Saturday | June 13, 2026 |

ಸರ್ಕಾರದ ‘200 ಕೋಟಿ’ ರಾಮಭಕ್ತಿಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್‌

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿರುವ ಪುರಾತನ ರಾಮಮಂದಿರ ಜೀರ್ಣೋದ್ಧಾರ ಮತ್ತು  ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣಕ್ಕೆ ಒಟ್ಟಾರೆ 200 ಕೋಟಿ ರು. ಮೊತ್ತದಲ್ಲಿ ಸರ್ಕಾರವು ಘೋಷಿಸಲಿರುವ  ಹೊಸ ಯೋಜನೆಯು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ಇದೇ ಫೆಬ್ರುವರಿಯಲ್ಲಿ ಮಂಡಿಸಲಿರುವ  ಆಯವ್ಯಯದಲ್ಲಿ  ಈ ಯೋಜನೆಯ ಘೋಷಣೆಯನ್ನು  ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯೂ  ಸಮರ್ಥಿಸಿಕೊಂಡಿದೆ.

ರಾಮಮಂದಿರಗಳ ಜೀರ್ಣೋದ್ಧಾರ ಮತ್ತು ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣಕ್ಕೆ 200 ಕೋಟಿ ರು ಮೊತ್ತದ ಯೋಜನೆಯನ್ನು ಮುಂಬರುವ ಬಜೆಟ್‌ ಅಧಿವೇಶನದಲ್ಲಿ ಸರ್ಕಾರವು ಘೋಷಿಸಲಿದೆ ಎಂದು ‘ದಿ ಫೈಲ್‌-ವಾರ್ತಾಭಾರತಿ’ಯು ವರದಿ ಪ್ರಕಟಿಸಿತ್ತು.

ಈ ವರದಿಯು ರಾಜಕೀಯ ಅಂಗಳದಲ್ಲಿ ಬಿರುಸಿನ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ   ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು  ದಿ ಫೈಲ್‌ನ ಸಹಭಾಗಿ ವಾರ್ತಾಭಾರತಿ ಪ್ರಕಟಿಸಿದ್ದ ವರದಿಯನ್ನು ಹಂಚಿಕೊಂಡಿದೆ.

ಟ್ವೀಟ್‌ನಲ್ಲೇನಿದೆ?

‘ರಾಜ್ಯದ ಪುರಾತನ ರಾಮ ಮಂದಿರಗಳನ್ನು ಜೀರ್ಣೋದ್ದಾರ ಮಾಡಲು ಸರ್ಕಾರ 100 ಕೋಟಿ ಹಣ ಮೀಸಲಿಟ್ಟಿದೆ. ರಾಮ ಕರ್ನಾಟಕದಲ್ಲೂ ಇದ್ದಾನೆ, ಆಸ್ತಿಕರ ಭಕ್ತಿಗಾಗಿ.. ಕರ್ನಾಟಕದಲ್ಲಿನ ರಾಮನ ಭಕ್ತರು ಕರ್ನಾಟಕದಲ್ಲೇ ರಾಮನ ದರ್ಶನ, ಆಶೀರ್ವಾದ ಪಡೆಯಬಹುದು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಪುರಾತನ ದೇವಾಲಯಗಳನ್ನು ಜೀರ್ಣೋದ್ದಾರ ಮಾಡುವ ಕ್ರಮ ಕೈಗೊಂಡಿದೆ. ದೇವರು, ಧರ್ಮವೆಂದರೆ ನಮಗೆ ರಾಜಕೀಯದ ವಸ್ತುವಲ್ಲ, ನಂಬಿಕೆಗಳಿಗೆ, ಭಕ್ತಿಗೆ ಇರುವ ಆದ್ಯಾತ್ಮದ ಮಾರ್ಗವಷ್ಟೇ,’ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದೆ.

ಇದೇ ಫೆಬ್ರುವರಿ-ಮಾರ್ಚ್‌ನಲ್ಲಿ ಮಂಡಿಸಲಿರುವ 2024-25ನೇ ಸಾಲಿನ ಆಯವ್ಯಯದಲ್ಲಿ ಪುರಾತನ ರಾಮ ಮಂದಿರ ಜೀರ್ಣೋದ್ಧಾರ ಮತ್ತು ಅಯೋಧ್ಯೆಯಲ್ಲಿ ಬೃಹತ್‌ ವಸತಿ ಗೃಹ ನಿರ್ಮಾಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ.

2024-25ನೇ ಸಾಲಿನ ಆಯವ್ಯಯಕ್ಕೆ ಸಂಬಂಧಿಸಿದಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯು ರೂಪಿಸಿರುವ ಹೊಸ ಯೋಜನೆಗಳ ಪಟ್ಟಿಯಲ್ಲಿ ರಾಮ ಮಂದಿರ ಜೀರ್ಣೋದ್ಧಾರ ಮತ್ತು ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣವೂ ಸೇರಿದೆ. ಈ ಕುರಿತು ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೂ ಇಲಾಖೆ ಅಧಿಕಾರಿಗಳು ಚರ್ಚಿಸಿದ್ದಾರೆ. ಈ ಕುರಿತು ‘ದಿ ಫೈಲ್‌’ ಮತ್ತು ವಾರ್ತಾಭಾರತಿ’ ಜನವರಿ 24ರಂದು ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

ರಾಮಮಂದಿರ ಜೀರ್ಣೋದ್ದಾರ, ಅಯೋಧ್ಯೆಯಲ್ಲಿ ವಸತಿಗೃಹ ನಿರ್ಮಾಣ; 200 ಕೋಟಿ ರು ಅನುದಾನಕ್ಕೆ ಪ್ರಸ್ತಾವ

ಬೆಂಗಳೂರು ನಗರದ ಮಹದೇವಪುರದಲ್ಲಿ ನಡೆದಿದ್ದ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರು ಭಾಗಿಯಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ 100 ಕೋಟಿ ಮತ್ತು ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣ ಮಾಡಲು ಉದ್ದೇಶಿಸಿರುವುದು ಕುತೂಹಲ ಮೂಡಿಸಿತ್ತು.

‘ರಾಜ್ಯದಲ್ಲಿ 100 ಪುರಾತನ ರಾಮ ಮಂದಿರಗಳ ಜೀರ್ಣೋದ್ಧಾರಕ್ಕಾಗಿ ತಲಾ 1.00 ಕೋಟಿ ರು.ಗಳ ವೆಚ್ಚದಲ್ಲಿ ಒಟ್ಟು 100.00 ಕೋಟಿ ರು.ಗಳನ್ನು ಒದಗಿಸಲು ಉದ್ದೇಶಿಸಿದೆ. ಅಯೋಧ್ಯೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ನಿವೇಶನ ಹಂಚಿಕೆ ಮಾಡಿದರೆ ರಾಜ್ಯ ಸರ್ಕಾರವು 100. 00 ಕೋಟಿ ರು. ವೆಚ್ಚದಲ್ಲಿ ವಸತಿ ಗೃಹವನ್ನು ನಿರ್ಮಾಣ ಮಾಡಲು ಉದ್ದೇಶಿಸಿದೆ. ಈ ಎರಡೂ ಯೋಜನೆಗಳಿಗೆ ನಿಗದಿಗೊಳಿಸಿರುವ ಮೊತ್ತವು ಆರ್ಥಿಕ ಇಲಾಖೆಯ ಸೂಚಿಸಿರುವ ಮೊತ್ತದೊಳಗೇ ಇದೆ,’ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯು ಹೊಸ ಯೋಜನೆಗಳನ್ನು ವಿವರಿಸಿದೆ.

ಅದೇ ರೀತಿ ಮುಜುರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ನಿಗಮ, ದೇವಾಲಯ, ಕೊಪ್ಪಳ ಜಿಲ್ಲೆ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗಾಗಿ ಪ್ರಾಧಿಕಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಅಭಿವೃದ್ಧಿಗಾಗಿ ಪ್ರಾಧಿಕಾರವನ್ನು ರಚಿಸಲಾಗುವುದು ಎಂದು ಘೋಷಿಸಲಿದೆ. ಈ ಎರಡೂ ಪ್ರಾಧಿಕಾರಗಳ ರಚನೆಯು ಆಯವ್ಯಯದ ಘೋಷಣೆಯಾಗಿದೆ. ಸರ್ಕಾರದ ಸಂಚಿತ ನಿಧಿಯಿಂದ ಅನುದಾನವು ಅಗತ್ಯವಿರುವುದಿಲ್ಲ ಎಂದು ಇಲಾಖೆಯು ವಿವರಿಸಿರುವುದು ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img