Sunday | June 14, 2026 |

ಅತ್ಯಾಚಾರ ಪ್ರಕರಣ; 5 ವರ್ಷದಲ್ಲಿ 14,074, ಬಿಜೆಪಿ ಸರ್ಕಾರದ ಅವಧಿಯಲ್ಲಿ 8,909 ಆರೋಪಿಗಳ ಬಂಧನ

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಕಳೆದ 5 ವರ್ಷಗಳಲ್ಲಿ 14,074 ಮಂದಿಯನ್ನು ಅತ್ಯಾಚಾರ ಪ್ರಕರಣಗಳಲ್ಲಿ ಬಂಧಿಸಲಾಗಿದೆ. ಈ ಪೈಕಿ ಬಿಜೆಪಿ ಸರ್ಕಾರದ 2 ವರ್ಷದ ಅವಧಿಯಲ್ಲಿ 8,909 ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ.

ವಿಧಾನಪರಿಷತ್‌ ಸದಸ್ಯ ಪಿ ಆರ್‌ ರಮೇಶ್‌ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ 2022ರ ಡಿಸೆಂಬರ್‌ 26ರಂದು ಉತ್ತರ ಒದಗಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತರ ಪೈಕಿ ಒಟ್ಟು 73 ಮಂದಿ ಕಳೆದ 5 ವರ್ಷದಲ್ಲಿ ಸಾವಿಗೀಡಾಗಿದ್ದಾರೆ ಎಂಬ ಅಂಕಿ ಅಂಶಗಳನ್ನು ನೀಡಿದ್ದಾರೆ.

ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿ 6,125 ಆರೋಪಿಗಳನ್ನು ಬಂಧಿಸಿರುವುದು ಪಟ್ಟಿಯಿಂದ ತಿಳಿದು ಬಂದಿದೆ.

‘ಅತ್ಯಾಚಾರ ಪ್ರಕರಣಗಳಲ್ಲಿ ರಾಜ್ಯದಲ್ಲಿ ಪೋಕ್ಸೋ ಕಾಯ್ದೆಯ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗಿದೆ. ಪೋಕ್ಸೋ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಸಾರ್ವಜನಿಕರಲ್ಲಿದೆ. ಅತ್ಯಾಚಾರ ಪ್ರಕರಣಗಳು, ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಿನ ಪ್ರಮಾಣದ ನೊಂದವರು ಮುಕ್ತವಾಗಿ, ಭಯ ಭೀತಿಯಿಲ್ಲದೇ ಪೊಲೀಸ್‌ ಠಾಣೆಗೆ ಬಂದು ದೂರುಗಳನ್ನುದಾಖಲಿಸುತ್ತಿದ್ದಾರೆ. ಹೀಗಾಗಿ ಅತ್ಯಾಚಾರ/ಮಕ್ಕಳ ಮೇಲಿನ ಪ್ರತಿ ಲೈಂಗಿಕ ದೌರ್ಜನ್ಯ ಪ್ರಕರಣವು ಬೆಳಕಿಗೆ ಬರುವ ಮೂಲಕ ಪ್ರಕರಣಗಳು ದಾಖಲಾಗುತ್ತಿವೆ, ‘ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉತ್ತರದಲ್ಲಿ ವಿವರಣೆ ನೀಡಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸದನದಲ್ಲಿ ನೀಡಿರುವ ಅಂಕಿ ಅಂಶದ ಪ್ರತಿ

2018ರಲ್ಲಿ 16 ಮಂದಿ ಸಾವಿಗೀಡಾಗಿದ್ದರೇ 2,430 ಆರೋಪಿಗಳನ್ನು ಬಂಧಿಸಲಾಗಿದೆ. 2019ರಲ್ಲಿ 14 ಮಂದಿ ಸಂತ್ರಸ್ತರು ಸಾವಿಗೀಡಾಗಿದ್ದು, ಈ ಪ್ರಕರಣಗಳಲ್ಲಿ 2,735 ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. 2020ರಲ್ಲಿ 13 ಮಂದಿ ಸಾವಿಗೀಡಾಗಿದ್ದರೇ 2,627 ಆರೋಪಿಗಳು ಬಂಧನದಲ್ಲಿದ್ದಾರೆ.

2021ರಲ್ಲಿ  20 ಮಂದಿ ಸಾವಿಗೀಡಾಗಿದ್ದರೇ 3,498 ಆರೋಪಿಗಳು ಬಂಧನಕ್ಕೊಳಪಡಿಸಲಾಗಿದೆ. 2022ರ ನವೆಂಬರ್‌ 30ರವರೆಗೆ ಒಟ್ಟು 10 ಮಂದಿ ಸಾವಿಗೀಡಾಗಿದ್ದು, ಈ ಪ್ರಕರಣಗಳಲ್ಲಿ ಒಟ್ಟು 2,784 ಮಂದಿ ಆರೋಪಿಗಳನ್ನು ಬಂಧಿಸಿರುವುದು ಸಚಿವ ಆರಗ ಜ್ಞಾನೇಂದ್ರ ಅವರು ಒದಗಿಸಿರುವ ಉತ್ತರದಿಂದ ತಿಳಿದು ಬಂದಿದೆ.

ಜಿಲ್ಲಾವಾರು ಪಟ್ಟಿ ಇಲ್ಲಿದೆ

ಬೆಂಗಳೂರು ನಗರ ಘಟಕವೊಂದರಲ್ಲೇ ಕಳೆದ 5 ವರ್ಷಗಳಲ್ಲಿ 2,214 ಆರೋಪಿಗಳನ್ನು ಅತ್ಯಾಚಾರ ಪ್ರಕರಣಗಳಲ್ಲಿ ಬಂಧಿಸಲಾಗಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ 714, ಶಿವಮೊಗ್ಗದಲ್ಲಿ 703, ಮಂಡ್ಯದಲ್ಲಿ 676 ಆರೋಪಿಗಳು ಬಂಧಿಸಲಾಗಿದೆ. 2018ರಲ್ಲಿ ಬೆಂಗಳೂರು ನಗರದಲ್ಲಿ 461, ಮಂಡ್ಯದಲ್ಲಿ 138, ಬೆಳಗಾವಿ ಜಿಲ್ಲೆಯಲ್ಲಿ 135, ಶಿವಮೊಗ್ಗದಲ್ಲಿ 131, ಹಾಸನದಲ್ಲಿ 116 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

2019ರಲ್ಲಿ ಬೆಂಗಳೂರು ನಗರದಲ್ಲಿ 441, ಮಂಡ್ಯದಲ್ಲಿ 152, ಬೆಳಗಾವಿಯಲ್ಲಿ 142, ಶಿವಮೊಗ್ಗದಲ್ಲಿ 126, ಚಿಕ್ಕಬಳ್ಳಾಪುರದಲ್ಲಿ 119 ಆರೋಪಿಗಳನ್ನು ಬಂಧಿಸಲಾಗಿದೆ. 2020ರಲ್ಲಿ ಬೆಂಗಳೂರು ನಗರದಲ್ಲಿ 378, ಚಿಕ್ಕಬಳ್ಳಾಪುರದಲ್ಲಿ 160, ಮಂಡ್ಯದಲ್ಲಿ 140, ಹಾಸನದಲ್ಲಿ 126, ಶಿವಮೊಗ್ಗದಲ್ಲಿ 118 ಮಂದಿ ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ.

2021ರಲ್ಲಿ ಬೆಂಗಳೂರು ನಗರದಲ್ಲಿ 467, ಚಿಕ್ಕಬಳ್ಳಾಪುರದಲ್ಲಿ 195, ಚಿಕ್ಕಮಗಳೂರು ಜಿಲ್ಲೆಯಲ್ಲಿ 189, ಹಾಸನದಲ್ಲಿ 185, ದಾವಣಗೆರೆಯಲ್ಲಿ 155,

ಶಿವಮೊಗ್ಗದಲ್ಲಿ 149 , ತುಮಕೂರು ಜಿಲ್ಲೆಯಲ್ಲಿ 146, ಮಂಡ್ಯದಲ್ಲಿ 145 ಆರೋಪಿಗಳನ್ನು ಬಂಧಿಸಲಾಗಿದೆ. 2022ರಲ್ಲಿ ಬೆಂಗಳೂರು ನಗರದಲ್ಲಿ 467, ಶಿವಮೊಗ್ಗದಲ್ಲಿ 179, ಬೆಳಗಾವಿಯಲ್ಲಿ 147, ಹಾಸನದಲ್ಲಿ 136, ಚಿಕ್ಕಬಳ್ಳಾಪುರದಲ್ಲಿ 123 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img