Sunday | September 13, 2026 |

ಖಾಸಗಿ ಸಂಸ್ಥೆಗೆ 10 ಕೋಟಿ ರು ಮೌಲ್ಯದ ಸರ್ಕಾರಿ ಜಮೀನು; ಕಾನೂನು ಅಭಿಪ್ರಾಯ ಧಿಕ್ಕರಿಸಿದ ಸಚಿವ

Support THE-FILE

spot_img

ಬೆಂಗಳೂರು; ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗಾಗಲೀ ಅಥವಾ ಇತರೆ ಖಾಸಗಿ ಸಂಸ್ಥೆಗಳಿಗಾಗಲೀ ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶವಿಲ್ಲದಿದ್ದರೂ ಕರ್ನಾಟಕ ಬ್ಯಾಸ್ಕೆಟ್‌ ಬಾಲ್‌ ಅಸೋಸಿಯೇಷನ್‌ ಖಾಸಗಿ ಸಂಸ್ಥೆಗೆ ಅಂದಾಜು 10 ಕೋಟಿ ರು ಬೆಲೆ ಬಾಳುವ 5 ಎಕರೆ ಬೀಳು ಜಮೀನನ್ನು ಮಂಜೂರು ಮಾಡಲು ಸಚಿವ ಸಂಪುಟವು ಅನುಮೋದಿಸಿರುವುದು ವಿವಾದಕ್ಕೆ ಕಾರಣವಾಗಿದೆ.

 

ವಿಶೇಷವೆಂದರೆ ಈ ಸಂಸ್ಥೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಪ್ರಧಾನ ಕಾರ್ಯದರ್ಶಿ ಮತ್ತು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌  ಬಿ ದಯಾನಂದ ಅವರು ಅಧ್ಯಕ್ಷರಾಗಿರಾಗಿದ್ದಾರೆ ಎಂದು ತಿಳಿದು ಬಂದಿದೆ.

 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಗೊಬ್ಬರಗುಂಟೆ ಗ್ರಾಮದ ಸರ್ವೆ ನಂಬರ್‌ 64ಲ್ಲಿನ ಒಟ್ಟು 19.34 ಎಕರೆ ವಿಸ್ತೀರ್ಣ ಪೈಕಿ 5 ಎಕರೆ ಬೀಳು ಜಮೀನನ್ನು ಮಂಜೂರು ಮಾಡಲು ಕಾನೂನು ಮತ್ತು ಆರ್ಥಿಕ ಇಲಾಖೆಯು ಅಸಮ್ಮತಿ ವ್ಯಕ್ತಪಡಿಸಿತ್ತು.

 

ಅಲ್ಲದೇ ಈ ಜಮೀನು ಸರ್ಕಾರದ ವಿವಿಧ ಯೋಜನೆಗಳಿಗೆ ಅವಶ್ಯಕವಾಗಿರುವ ಕಾರಣ ಈ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅವರು ಸಚಿವ ಸಂಪುಟ ಟಿಪ್ಪಣಿ ಹಾಳೆಯಲ್ಲಿ ಸರ್ಕಾರದ ಗಮನಕ್ಕೆ ತಂದಿದ್ದರು ಎಂಬುದು ಗೊತ್ತಾಗಿದೆ.

 

ಆದರೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಚಿವ ಸಂಪುಟದ ಮುಂದೆ ಕಡತ ಮಂಡಿಸಿ ಅನುಮೋದನೆ ಪಡೆದುಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಆರ್‌ಟಿಸಿಯೂ ಸೇರಿದಂತೆ ಇತರೆ ದಾಖಲೆಗಳು (RD 225 LGB 2021) ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಘ ಪರಿವಾರ ಹಿನ್ನೆಲೆಯ ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌ ಸೇರಿದಂತೆ ಇನ್ನಿತರೆ ಖಾಸಗಿ ಸಂಘ ಸಂಸ್ಥೆಗಳಿಗೆ ನೂರಾರು ಎಕರೆ ಗೋಮಾಳ ಜಮೀನನ್ನು ಮಂಜೂರು ಮಾಡಿದ್ದನ್ನು ರದ್ದುಗೊಳಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿಕೆ ನೀಡಿದ್ದರ ಬೆನ್ನಲ್ಲೇ ಸರ್ಕಾರಿ ಬೀಳು ಜಮೀನನ್ನು ಖಾಸಗಿ ಸಂಸ್ಥೆಗೆ ಮಂಜೂರು ಮಾಡಲು ಅನುಮತಿ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಸರ್ವೆ ನಂಬರ್‌ರಲ್ಲಿ ಒಟ್ಟು 19.34 ಎಕರೆ ಜಮೀನಿನಲ್ಲಿ 14 ಎಕರೆ ಆಶ್ರಯ ಯೋಜನೆಗೆಂದು ರಾಜೀವ್‌ಗಾಂಧಿ ವಸತಿ ನಿಗಮಕ್ಕೆ ಮಂಜೂರಾಗಿದೆ ಎಂಬುದು ಆರ್‌ಟಿಸಿ ದಾಖಲೆ ಮತ್ತು ಸಚಿವ ಸಂಪುಟ ಟಿಪ್ಪಣಿ ಹಾಳೆಗಳಿಂದ ತಿಳಿದು ಬಂದಿದೆ.

 

ಜಿಲ್ಲಾಧಿಕಾರಿ ಅವರ ವರದಿ ಪ್ರಕಾರ ಕರ್ನಾಟಕ ಬ್ಯಾಸ್ಕೆಟ್‌ ಬಾಲ್‌ ಅಸೋಸಿಯೇಷನ್‌ಗೆ ನೀಡಲು ಪ್ರಸ್ತಾಪಿಸಿದ್ದ ಜಮೀನಿನ ಮಾರ್ಗಸೂಚಿ ಮೌಲ್ಯವು ಎಕರೆಯೊಂದಕ್ಕೆ ಸುಮಾರು 40 ಲಕ್ಷ ರು. ಇದೆ. ಆದರೆ ಜಮೀನಿನ ಮಾರುಕಟ್ಟೆ ಮೌಲ್ಯವು ಮಾರ್ಗಸೂಚಿ ಮೌಲ್ಯಕ್ಕಿಂತ ಹೆಚ್ಚಾಗಿತ್ತು.

 

ಕರ್ನಾಟಕ ಬ್ಯಾಸ್ಕೆಟ್‌ ಬಾಲ್‌ ಅಸೋಸಿಯೇಷನ್‌ಗೆ 5 ಎಕರೆ ಜಮೀನು ಮಂಜೂರು ಮಾಡುವ ಸಂಬಂಧ ಕಂದಾಯ ಇಲಾಖೆಯು ಕಾನೂನು ಇಲಾಖೆಗೆ ಅಭಿಪ್ರಾಯ ಕೋರಿತ್ತು.

 

ಕಾನೂನು ಇಲಾಖೆ ಅಭಿಪ್ರಾಯದಲ್ಲೇನಿದೆ?

 

ಈ ಪ್ರಕರಣದಲ್ಲಿ ಕಲಂ 22(ಎ)ರಲ್ಲಿ ತಿಳಿಸಿರುವ ಯಾವುದೇ ಉದ್ದೇಶವನ್ನು ಈ ಪ್ರಸ್ತಾವನೆಯು ಹೊಂದಿರುವುದಿಲ್ಲ. ಮುಂದುವರೆದು ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗಾಗಲೀ ಅಥವಾ ಇತರೆ ಖಾಸಗಿ ಸಂಸ್ಥೆಗಳಿಗಾಗಲೀ ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲವಾದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಕಸಬಾ ಹೋಬಳಿ ಗೊಬ್ಬರಗುಂಟೆ ಗ್ರಾಮದ ಸ. ನಂ 64ರಲ್ಲಿನ 5 ಎಕರೆ ಜಮೀನನ್ನು ಕರ್ನಾಟಕ ಸ್ಟೇಟ್‌ ಬ್ಯಾಸ್ಕೆಟ್‌ ಬಾಲ್‌ ಅಸೋಸಿಯೇಷನ್‌ಗೆ ಮಂಜೂರು ಮಾಡಲು ಅವಕಾಶವಿರುವುದಿಲ್ಲ ಎಂದು (ಟಿಪ್ಪಣಿ ಸಂಖ್ಯೆ; ಲಾ/ಅಭಿಪ್ರಾಯ/124/2023 ದಿನಾಂಕ 08-03-2023) ಅಭಿಪ್ರಾಯ ನೀಡಿತ್ತು.

 

ಅದೇ ರೀತಿ ಆರ್ಥಿಕ ಇಲಾಖೆಯು ಕಂದಾಯ ಇಲಾಖೆಯ ಪ್ರಸ್ತಾವನೆಗೆ ಅಸಮ್ಮತಿ ವ್ಯಕ್ತಪಡಿಸಿತ್ತು.

 

 

ಆರ್ಥಿಕ ಇಲಾಖೆ ಅಭಿಪ್ರಾಯವಿದು

 

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಪ್ರಸ್ತಾವನೆಗೆ ಸಂಬಂಧಿಸಿದಂತೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗಳಿಗಾಗಲೀ ಅಥವಾ ಇತರೆ ಖಾಸಗಿ ಖಾಸಗಿ ಸಂಸ್ಥೆಗಳಿಗಾಗಲೀ ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲವಾದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಕಸಬಾ ಹೋಬಳಿ ಗೊಬ್ಬರ ಗುಂಟೆ ಗ್ರಾಮದ ಸರ್ವೆ ನಂಬರ್‌ 64ರಲ್ಲಿಲನ 5 ಎಕರೆ ಬಿ ಖರಾಬು ಜಮೀನನ್ನು ಕರ್ನಾಟಕ ಸ್ಟೇಟ್‌ ಬ್ಯಾಸ್ಕೆಟ್‌ ಬಾಲ್‌ ಅಸೋಸಿಯೇಷನ್‌ಗೆ ಮಂಜೂರು ಮಾಡಲು ಅವಕಾಶವಿರುವುದಿಲ್ಲವೆನ್ನುವುದು ಕಾನೂನು ಇಲಾಖೆಯು ನೀಡಿರುವ ಅಭಿಪ್ರಾಯದ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಯ ಸಹಮತಿ ಇಲ್ಲ (FD 372 Exp-7/2023, 18.03.2023) ಎಂದು ಕಂದಾಯ ಇಲಾಖೆಗೆ ತಿಳಿಸಿತ್ತು.

 

ಕಂದಾಯ ಇಲಾಖೆ ಪ್ರತಿಕ್ರಿಯೆಯೇನಾಗಿತ್ತು?

 

ಈ ಪ್ರಕರಣದಲ್ಲಿ ಕಾನೂನು ಇಲಾಖೆಯು ನೀಡಿದ್ದ ಅಭಿಪ್ರಾಯವನ್ನು ಕಂದಾಯ ಇಲಾಖೆಯು ಒಪ್ಪಿತ್ತು. ಆದರೆ ಆರ್ಥಿಕ ಇಲಾಖೆಯ ಅಭಿಪ್ರಾಯವನ್ನು ಒಪ್ಪಿರಲಿಲ್ಲ. ‘ಆರ್ಥಿಕ ಇಲಾಖೆಯು ಸದರಿ ಜಮೀನನ್ನು ಬಿ ಖರಾಬು ಜಮೀನೆಂದು ಅಭಿಪ್ರಾಯದಲ್ಲಿ ತಿಳಿಸಿರುತ್ತದೆ. ಪ್ರಸ್ತುತ ಆರ್‌ಟಿಸಿಯಂತೆ ಈ ಜಮೀನು ಬಿ ಖರಾಬು ಅಂಕಣದಲ್ಲಿ ನಮೂದಾಗಿರುವುದಿಲ್ಲ. ಈ ಜಮೀನು ಸರ್ಕಾರಿ ಬೀಳು ಜಮೀನಾಗಿರುತ್ತದೆ.

 

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಕಸಬಾ ಹೋಬಳಿ ಗೊಬ್ಬರಗುಂಟೆ ಗ್ರಾಮದ ಸ ನಂ 64ರ 5 ಎಕರೆ ಸರ್ಕಾರಿ ಬೀಳು ಜಮೀನನ್ನು ಬ್ಯಾಸ್ಕೆಟ್‌ ಬಾಲ್‌ ಅಕಾಡೆಮಿ ಸ್ಥಾಪಿಸಲು ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 27ರ ಪ್ರಕಾರ ಜಮೀನಿನ ಕೃಷಿಯೇತರ ಪ್ರಚಲಿತ ಮಾರುಕಟ್ಟೆ ಮೌಲ್ಯ ಮತ್ತು ಇನ್ನಿತರೆ ಶಾಸನಬದ್ಧ ಶುಲ್ಕಗಳನ್ನು ವಿಧಿಸಿ ಮಂಜೂರು ಮಾಡುವ ಪ್ರಸ್ತಾವನೆಯನ್ನು ಸಚಿವ ಸಂಪುಟದ ಸೂಕ್ತ ನಿರ್ಣಯಕ್ಕೆ ಮಂಡಿಸಿತ್ತು ಎಂಬುದು ಸಚಿವ ಸಂಪುಟ ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img