Sunday | June 14, 2026 |

17.35 ಎಕರೆ ಸರ್ಕಾರಿ ಜಮೀನು ಖಾಸಗಿ ವ್ಯಕ್ತಿಗಳ ಪಾಲು; ಆರೋಪಿತ ಅಧಿಕಾರಿ, ನೌಕರರ ರಕ್ಷಣೆಗೆ ನಿಂತ ಸರ್ಕಾರ

Support THE-FILE

spot_img

ಬೆಂಗಳೂರು; ಜಾಲ ಹೋಬಳಿಯ ಶೆಟ್ಟಿಗೆರೆ ಗ್ರಾಮದ ಸರ್ವೆ ನಂಬರ್‌ 79ರಲ್ಲಿ 38 ಕೋಟಿಗೂ (ಸರ್ಕಾರಿ ಮಾರ್ಗಸೂಚಿ ಮೌಲ್ಯ)  ಹೆಚ್ಚು ಬೆಲೆಬಾಳುವ  ಒಟ್ಟು 17 ಎಕರೆ 35 ಗುಂಟೆ ಜಮೀನು ಖಾಸಗಿ ವ್ಯಕ್ತಿಗಳ ಪಾಲಾಗಲು ಸಹಕರಿಸಿದ್ದಾರೆ ಎಂದು ಆರೋಪಕ್ಕೆ ಒಳಗಾಗಿರುವ ಅಧಿಕಾರಿ, ನೌಕರರ ವಿರುದ್ಧ ಕಂದಾಯ ಇಲಾಖೆಯು ಇನ್ನೂ ಕಾನೂನು ಕ್ರಮ ಕೈಗೊಂಡಿಲ್ಲ.

 

ಇದೇ ವಿಷಯಕ್ಕೆ ಸಂಬಂಧಿಸಿದಂತೆ 2023ರ ಮಾರ್ಚ್‌ 17ರಂದು ನಡೆದ ವಿಧಾನಪರಿಷತ್‌ನ ಅರ್ಜಿ ಸಮಿತಿ ಸಭೆಯಲ್ಲಿ ಚರ್ಚೆಯಾಗಿತ್ತು. ಅಲ್ಲದೇ ಇದಕ್ಕೆ ಸಂಬಂಧಿಸಿದ ಅಧಿಕಾರಿ, ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಮಿತಿಯು ನೀಡಿದ್ದ ನಿರ್ದೇಶನವನ್ನು ಕಂದಾಯ ಇಲಾಖೆಯ (ಸೇವೆಗಳು-3) ಅಧೀನ ಕಾರ್ಯದರ್ಶಿಯು ಪಾಲಿಸಿಲ್ಲ ಎಂದು ಗೊತ್ತಾಗಿದೆ.

 

ಈ ಸಂಬಂಧ 2023ರ ಮಾರ್ಚ್‌ 18ರಂದು ಕಂದಾಯ ಇಲಾಖೆಯ (ಭೂ ಮಂಜೂರಾತಿ-1) ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಮ್ಮ ಸಿ ಅವರು ಕಂದಾಯ ಇಲಾಖೆಯ (ಸೇವೆಗಳು-3) ಅಧೀನ ಕಾರ್ಯದರ್ಶಿಗೆ ಪತ್ರ (ಸಂಖ್ಯೆ ಆರ್‌ಡಿ 33 ಎಲ್‌ಜಿಕ್ಯೂ 2021) ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಇದೇ ಜಾಲ ಹೋಬಳಿಯ ಶೆಟ್ಟಿಗೆರೆ ಗ್ರಾಮದ ಸರ್ವೆ ನಂಬರ್‌ 80ರಲ್ಲಿಯೂ ಸರ್ಕಾರಿ ಜಮೀನು ಖಾಸಗಿ ವ್ಯಕ್ತಿಗಳ ಪಾಲಾಗಿತ್ತು. ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಾಗಿತ್ತು. ಈ ಪ್ರಕರಣದ ಕುರಿತು ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಸರ್ವೆ ನಂಬರ್‌ 79ರಲ್ಲಿಯೂ 17 ಎಕರೆ 35 ಗುಂಟೆ ಜಮೀನು ಖಾಸಗಿಯವರ ಪಾಲಾಗಿರುವ ಪ್ರಕರಣವೂ ಮುನ್ನೆಲೆಗೆ ಬಂದಿದೆ.

 

‘ಯಲಹಂಕ ಜಾಲ ಹೋಬಳಿ ಶೆಟ್ಟಿಗೆರೆ ಗ್ರಾಮದ ಸರ್ವೆ ನಂಬರ್‌ 79ರಲ್ಲಿ ಒಟ್ಟು 80-29 ಎಕರೆ ಜಮೀನಿನ ಪೈಕಿ 17-35 ಎಕರೆ ಜಮೀನನ್ನು ಖಾಸಗಿಯವರ ಪಾಲಾಗಲು ಸಹಕರಿಸಿರುವ ಅಧಿಕಾರಿ/ನೌಕರರ ವಿರದ್ಧ ಕೈಗೊಂಡ ಶಿಸ್ತು ಕ್ರಮದ ಮಾಹಿತಿಯನ್ನು ನೀಡಬೇಕು ಎಂದು ವಿಧಾನಪರಿಷತ್‌ ಅರ್ಜಿಗಳ ಸಮಿತಿಯು (ಅರ್ಜಿ ಸಂಖ್ಯೆ 94/2020) ನಿರ್ದೇಶನ ನೀಡಿರುತ್ತದೆ. ಈ ಪ್ರಕರಣದಲ್ಲಿ ಎಸಗಿದ್ದಾರೆ ಎನ್ನಲಾದ ಆರೋಪಗಳ ಕುರಿತು ಸಂಬಂಧಪಟ್ಟ ಅಧಿಕಾರಿ, ನೌಕರರ ವಿರುದ್ಧ ಕೈಗೊಂಡಿರುವ ಶಿಸ್ತು ಕ್ರಮದ ಮಾಹಿತಿಯನ್ನು ಕೂಡಲೇ ಒದಗಿಸಬೇಕು,’ ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಅವರು ಪತ್ರ ಬರೆದಿರುವುದು ಗೊತ್ತಾಗಿದೆ.  ಹಲವಾರು ಬಾರಿ ನೆನಪೋಲೆಗಳನ್ನು ಬರೆದಿದ್ದರೂ ಶಿಸ್ತು ಕ್ರಮದ ಮಾಹಿತಿಯನ್ನೇ ಒದಗಿಸದಿರುವುದು ಆರೋಪಿತ ಅಧಿಕಾರಿ, ನೌಕರರ ರಕ್ಷಣೆಗೆ ನಿಂತಿದೆಯೇ ಎಂಬ ಅನುಮಾನಕ್ಕೆ ದಾರಿಮಾಡಿಕೊಟ್ಟಿದೆ.

 

ಭೂ ದಾಖಲೆಗಳ ಪ್ರಕಾರ ಜಾಲ ಹೋಬಳಿಯ ಸರ್ವೆ ನಂಬರ್‌ 79ರಲ್ಲಿ ಒಟ್ಟು 115.09 ಎಕರೆ ಇದೆ. ಇದರಲ್ಲಿ 62.28 ಎಕರೆ ಖರಾಬು ಗೋಮಾಳ ಜಮೀನು ಎಂದು ನಮೂದಾಗಿದೆ. ಇನ್ನುಳಿದ 16 ಎಕರೆ ವಿಸ್ತೀರ್ಣ ಜಮೀನು ಕ್ರಮವಾಗಿ ಸಯ್ಯದ್‌ ಅಪ್ಸ್‌ ಮಹಮ್ಮದ್‌ ಅವರಿಗೆ ಒಟ್ಟು 15 ಎಕರೆ, ವಿದ್ಯಾ ಗೋಯಿಲ್‌ ಎಂಬುವರ ಹೆಸರಿನಲ್ಲಿ 1 ಎಕರೆ ಜಮೀನು ಇರುವುದು ಗೊತ್ತಾಗಿದೆ.

 

ಜಾಲ ಹೋಬಳಿ ಶೆಟ್ಟಿಗೆರೆ ಗ್ರಾಮದ ಸರ್ವೆ ನಂಬರ್‌ 80ರಲ್ಲಿ ಸರ್ಕಾರಿ ಜಮೀನು ಖಾಸಗಿ ವ್ಯಕ್ತಿಗಳ ಪಾಲಾಗಲು ಅಕ್ರಮಕ್ಕೆ ಸಹಕರಿಸಿದ್ದ ಆರೋಪದಡಿ ಭೂ ಮಾಪಕ ರಂಗಸ್ವಾಮಿ (45) ಎಂಬುವರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

 

ಭೂ ಮಾಪನಾ ಇಲಾಖೆಯ ಅಧಿಕಾರಿ ಇ. ಪ್ರಕಾಶ್ ಅವರು ಕೆಲ ದಾಖಲೆ ಸಮೇತ ದೂರು ನೀಡಿದ್ದರು. ಬೆಂಗಳೂರು ಉತ್ತರ ಯಲಹಂಕ ತಾಲ್ಲೂಕು ಕಚೇರಿಯಲ್ಲಿ ಸರ್ಕಾರಿ ಭೂ ಮಾಪಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ ರಂಗಸ್ವಾಮಿ ಎಂಬಾತ ಜಾಲ ಹೋಬಳಿಯ ಶೆಟ್ಟಿಗೆರೆ ಗ್ರಾಮದ ಸರ್ವೇ ನಂಬರ್ 80ರಲ್ಲಿರುವ ಕ್ರಯಕ್ಕೆ ಪಡೆದಿರುವ 24 ಎಕರೆ ಜಮೀನು ದುರಸ್ತಿಪಡಿಸುವುದಕ್ಕಾಗಿ ರಚನಾ ಎಂಬುವವರು 2006ರ ಮಾರ್ಚ್ 31ರಂದು ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದ ಅಂದಿನ ತಹಶೀಲ್ದಾರ್, ಜಮೀನು ಅಳತೆಗೆ ಆದೇಶ ಹೊರಡಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ವಿವರಿಸಲಾಗಿತ್ತು.

 

ಸರ್ವೇ ನಂಬರ್ 80ರ ಜಮೀನು, ಸರ್ಕಾರಿ ಖರಾಬು ಜಮೀನು. ಈ ಸಂಬಂಧ ಲಭ್ಯವಿರುವ ಸರ್ಕಾರಿ ಕಡತಗಳನ್ನು ಸಂಗ್ರಹಿಸಿ ಅಳತೆ ಮಾಡಿ ವರದಿ ನೀಡಬೇಕಿತ್ತು. ಆದರೆ ದಾಖಲೆಗಳು ಕಣ್ಮರೆಯಾಗಿದ್ದವು ಎಂದು ಹೆಳಲಾಗಿತ್ತು. ಹೀಗಾಗಿ ಇವುಗಳನ್ನು ಪುನರ್ ಸೃಷ್ಟಿಸಿ ಪುನಃ ಅಳತೆ ಮಾಡಬೇಕಿತ್ತು. ಅರ್ಜಿದಾರರು ನೀಡಿದ್ದ ದಾಖಲೆಗಳನ್ನೇ ಅಂತಿಮವೆಂದು ಪರಿಗಣಿಸಿದ್ದ ಆರೋಪಿ ರಂಗಸ್ವಾಮಿ, ಅಳತೆ ಮಾಡಿ ವರದಿ ಸಲ್ಲಿಸಿದ್ದರು. ಇದರಿಂದಾಗಿ ಸರ್ಕಾರಿ ಜಮೀನು, ಖಾಸಗಿ ವ್ಯಕ್ತಿಗಳ ಪಾಲಾಗಿತ್ತು ಎಂದು ದೂರಿನಲ್ಲಿ ಹೇಳಲಾಗಿತ್ತು.

 

ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ  ಪತ್ತೆಯಾಗಿರುವ ಹಲವಾರು ಪ್ರಕರಣಗಳಲ್ಲಿ ಅಧಿಕಾರಿ, ನೌಕರರು ಭಾಗಿಯಾಗಿದ್ದಾರೆ ಎಂದು ಲೋಕಾಯುಕ್ತ ಸೇರಿದಂತೆ ಮತ್ತಿತರೆ ತನಿಖಾ ಸಂಸ್ಥೆಗಳು ಆರೋಪ ಸಾಬೀತು ಪಡಿಸಿದ್ದರೂ ಕ್ರಮಕೈಗೊಳ್ಳುವ ಬಗ್ಗೆ ಕಂದಾಯ ಸಚಿವರಾಗಿದ್ದ ಅಶೋಕ್‌ ಅವರು ಯಾವುದೇ ಕಠಿಣ ನಿಲುವು  ತಳೆದಿಲ್ಲ ಎಂದು ಗೊತ್ತಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img