Sunday | June 14, 2026 |

ರಾಷ್ಟ್ರೋತ್ಥಾನ ಪರಿಷತ್‌ಗೆ ಕೋಟಿ ರು ಬೆಲೆಯ ಗೋಮಾಳ; ತಕರಾರುಗಳಿದ್ದರೂ ಪ್ರಸ್ತಾವನೆಗೆ ಮಣೆ ಹಾಕಿದ ಸರ್ಕಾರ

Support THE-FILE

spot_img

ಬೆಂಗಳೂರು; ಶೈಕ್ಷಣಿಕ ಕೇಂದ್ರಗಳನ್ನು ವಿಸ್ತರಿಸಲು ಮುಂದಾಗಿರುವ ರಾಷ್ಟ್ರೋತ್ಥಾನ ಪರಿಷತ್‌ ಇದೀಗ ರಾಷ್ಟ್ರೀಯ ನೂತನ ಶೈಕ್ಷಣಿಕ ನೀತಿ (ಎನ್‌ಇಪಿ)ಯನ್ನು ಮುಂದಿರಿಸಿಕೊಂಡು ರಾಜ್ಯದ ವಿವಿಧ ಜಿಲ್ಲಾ, ತಾಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿರುವ ಕೋಟ್ಯಂತರ ರುಪಾಯಿ ಬೆಲೆ ಬಾಳುವ ಸರ್ಕಾರಿ ಗೋಮಾಳ ಜಮೀನನ್ನು ಮಂಜೂರು ಮಾಡಿಸಿಕೊಳ್ಳಲು ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದು ಇದೀಗ ಬಹಿರಂಗವಾಗಿದೆ.

 

ರಾಷ್ಟ್ರೀಯ ನೂತನ ಶೈಕ್ಷಣಿಕ ನೀತಿಯನ್ನು ಮುಂದಿರಿಸಿಕೊಂಡು ಆನೇಕಲ್‌ ತಾಲೂಕಿನ ಜಿಗಣಿ ಹೋಬಳಿಯ ಹುಲಿಮಂಗಲ ಗ್ರಾಮದಲ್ಲಿಯೂ ಶೈಕ್ಷಣಿಕ ಉದ್ದೇಶದ ಹೆಸರಿನಲ್ಲಿ ಅಂದಾಜು 2.50 ಕೋಟಿ ರು. ಬೆಲೆ ಬಾಳುವ 1-36 ಎಕರೆ ವಿಸ್ತಿರ್ಣದ ಗೋಮಾಳ ಜಮೀನು ಮಂಜೂರು ಮಾಡಿಸಿಕೊಳ್ಳಲು ಪ್ರಸ್ತಾವನೆ ಸಲ್ಲಿಸಿದೆ. ಈ ಸಂಬಂಧ ಕೆಲ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಬೆಂಗಳೂರು ದಕ್ಷಿಣ ತಾಲೂಕಿನ ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿಯಲ್ಲಿ 9 ಎಕರೆ ವಿಸ್ತೀರ್ಣದ ಗೋಮಾಳವನ್ನು ಈಗಾಗಲೇ ಮಂಜೂರು ಮಾಡಿಸಿಕೊಂಡಿರುವ ರಾಷ್ಟ್ರೋತ್ಥಾನ ಪರಿಷತ್‌, ಆನೇಕಲ್‌ ತಾಲೂಕಿನ ಹುಲಿಮಂಗಲ ಗ್ರಾಮದಲ್ಲಿನ ಗೋಮಾಳ ಮಂಜೂರು ಮಾಡಿಸಿಕೊಳ್ಳಲು ಸಲ್ಲಿಸಿರುವ ಪ್ರಸ್ತಾವನೆಯು ಮುನ್ನೆಲೆಗೆ ಬಂದಿದೆ. ಈ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದಿರಿಸಲು ಸಚಿವ ಆರ್‌ ಅಶೋಕ್‌ ಅವರು ಇಲಾಖಾಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ ಎಂದು ತಿಳಿದು ಬಂದಿದೆ.

 

ರಾಷ್ಟ್ರೊತ್ಥಾನದ ಪ್ರಸ್ತಾವನೆಯಲ್ಲೇನಿದೆ?

 

ರಾಷ್ಟ್ರೋತ್ಥಾನ ಪರಿಷತ್‌ ರಾಜ್ಯಾದ್ಯಂತ 50 ಕ್ಕೂ ಹೆಚ್ಚು ಶೈಕ್ಷಣಿಕ ವಿದ್ಯಾಸಂಸ್ಥೆಗಳ್ನು ನಡೆಸುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆ ಪ್ರತಿವರ್ಷ ಹೆಚ್ಚುತ್ತಿದ್ದು ಸ್ಥಳಾವಕಾಶ ಕೊರತೆ ಇರುತ್ತದೆ. ರಾಷ್ಟ್ರೀಯ ನೂತನ ಶೈಕ್ಷಣಿಕ ನೀತಿ-2020ರ ಪ್ರಕಾರ ಶೈಕ್ಷಣಿಕ ಕೇಂದ್ರಗಳನ್ನು ವಿಸ್ತರಿಸಬೇಕಿದೆ. ಬಹುತೇಕ ಚಟುವಟಿಕೆಗಳು ಗ್ರಾಮಾಂತರದ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗಾಗಿ ನಡೆಸುತ್ತಿದೆ.

 

ಬೆಂಗಳೂರು ಮಹಾನಗರ ಪಾಲಿಕೆಯ ವಿವಿಧ ಸೇವಾಬಸತಿಗಳಲ್ಲಿ ಶಾಲೆಗೆ ಹೋಗದ ಮತ್ತು ಶಾಲೆ ಬಿಟ್ಟ ಮಕ್ಕಳಿಗಾಗಿ ರಾತ್ರಿ ಹೊತ್ತು ಆನೌಪಚಾರಿಕ ಶಿಕ್ಷಣ ಕೇಂದ್ರಗಳನ್ನು ನಡೆಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ರಾಜ್ಯಾದ್ಯಂತ ವಿಸ್ತರಿಸುವ ಉದ್ದೇಶವನ್ನು ಪರಿಷತ್‌ ಹೊಂದಿದೆ.

 

ರಾಷ್ಟ್ರೋತ್ಥಾನ ಪರಿಷತ್‌ನ ಪ್ರಸ್ತಾವನೆ ಪ್ರತಿ

 

ಬೆಂಗಳೂರು ನಗರ ಜಿಲ್ಲೆ ಆನೇಕಲ್‌ ತಾಲೂಕಿನ ಜಿಗಳಿ ಹೋಬಳಿಯ ಹುಲಿಮಂಗಲ ಗ್ರಾಮದ ಸರ್ವೆ ನಂಬರ್‌ 155ರ ಬ್ಲಾಕ್‌ ನಂ ಬಿ 23ರಲ್ಲಿ 1-36 ಎಕರೆ ಜಾಗವಿರುವುದು ನಮ್ಮ ಗಮನಕ್ಕೆ ಬಂದಿದೆ. ಆದ್ದರಿಂದ ಈ ಜಾಗವನ್ನು ನಮ್ಮ ಸಂಸ್ಥೆಗೆ ಮಂಜೂರು ಮಾಡಿ ನಮ್ಮ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ನಾ ದಿನೇಶ್ ಹೆಗ್ಡೆ ಅವರು 2022ರ ಫೆ.2ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಹಾಗೆಯೇ ರಾಷ್ಟ್ರೋತ್ಥಾನ ಪರಿಷತ್‌ ಈಗಾಗಲೇ ರಾಜ್ಯದ ವಿವಿಧೆಡೆ ಹೊಂದಿರುವ ಜಮೀನುಗಳ ಕುರಿತಾದ ವಿವರವನ್ನು ಪ್ರಸ್ತಾವನೆಯಲ್ಲಿ ನಮೂದಿಸಿರಲಿಲ್ಲ.

 

ಈ ಪ್ರಸ್ತಾವನೆಯನ್ನು ಪುರಸ್ಕರಿಸಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್‌ ಅವರು ‘ಪ್ರಸ್ತಾಪಿತ ಜಮೀನು ಸರ್ಕಾರಿ ಗೋಮಾಳ ಜಮೀನಾಗಿದ್ದು ಯಾವುದೇ ನೀರಿನ ಮೂಲವಾಗಿರುವುದಿಲ್ಲ,’ ಎಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದರು. ನೀರಿನ ಮೂಲವಾಗಿಲ್ಲ ಎಂಬುದನ್ನೇ ನೆಪವಾಗಿರಿಸಿಕೊಂಡಿದ್ದ ಜಿಲ್ಲಾಧಿಕಾರಿಯು ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಜಮೀನನ್ನು ಮಂಜೂರು ಮಾಡಲು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಶಿಫಾರಸ್ಸು ಮಾಡಿದ್ದರು.

 

ಅಲ್ಲದೆ ಇದೇ ಜಮೀನನ್ನು ಮಂಜೂರು ಮಾಡುವ ಸಂಬಂಧ ತಯಾರಿಸಿದ್ದ ಚೆಕ್‌ಲಿಸ್ಟ್‌ನಲ್ಲಿ ಈ ಗ್ರಾಮದಲ್ಲಿ ಎಷ್ಟು ಜಾನುವಾರುಗಳಿವೆ ಮತ್ತು ಗೋಮಾಳ ಜಮೀನು ಮಂಜೂರು ಮಾಡುವುದರಿಂದ ಮೇವಿನ ಕೊರತೆ ಉಂಟಾಗಲಿದೆಯೆ ಎಂಬ ಕುರಿತು ಯಾವುದೇ ಮಾಹಿತಿಯನ್ನೂ ನೀಡಿರಲಿಲ್ಲ ಎಂಬುದು ಲಭ್ಯವಿರುವ ಚೆಕ್‌ಲಿಸ್ಟ್‌ನಿಂದ ತಿಳಿದು ಬಂದಿದೆ.

 

ಆದರೂ ರಾಷ್ಟ್ರೋತ್ಥಾನ ಪರಿಷತ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ ಮಂಜುನಾಥ್‌ ಅವರು 2022ರ ಏಪ್ರಿಲ್‌ 30ರಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.
ರಾಷ್ಟ್ರೋತ್ಥಾನ ಪರಿಷತ್‌ ಪ್ರಸ್ತಾಪಿಸಿರುವ ಗೋಮಾಳ ಸರ್ವೆನಂಬರ್‌ 155ರಲ್ಲಿನ ಜಮೀನುಗಳಿಗೆ ಸಂಬಂಧಿಸಿದಂತೆ ವಿಧಾನಮಂಡಲದ ಅರ್ಜಿಗಳ ಸಮಿತಿ ಮುಂದೆ ವಿಚಾರಣೆಯಲ್ಲಿದೆ. ಈ ಅರ್ಜಿಯು ಇನ್ನೂ ಇತ್ಯರ್ಥಗೊಳಿಸಿಲ್ಲ. ಸದ್ಯ ವಿಚಾರಣೆ ಹಂತದಲ್ಲಿದ್ದರೂ ಬೆಂಗಳೂರು ನಗರ ಜಿಲ್ಲಾಧಿಕಾರಿಯು ರಾಷ್ಟ್ರೋತ್ಥಾನ ಪರಿಷತ್‌ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸ್ವೀಕರಿಸಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಜಿಲ್ಲಾಧಿಕಾರಿ ಪತ್ರದಲ್ಲೇನಿದೆ?

 

ಆನೇಕಲ್‌ ತಾಲೂಕು ಜಿಗಣಿ ಹೋಬಳಿಯ ಹುಲಿಮಂಗಲ ಗ್ರಾಮದ ಸರ್ವೆ ನಂಬರ್‌ 155 ಮೂಲತಃ ಸರ್ಕಾರಿ ಗೋಮಾಳ ಜಮೀನಾಗಿದ್ದು ಮೂಲ ವಿಸ್ತೀರ್ಣ 185-04 ಎಕರೆ ಜಮೀನಿನ ಪೈಕಿ ಈ ಹಿಂದೆ ಪೋಡಿ ದುರಸ್ತಿ ಆಗಿ ಉಳಿಕೆ ಆಕಾರ್‌ ಬಂದ್‌ ನಂತೆ 68-30 ಎಕರೆ ಇದೆ. ಈ ಸರ್ವೆ ನಂಬರ್‌ನ ಜಮೀನುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಮಂಡಲದ ಅರ್ಜಿ ಸಮಿತಿಯ ವಿಚಾರಣೆ ಹಂತದಲ್ಲಿದೆ. ಇದು ಇತ್ಯರ್ಥಕ್ಕೆ ಬಾಕಿ ಇದೆ. ಈ ಜಮೀನಿನ ಸರ್ಕಾರಿ ಮಾರ್ಗಸೂಚಿ ದರ ಎಕರೆಯೊಂದಕ್ಕೆ 95 ಲಕ್ಷ ರು., ಮಾರುಕಟ್ಟೆ ಮೌಲ್ಯ ಎಕರೆಗೆ 2.50 ಕೋಟಿ ರು ಇದೆ ಎಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಗಮನಕ್ಕೆ ತಂದಿರುವುದು ಪತ್ರದಿಂದ ಗೊತ್ತಾಗಿದೆ.

 

ಜಿಲ್ಲಾಧಿಕಾರಿ ಬರೆದಿರುವ ಪತ್ರದ ಪ್ರತಿ

 

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿ ಮೀಸಲಿರಿಸಿರುವ ಜನಸೇವಾ ಟ್ರಸ್ಟ್‌ಗೆ 70 ಕೋಟಿ ರು. ಬೆಲೆಬಾಳುವ 35.33 ಎಕರೆ ವಿಸ್ತೀರ್ಣದ ಗೋಮಾಳವನ್ನು ಮಂಜೂರು ಮಾಡಲು ಸಚಿವ ಸಂಪುಟವು ಅನುಮೋದಿಸಿರುವುದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img