Thursday | June 18, 2026 |

ನರೇಗಾ ಕಾಮಗಾರಿ; ಸಾಮಾಜಿಕ ಲೆಕ್ಕಪರಿಶೋಧನೆಯನ್ನೇ ನಡೆಸದ 274 ಪಂಚಾಯ್ತಿಗಳು

Support THE-FILE

spot_img

ಬೆಂಗಳೂರು; ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 14, 15ನೇ ಹಣಕಾಸು ಆಯೋಗದ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ರಾಜ್ಯದ ಗ್ರಾಮ ಪಂಚಾಯ್ತಿಗಳ ಪೈಕಿ ಒಟ್ಟು 274 ಪಂಚಾಯ್ತಿಗಳು ಸಾಮಾಜಿಕ ಲೆಕ್ಕ ಪರಿಶೋಧನೆಯನ್ನೇ ನಡೆಸಿಲ್ಲ.

ಅಲ್ಲದೇ ಸಾಮಾಜಿಕ ಲೆಕ್ಕ ಪರಿಶೋಧನೆ ನಡೆಸಿದ್ದ ಪಂಚಾಯ್ತಿಗಳ ಪೈಕಿ 169 ಪಂಚಾಯ್ತಿಗಳು ವರದಿಗಳನ್ನು ಸಲ್ಲಿಸಿಲ್ಲ. ಹಾಗೆಯೇ 246 ಪಂಚಾಯ್ತಿಗಳು ಆಯವ್ಯಯವನ್ನೇ ತಯಾರಿಸಿಲ್ಲ ಎಂದು ಕರ್ನಾಟಕ ರಾಜ್ಯಲೆಕ್ಕ ಪರಿಶೋಧಕರ ವರದಿಯು ಹೊರಗೆಡವಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಗಳು 2006ರ ನಿಯಮ 112(1) ಅನ್ವಯ ರಾಜ್ಯದ ಗ್ರಾಮ ಪಂಚಾಯ್ತಿಗಳ 2020-21ನೇ ಸಾಲಿನ ಆರ್ಥಿಕ ವ್ಯವಹಾರಗಳ ಲೆಕ್ಕಪರಿಶೋಧನೆ ನಡೆಸಿ ಈ ಸಂಬಂಧ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಿದೆ. ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ನರೇಗಾ ಯೋಜನೆಯಡಿ ಬೆಂಗಳೂರು ವಿಭಾಗದ 21 ಮತ್ತು 14 ಹಾಗೂ 15ನೇ ಹಣಕಾಸು ಆಯೋಗದ ಯೋಜನೆಯಡಿ 33 ಪಂಚಾಯ್ತಿಗಳು ಸಾಮಾಜಿಕ ಲೆಕ್ಕ ಪರಿಶೋಧನೆಯನ್ನು ನಡೆಸಿಲ್ಲ. ಅದೇ ರೀತಿ ಬೆಳಗಾವಿ ವಿಭಾಗದ 35 ಪಂಚಾಯ್ತಿಗಳು (ನರೇಗಾ) 76 ಪಂಚಾಯ್ತಿಗಳು (14/15 ಹಣಕಾಸು ಯೋಜನೆ), ಕಲ್ಬುರ್ಗಿ ವಿಭಾಗದ 20 (ನರೇಗಾ) 43 (14/15 ಹಣಕಾಸು ಯೋಜನೆ) 43 ಪಂಚಾಯ್ತಿಗಳು, ಮೈಸೂರು ವಿಭಾಗದ 15 (ನರೇಗಾ) 31 (14/15 ಹಣಕಾಸು ಯೋಜನೆ) ಪಂಚಾಯ್ತಿಗಳು ಸಾಮಾಜಿಕ ಲೆಕ್ಕ ಪರಿಶೋಧನೆಯನ್ನು ನಡೆಸಿಲ್ಲ ಎಂಬುದು ವರದಿಯಿಂದ ಗೊತ್ತಾಗಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2021-22 ಮತ್ತು 2022-23ನೇ ಸಾಲಿಗೆ ಸಂಬಂಧಿಸಿದ ಸಾಮಗ್ರಿ ಬಿಲ್‌ಗಳ ಪಾವತಿ ಮತ್ತು ರಾಜ್ಯದ ಕೂಲಿ ಕಾರ್ಮಿಕರಿಗೆ ಕೂಲಿ ಪಾವತಿ ಮಾಡಲು ಕೇಂದ್ರ ಸರ್ಕಾರವು ತನ್ನ ಪಾಲಿನ ಅನುದಾನವನ್ನು ಇನ್ನೂ ಬಿಡುಗಡೆ ಮಾಡಿರಲಿಲ್ಲ. ಹಣ ಬಿಡುಗಡೆಗೆ ಕೇಂದ್ರದ ಮೇಲೆ ಒತ್ತಡ ಹೇರಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರವು ಕೇಂದ್ರ ಸರ್ಕಾರದ ಪರವಾಗಿಯೇ 750 ಕೋಟಿ ರು.ಗಳನ್ನು ಮುಂಗಡವಾಗಿ ಬಿಡುಗಡೆ ಮಾಡಿದ್ದನ್ನು ಸ್ಮರಿಸಬಹುದು.

ಲೆಕ್ಕ ಪರಿಶೋಧನೆಗೆ ಒಳಪಡಿಸಿದ್ದ 559 ಪಂಚಾಯ್ತಿಗಳ ಪೈಕಿ 246 ಗ್ರಾಮ ಪಂಚಾಯ್ತಿಗಳು ಆಯವ್ಯಯವನ್ನೇ ತಯಾರಿಸಿಲ್ಲ. ಗ್ರಾಮ ಪಂಚಾಯ್ತಿ ನಿಧಿಯಿಂದ ಯಾವುದೇ ವೆಚ್ಚವನ್ನು ಆಯವ್ಯಯದಲ್ಲಿ ಅನುದಾನದ ಹಂಚಿಕೆ ಇಲ್ಲದೇ ಮಾಡುವಂತಿಲ್ಲ. ಆದರೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅಧ್ಯಕ್ಷರು ಆಯವ್ಯಯವನ್ನೇ ತಯಾರಿಸದೇ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ರ ಸೆಕ್ಷನ್‌ 241 ಮತ್ತು ಕರ್ನಾಟಕ ಪಂಚಾಯತ್‌ ರಾಜ್‌ (ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು) ನಯಮಗಳು 2006ರ ನಿಯಮ 11ನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಅದೇ ರೀತಿ ಅನುಮೋದಿತ ಆಯವ್ಯಯವಿಲ್ಲದೇ ಗ್ರಾಮ ಪಂಚಾಯ್ತಿಯಿಂದ ಭರಿಸಲಾದ ವೆಚ್ಚಗಳ ನಿಯಮಗಳನ್ನೂ ಉಲ್ಲಂಘಿಸಿದಂತಾಗಿದೆ ಎಂದು ವರದಿ ಹೇಳಿದೆ. ಹಾಗೆಯೇ ನಿಯಮಗಳಿಗೆ ವ್ಯತಿರಿಕ್ತವಾಗಿ 93 ಗ್ರಾಮ ಪಂಚಾಯ್ತಿಗಳು ವಿಳಂಬವಾಗಿ ಆಯವ್ಯಯ ತಯಾರಿಸಿ ಅನುಮೋದನೆ ಪಡೆದಿದೆ. ಬೆಂಗಳೂರು ವಿಭಾಗದ 42, ಬೆಳಗಾವಿ ವಿಭಾಗದ 16, ಕಲ್ಬುರ್ಗಿ 09, ಮೈಸೂರು ವಿಭಾಗದ 26 ಪಂಚಾಯ್ತಿಗಳು ವಿಳಂಬವಾಗಿ ಆಯವ್ಯಯ ತಯಾರಿಸಿವೆ.

ಅಲ್ಲದೇ ಬೆಂಗಳೂರು ವಿಭಾಗದ 133, ಬೆಳಗಾವಿ ವಿಭಾಗದ 72, ಕಲ್ಬುರ್ಗಿ ವಿಭಾಗದ 72, ಮೈಸೂರು ವಿಭಾಗದ 95 ಸೇರಿದಂತೆ ಒಟ್ಟಾರೆ 372 ಪಂಚಾಯ್ತಿಗಳು ಆಯವ್ಯಯ ನಿಯಂತ್ರಣ ವಹಿಯನ್ನೇ ನಿರ್ವಹಿಸಿಲ್ಲ ಎಂದೂ ವರದಿ ಹೇಳಿದೆ. ಈ ಅವಧಿಯಲ್ಲಿ ಕೆ ಎಸ್‌ ಈಶ್ವರಪ್ಪ ಅವರು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಸಚಿವರಾಗಿ ಕಾರ್ಯನಿರ್ವಹಿಸಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img