ಬಹುದೊಡ್ಡ ಅಕ್ರಮ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೆಲ ಟಿಪ್ಪಣಿ ಹಾಳೆಗಳು (ಕಡತ ಸಂಖ್ಯೆ; ED/137/HPU/2021-ED) ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ತಮ್ಮ ಸಂಬಂಧಿಯೊಬ್ಬರ ಸೇರಿದ ಕಟ್ಟಡ ನಿರ್ಮಾಣ ಕಂಪನಿಯೊಂದಕ್ಕೆ ವಿಶ್ವವಿದ್ಯಾಲಯದ ಕಾಮಗಾರಿ ಗುತ್ತಿಗೆ ನೀಡುವ ಉದ್ದೇಶದಿಂದಲೇ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಗುರುತರ ಆಪಾದನೆಗೂ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರು ಗುರಿಯಾಗಿದ್ದಾರೆ.

 

ಟೆಂಡರಿಗಿಟ್ಟ ಮೊತ್ತಕ್ಕಿಂತ ಶೇಕಡವಾರು ಪ್ರಮಾಣದಲ್ಲಿ ಹೆಚ್ಚಿದ್ದರೂ ಅದಕ್ಕೆ ಉನ್ನತ ಶಿಕ್ಷಣ ಇಲಾಖೆಯು ಯಾವುದೇ ಸೂಕ್ತ ಸಮರ್ಥನೆಯನ್ನೂ ನೀಡಿಲ್ಲ. ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸುವಾಗ ಪ್ರಮುಖ ಅಂಶಗಳಿಗೆ ಅನುಮೋದನೆಯನ್ನೂ ಕೋರಿಲ್ಲ. ಅಂದಾಜು ಪಟ್ಟಿಗಳಿಗೆ ಸಕ್ಷಮ ಅಧಿಕಾರಿಯ ಸಹಿಯೊಂದಿಗೆ ದೃಢೀಕರಣವೂ ಆಗಿಲ್ಲ. ಒಟ್ಟಾರೆ ಇಡೀ ಕಾಮಗಾರಿ ಸಂಬಂಧ ನಡೆದಿರುವ ಮೂಲ ಪ್ರಕ್ರಿಯೆಗಳಲ್ಲಿಯೇ ಅಕ್ರಮಗಳು ನಡೆದಿವೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿವೆ.

 

ಉನ್ನತ ಶಿಕ್ಷಣ ಇಲಾಖೆ ಅಧೀನದಲ್ಲಿ ಬರುವ ನೃಪತುಂಗ ವಿಶ್ವವಿದ್ಯಾಲಯ ಕಟ್ಟಡ ನವೀಕರಣ ಮತ್ತು ಹೊಸ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ನೇರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರ್‌ ಘಟಕಕ್ಕೆ ವರ್ಗಾಯಿಸಿರುವುದೇ ಅಕ್ರಮ ನಡೆದಿದೆ ಎಂಬ ಶಂಕೆಗೆ ಮೂಲ ಕಾರಣ. ವಿಶ್ವವಿದ್ಯಾಲಯದ ಹಾಲಿ ಇರುವ ಕಟ್ಟಡ ನವೀಕರಣ ಮತ್ತು ಹೊಸ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರ್‌ ಘಟಕಕ್ಕೆ ವಹಿಸಿ 2022ರ ಜನವರಿ 5ರಂದೇ ಸರ್ಕಾರವು ಆದೇಶ ಹೊರಡಿಸಿರುವುದು ತಿಳಿದು ಬಂದಿದೆ.

 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರ್‌ ಘಟಕಕ್ಕೆ ನೇರವಾಗಿ ಕಾಮಗಾರಿ ವಹಿಸಿರುವುದರ ಹಿಂದೆ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರು ಸ್ವಜನಪಕ್ಷಪಾತವಿದೆ ಎಂಬ ಆಪಾದನೆ ಕೇಳಿ ಬಂದಿದೆ.

 

ಯಾವುದೇ ತುರ್ತು ಸಂದರ್ಭದಲ್ಲಿ ಕೈಗೆತ್ತಿಕೊಳ್ಳುವ ಕಾಮಗಾರಿಯನ್ನು ಬೇರೊಂದು ಇಲಾಖೆಯ ಇಂಜಿನಿಯರ್‌ ಘಟಕಕ್ಕೆ ವಹಿಸಬೇಕಾದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) 199ರ ಕಲಂ 4(ಜಿ) ವಿನಾಯಿತಿ ಪಡೆದು ಕ್ರಮವಹಿಸಬೇಕು. ಇದಾದ ನಂತರ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ಪಡೆಯುವ ಸಂದರ್ಭದಲ್ಲಿ ಸಚಿವ ಸಂಪುಟಕ್ಕೆ ಸಲ್ಲಿಸುವ ಪ್ರಸ್ತಾವನೆಗೆ 4(ಜಿ) ವಿನಾಯಿತಿ ಕೋರುವ ಅಂಶವನ್ನು ಉಲ್ಲೇಖಿಸಬೇಕು.

 

4(ಜಿ) ಅನುಮೋದನೆ ಪಡೆದಿಲ್ಲ

 

ಆದರೆ ನೃಪತುಂಗ ವಿಶ್ವವಿದ್ಯಾಲಯದ ಕಟ್ಟಡ ನವೀಕರಣ ಮತ್ತು ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಸಂಬಂಧ ಈ ಯಾವ ಪ್ರಕ್ರಿಯೆಗಳನ್ನೂ ನಡೆಸದೆಯೇ ನೇರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರ್‌ ಘಟಕಕ್ಕೆ ವರ್ಗಾಯಿಸಲಾಗಿದೆ.

 

‘ಕಾಮಗಾರಿಯನ್ನು ನೇರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರ್‌ ಘಟಕಕ್ಕೆ ವಹಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ 199ರ ಕಲಂ 4(ಜಿ) ರಡಿ ವಿನಾಯಿತಿ ಪಡೆದು ಕ್ರಮವಹಿಸಬೇಕಿರುತ್ತದೆ. ತದನಂತರ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ಪಡೆಯುವ ಸಂದರ್ಭದಲ್ಲಿ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸುವಾಗ ಈ ಅಂಶಕ್ಕೆ ಅನುಮೋದನೆ ಕೋರಿರುವುದು ಕಂಡುಬಂದಿರುವುದಿಲ್ಲ. ಈ ಕ್ರಮವು ಕೆಟಿಪಿಪಿಯ ನಿಯಮಗಳ ಉಲ್ಲಂಘನೆಯಾಗಿದೆ,’ ಎಂದು ಲಭ್ಯ ಇರುವ ದಾಖಲೆಗಳಿಂದ ತಿಳಿದು ಬಂದಿದೆ.

 

ಅದೇ ರೀತಿ ಈ ಯೋಜನೆ ಕುರಿತು ಯೋಜನೆಯ ಅಂದಾಜು, ರೇಖಾ ನಕ್ಷೆ, ಅಂದಾಜು ಪಟ್ಟಿಗಳಿಗೆ ಯಾವುದೇ ಸಕ್ಷಮ ಅಧಿಕಾರಿ/ ಪ್ರಾಧಿಕಾರ ಸಹಿಯೊಂದಿಗೆ ದೃಢೀಕರಿಸಿರುವುದಿಲ್ಲ (ಅಸಿಸ್ಟಂಟ್‌ ಇಂಜಿನಿಯರ್‌, ಅಸಿಸ್ಟಂಟ್‌ ಎಕ್ಸಿಕ್ಯೂಟಿವ್ ಇಂಜಿನಿಯರ್‌, ಎಕ್ಸಿಕ್ಯೂಟಿವ್ ಇಂಜಿನಿಯರ್‌) ಕೇವಲ ಪದನಾಮವನ್ನು ಮಾತ್ರ ದಾಖಲಿಸಲಾಗಿದೆಯೇ ವಿನಃ ಎಲ್ಲಿಯೂ ಸಹಿ ಕಂಡುಬಂದಿರುವುದಿಲ್ಲ ಎಂದು ಗೊತ್ತಾಗಿದೆ.

 

ಹಾಗೆಯೇ ಟೆಂಡರ್‌ನಲ್ಲಿ ಸ್ವೀಕೃತವಾದ ಮೊತ್ತವು ಅಂದಾಜು ಮೊತ್ತಕ್ಕಿಂತ ಶೇ.5ಕ್ಕಿಂತ ಹೆಚ್ಚಿನ ಲಾಭಾಂಶವುಳ್ಳ ಟೆಂಡರ್‌ ಪ್ರೀಮಿಯಂ ಅಗಿದ್ದಲ್ಲಿ ಅಂಗೀಕರಿಸಬಾರದು ಎಂದು 2022ರ ಮೇ 10ರಂದೇ ಆರ್ಥಿಕ ಇಲಾಖೆಯು ಸೂಚಿಸಿದೆ. ಆದರೆ ಈ ಪ್ರಕರಣದಲ್ಲಿ ಪರಿಷ್ಕೃತ ಟೆಂಡರ್‌ಗಿಟ್ಟ ಮೊತ್ತಕ್ಕಿಂತ ಶೇ. 9.95ಕ್ಕಿಂತ ಹೆಚ್ಚಾಗಿದೆ. ಆದರೂ ಇದಕ್ಕೆ ಸಕ್ಷಮ ಪ್ರಾಧಿಕಾರವು ಸೂಕ್ತ ಸಮರ್ಥನೆಯನ್ನು ಸಲ್ಲಿಸಿಲ್ಲ ಎಂದು ತಿಳಿದು ಬಂದಿದೆ.

 

ನೃಪತುಂಗ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ ಮತ್ತು ಬಿಸಿಎ ಪದವಿಗಳಡಿ 24 ಕೋರ್ಸುಗಳು, 7 ಸ್ನಾತಕೋತ್ತರ ಬೋಧನಾಶಾಖೆಗಳು ಮತ್ತು 3 ಸಂಶೋಧನಾ ಕೇಂದ್ರಗಳು ಇರಲಿವೆ. ವಿಶ್ವವಿದ್ಯಾಲಯಕ್ಕೆ ಕೇಂದ್ರ ಸರ್ಕಾರವು 55 ಕೋಟಿ ಅನುದಾನ ಮಂಜೂರು ಮಾಡಿದೆ. ಮೈಸೂರಿನ ಅರಸ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 100 ವರ್ಷಗಳ ಹಿಂದೆ (1921ರಲ್ಲಿ) ಸ್ಥಾಪಿಸಿದ್ದ ಈ ಶಿಕ್ಷಣ ಸಂಸ್ಥೆಯು ಹಂತಹಂತವಾಗಿ ಬೆಳೆದು ಬಂದಿದೆ. ಇದೀಗ ಸಂಸ್ಥೆ ಪೂರ್ಣಪ್ರಮಾಣದಲ್ಲಿ ವಿಶ್ವವಿದ್ಯಾಲಯದ ರೂಪ ಪಡೆಯುತ್ತಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img