Sunday | June 14, 2026 |

ಮಾಜಿ ಸೈನಿಕರ ಕೋಟಾದಡಿ ನಕಲಿ ದಾಖಲೆ ಸೃಷ್ಟಿಸಿ ಶಿಕ್ಷಕರ ನೇಮಕ; ಬಡ್ತಿ ಕಡಿತಗೊಳಿಸಿ ಕೈತೊಳೆದುಕೊಂಡ ಸರ್ಕಾರ

Support THE-FILE

spot_img

ಬೆಂಗಳೂರು; ಆಯ್ಕೆಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ವಾಮಮಾರ್ಗದಲ್ಲಿ ಆದೇಶ ಪಡೆದಿದ್ದ ಪ್ರೌಢಶಾಲಾ ಶಿಕ್ಷಕರ ನೇಮಕ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಮಾಜಿ ಸೈನಿಕರ ಮತ್ತು ಅವರ ಅವಲಂಬಿತರ ಖೋಟಾದಡಿಯಲ್ಲಿಯೂ ನಕಲಿ ದಾಖಲೆ ಸೃಷ್ಟಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿಯೂ ಅಕ್ರಮ ನಡೆದಿರುವುದು ಇದೀಗ ಬಹಿರಂಗವಾಗಿದೆ.

 

2006-07ರಿಂದ 2009-10ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಖೋಟಾದಡಿ ನಕಲಿ ದಾಖಲೆ ಸೃಷ್ಟಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆಸಿರುವುದು ಗಂಭೀರ ಅಪರಾಧ ಮಾತ್ರವಲ್ಲದೇ ಸಕಾರ್ಶರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದರೂ ಇನ್ನೂ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಂಡಿಲ್ಲ. ಬದಲಿಗೆ ಆರೋಪಿತರ ಎರಡು ವಾರ್ಷಿಕ ವೇತನ ಬಡ್ತಿಗಳನ್ನು ತಡೆಹಿಡಿದು ಇಲಾಖೆಯು ಕೈಕೊಳೆದುಕೊಂಡಿದೆ.

 

ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ 2022ರ ಜುಲೈ 30ರಂದೇ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಯಾದಗಿರಿ ಪ್ರಕರಣದ ವಿವರ

 

2006-07ರಿಂದ 2009-10ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಮಾಜಿ ಸೈನಿಕರ/ಅವಲಂಬಿತರ ಖೋಟಾದಡಿಇಯಲ್ಲಿ ನಕಲಿ ಸೃಷ್ಟಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಎಸಗಿರುವ ಆರೋಪದಡಿಯಲ್ಲಿ ಯಾದಗಿರಿಯ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲರೂ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ,ನೌಕರರೂ ಗುರಿಯಾಗಿದ್ದಾರೆ.

 

ಸಾರ್ವಜನಿಕ ಶಿಕ್ಷಣ ಇಲಾಖೆಯ ಹೊಸದುರ್ಗ ಉಪನಿರ್ದೇಶಕರ ಕಚೇರಿಯಲ್ಲಿನ ಹಿಂದಿನ ಪ್ರಥಮದರ್ಜೆ ಸಹಾಯಕ ಶ್ರೀಕಾಂತ( ಯಾದಗಿರಿಯಲ್ಲಿ ಪ್ರಸ್ತುತ ಸೇವೆ) ಮತ್ತು ಶಹಾಪೂರ ತಾಲೂಕಿನ ದೋರನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಪ್ರಥಮದರ್ಜೆ ಸಹಾಯಕರ ಅವರ ಮುಂದಿನ ಎರಡು ವಾರ್ಷಿಕ ವೇತನ ಬಡ್ತಿಗಳನ್ನು ತಡೆಹಿಡಿದು ದಂಡನೆ ವಿಧಿಸಿರುವುದು ಪತ್ರದಿಂದ ತಿಳಿದು ಬಂದಿದೆ.

 

ಅಲ್ಲದೆ ಈ ಪ್ರಕರಣದ ಕುರಿತು ಆಪಾದಿತರಿಗೆ ಕಠಿಣ ದಂಡನೆ ವಿಧಿಸಲು ಯಾವುದೇ ಹೊಸ ಅಂಶಗಳನ್ನೂ ಅಧಿಕಾರಿಗಳು ಸರ್ಕಾರಕ್ಕೆ ಮಂಡಿಸಿಲ್ಲ. ವಿಚಾರಣೆ ವರದಿಯಲ್ಲಿನ ಅಂಶಗಳನ್ನು ಹೊರತುಪಡಿಸಿ ದಂಡನೆ ಪರಿಷ್ಕರಣೆ ಮಾಡಲು ಹೊಸ ಅಂಶಗಳನ್ನೂ ಸಲ್ಲಿಸಿಲ್ಲ.

 

ಆದರೆ ಈ ಪ್ರಕರಣವನ್ನು ಪುನರ್‌ ಪರಿಶೀಲಿಸಿಲು ವಿಚಾರಣೆ ವರದಿಯಲ್ಲಿನ ಅಂಶಗಳನ್ನು ಹೊರತುಪಡಿಸಿ ಕರ್ನಾಟಕ ನಾಗರಿಕ ಸೇವಾ(ಸಿಸಿಎ) ನಿಇಯಮಗಳು 1957ರ ನಿಯಮ 26ರಲ್ಲಿ ಹೇಳಿರುವಂತೆ ದಂಡನಾ ಆದೇಶವನ್ನು ಪುನರಾವಲೋಕಿಸಲು ಯಾವುದೇ ಸೂಕ್ತ ದಾಖಲೆಗಳು, ಪುರಾವೆಗಳು, ಹೊಸ ಅಂಶಗಳು ಮತ್ತು ಸಾಕಷ್ಟು ಸಕಾರಣಗಳು ಕಂಡುಬರುತ್ತಿಲ್ಲ ಎಂದೂ ಸಚಿವಾಲಯದ ಅಧಿಕಾರಿಗಳು ನಿಲುವು ತಳೆದಿರುವುದು ಪತ್ರದಿಂದ ಗೊತ್ತಾಗಿದೆ.

 

‘ಈ ಪ್ರಕರಣದ ಕುರಿತು ಆಪಾದಿತರಿಗೆ ಕಠಿಣ ದಂಡನೆ ವಿಧಿಸಲು ವಿಚಾರಣಾಧಿಕಾರಿಗಳ ವಿಚಾರನೆ ವರದಿಯಲ್ಲಿನ ಅಂಶಗಳನ್ನು ಹೊರತುಪಡಿಸಿ ಈ ಪ್ರಕರಣವನ್ನು ಪುನರ್‌ ಪರಿಶೀಲಿಸಲು ಕರ್ನಾಟಕ ನಾಗರೀಕ ಸೇವಾ (ಸಿಸಿಎ) ನಿಯಮಗಳು 1957ರ ನಿಯಮ 26ರಲ್ಲಿ ತಿಳಿಸಿರುವಂತೆ ತಮ್ಮ ಶಿಫಾರಸ್ಸಿಗೆ ಪೂರಕವಾದ ಹೊಸ ಅಂಶ, ಪುರಾವೆಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಲ್ಲಿ ನಿಯಮಾನುಸಾರ ಪರಿಶೀಲಿಸಲಾಗುವುದು,’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಲ್ಬುರ್ಗಿಯ ಹೆಚ್ಚುವರಿ ಆಯುಕ್ತರಿಗೆ ನಿರ್ದೇಶಿಸಿರುವುದು ಪತ್ರದಿಂದ ತಿಳಿದು ಬಂದಿದೆ.

 

ತುಮಕೂರು, ಕೋಲಾರ ಜಿಲ್ಲೆಯಲ್ಲಿನ ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮವನ್ನು ಹೊರಗೆಳೆದಿದ್ದ ಲಂಚಮುಕ್ತ ನಿರ್ಮಾಣ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರು ಮುಖ್ಯಮಂತ್ರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ, ಪ್ರಧಾನ ಕಾರ್ಯದರ್ಶಿಗಳಿಗೆ ಲಿಖಿತ ದೂರು ನೀಡಿದ್ದರು. ಇದೀಗ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ಸರ್ಕಾರಕ್ಕೆ ಮತ್ತಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದನ್ನು ಸ್ಮರಿಸಬಹುದು. ಈ ದೂರನ್ನಾಧರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ ಸಿ ನಾಗೇಶ್‌ ಅವರು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದ್ದನ್ನು ಸ್ಮರಿಸಬಹುದು.

 

ಕೋಲಾರ ಜಿಲ್ಲೆಯೊಂದರಲ್ಲೇ 9 ಮಂದಿ ಶಿಕ್ಷಕರು ಅಕ್ರಮವಾಗಿ ನೇಮಕವಾಗಿದ್ದಾರೆ ಎಂದು ಲಂಚಮುಕ್ತ ನಿರ್ಮಾಣ ಕರ್ನಾಟಕ ವೇದಿಕೆಯು ಸರ್ಕಾರಕ್ಕೆ ಪಟ್ಟಿಯನ್ನು ಒದಗಿಸಿದೆ. ಈ ಶಿಕ್ಷಕರ ಸೇವಾ ಹಿರಿತನಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಶಿಕ್ಷಕರ ಹೆಸರುಗಳಿರಲಿಲ್ಲ ಎಂದು ವೇದಿಕೆಯು ಸರ್ಕಾರದ ಗಮನಕ್ಕೆ ತಂದಿತ್ತು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img