Sunday | June 14, 2026 |

ಬಜೆಟ್‌ ಘೋಷಣೆ; ವೆಚ್ಚಕ್ಕೆ 15,460 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ, ಸಾಧಿಸಿದ್ದು ಕೇವಲ ಶೇ.47ರಷ್ಟು

Support THE-FILE

spot_img

ಬೆಂಗಳೂರು; ಸಾರ್ವತ್ರಿಕ ಚುನಾವಣಾ ಪೂರ್ವ ವರ್ಷವಾಗಿರುವ 2022-23ನೇ ಸಾಲಿನ ಬಜೆಟ್ ಗಾತ್ರವನ್ನು 2,55,106 ಕೋಟಿ ರು.ಗೆ ಹಿಗ್ಗಿಸಿದ್ದ ರಾಜ್ಯ ಬಿಜೆಪಿ ಸರ್ಕಾರವು ಪ್ರಸಕ್ತ ಸಾಲಿನ ಆರ್ಥಿಕ ವರ್ಷ ಪೂರ್ಣಗೊಳ್ಳಲು ಮೂರೇ ಮೂರು ತಿಂಗಳು ಬಾಕಿ ಇದ್ದರೂ ಬಜೆಟ್‌ನಲ್ಲಿ ಘೋಷಿಸಿದ್ದ ಪೂರ್ಣ ಅನುದಾನವನ್ನು ವೆಚ್ಚ ಮಾಡಿಲ್ಲ. 15,460 ಕೋಟಿ ರುಪಾಯಿ ವೆಚ್ಚಕ್ಕೆ ಬಾಕಿ ಉಳಿಸಿಕೊಂಡು ಒಟ್ಟು ಅನುದಾನಕ್ಕೆ ಶೇ. 47ರಷ್ಟೇ ಪ್ರಗತಿಯಷ್ಟೇ ಸಾಧಿಸಿರುವ ಸರ್ಕಾರವು ಶೇ.50ರ ಗಡಿಯನ್ನೂ ದಾಟಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.

ಪ್ರಣಾಳಿಕೆಯಲ್ಲಿ ಮಾಡಿದ್ದ ಘೋಷಣೆ ಮತ್ತು ಬಜೆಟ್‌ ಘೋಷಣೆಯಲ್ಲಿನ ಕಾರ್ಯಕ್ರಮಗಳು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರವು ವಿಫಲವಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್‌ ಟೀಕಿಸುತ್ತಿರುವ ಬೆನ್ನಲ್ಲೇ ಕೆಡಿಪಿ ಸಭೆಯಲ್ಲಿ ಮಂಡನೆಯಾಗಿದ್ದ ಅಂಕಿ ಅಂಶಗಳು ಮುನ್ನೆಲೆಗೆ ಬಂದಿವೆ.

ಕ್ರಿಯೆಗೆ ಪ್ರತಿಕ್ರಿಯೆ, ಪಠ್ಯಪುಸ್ತಕ ಪರಿಷ್ಕರಣೆ, ವೀರ್‌ ಸಾವರ್ಕರ್‌, ಶಾಲಾ ಕಾಂಪೌಂಡ್‌ಗಳಿಗೆ ಕೇಸರಿ ಬಣ್ಣ, ಶೇ.40ರ ಕಮಿಷನ್‌, ಭ್ರಷ್ಟಾಚಾರ ಆರೋಪಗಳ ಸುಳಿಯಲ್ಲಿ ಮುಖ್ಯಮಂತ್ರಿ ಆದಿಯಾಗಿ ಸಂಪುಟದ ಹಲವು ಸಚಿವರು ಮುಳುಗಿರುವ ಕಾರಣ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಿಲ್ಲ ಎಂಬುದು ಈ ಅಂಕಿ ಅಂಶಗಳಿಂದಲೇ ಮೇಲ್ನೋಟಕ್ಕೆ ಕಂಡು ಬಂದಿದೆ.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಅಡಿಯಲ್ಲಿ ವಿವಿಧ ಇಲಾಖೆಗಳು ಸಾಧಿಸಿರುವುದಕ್ಕೆ ಸಂಬಂಧಿಸಿದಂತೆ 2022ರ ಡಿಸೆಂಬರ್‌ 16ರಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ನಡೆದಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಒದಗಿಸಿರುವ ಇಲಾಖಾವಾರು ಮಾಹಿತಿಯು ಬಜೆಟ್‌ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಕೈಗನ್ನಡಿ ಹಿಡಿದಿದೆ. ಸಭೆಯ ನಡವಳಿಗಳ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

2022-23ನೇ ಸಾಲಿನಲ್ಲಿ ಒಟ್ಟು 2,55,106 ಕೋಟಿ ರು. ಅನುದಾನ (ಆಯವ್ಯಯ ಅಂದಾಜು 2,20,310 ಕೋಟಿ +ಪೂರಕ ಅಂದಾಜು 13,369 ಕೋಟಿ, ಮತ್ತು ಪ್ರಾಥಮಿಕ ಶಿಲ್ಕು 21,420 ಕೋಟಿ ಸೇರಿದಂತೆ) ನವೆಂಬರ್‌ 2022ರ ಅಂತ್ಯಕ್ಕೆ 1,35,684 ಕೋಟಿ ರು. ಬಿಡುಗಡೆಯಾಗಿತ್ತು. ಈ ಪೈಕಿ 1,20,224 ಕೋಟಿ ರು. ವೆಚ್ಚವಾಗಿದೆ. ಇದು ಒಟ್ಟು ಅನುದಾನಕ್ಕೆ ಶೇ. 47ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ ಎಂಬ ಮಾಹಿತಿಯು ನಡವಳಿಯಿಂದ ಗೊತ್ತಾಗಿದೆ.

ಕೆಡಿಪಿ ಸಭೆಯ ನಡವಳಿ ಪ್ರತಿ

ಬಜೆಟ್‌ ಮಂಡನೆ ಪ್ರಕ್ರಿಯೆ ಪೂರ್ಣಗೊಂಡ ನಂತರದ ತಿಂಗಳಿನಿಂದಲೇ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳೂ ಪ್ರಗತಿ ಪರಿಶೀಲನೆ ಸಭೆ ನಡೆಯುತ್ತದೆ. ಬಜೆಟ್‌ನಲ್ಲಿ ಒದಗಿಸಿರುವ ಅನುದಾನವನ್ನು ನಿಗದಿತ ಅವಧಿಯಲ್ಲಿಯೇ ಖರ್ಚು ಮಾಡಬೇಕು ಎಂದು ಈ ಸಭೆಯಲ್ಲಿ ಭಾಗವಹಿಸುವ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಲಾಗಿರುತ್ತದೆ.

‘ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಹಣವನ್ನು ಖರ್ಚು ಮಾಡದೇ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಅನುಮೋದನೆ ಪಡೆಯುವುದರಲ್ಲೇ ಕಾಲಹರಣ ಮಾಡುತ್ತಾರೆ. ಸಂಬಂಧಿಸಿದ ಸಚಿವರು ಇಲಾಖಾ ಸಭೆಗಳಿಗೂ ಹಾಜರಾಗುವುದಿಲ್ಲ, ಕಾರ್ಯಕ್ರಮಗಳ ಅನುಷ್ಠಾನಗೊಳಿಸಲು ವ್ಯವಧಾನವಿರುವುದಿಲ್ಲ. ಅವರದೇನಿದ್ದರೂ ಕಮಿಷನ್‌ ಗಿಟ್ಟಿಸಿಕೊಳ್ಳುವುದು, ಹಣ ಬಿಡುಗಡೆಗೆ ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಡುವುದಷ್ಟೇ. ಹೀಗಾಗಿ ಕಾರ್ಯಕ್ರಮಗಳ ಪ್ರಗತಿಯು ಕುಂಠಿತಗೊಳ್ಳುತ್ತದೆ, ‘ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಆರ್ಥಿಕ ಇಲಾಖೆಯ ಅಧಿಕಾರಿಯೊಬ್ಬರು.

ಪ್ರಸಕ್ತ ಸಾಲಿನ ಆರ್ಥಿಕ ವರ್ಷ (2022-23) ಪೂರ್ಣಗೊಳ್ಳಲು ಇನ್ನು ಕೇವಲ ಮೂರೇ ಮೂರು ತಿಂಗಳಿದ್ದರೂ ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಂಚಿಕೆ ಮಾಡಿದ್ದ ಒಟ್ಟು ಅನುದಾನದ ಪೈಕಿ ನವೆಂಬರ್‌ ಅಂತ್ಯದವರೆಗೆ 8,199 ಕೋಟಿ ರು. ಬಿಡುಗಡೆಗೆ ಬಾಕಿ ಉಳಿಸಿಕೊಂಡಿದೆ.

ವರ್ಷ ಉರುಳಿದರೂ 122 ಕಾರ್ಯಕ್ರಮಗಳಿಗೆ ಸಿಗದ ಚಾಲನೆ, ಕೇಂದ್ರದಿಂದ ಬಾರದ 8,199 ಕೋಟಿ

ಅದೇ ರೀತಿ 2022-23ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಒಟ್ಟು ಕಾರ್ಯಕ್ರಮಗಳ ಪೈಕಿ ಇನ್ನೂ 122 ಕಾರ್ಯಕ್ರಮಗಳಿಗೆ ಚಾಲನೆ ದೊರೆತಿಲ್ಲ ಎಂಬುದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img