Friday | October 30, 2026 |

ಭೂ ಕಂದಾಯ, ನೀರಿನ ಕರ, ದಂಡ ಸಂಗ್ರಹದಲ್ಲಿ ಹಿನ್ನಡೆ; ವಸೂಲಾತಿಗೆ 1,484.29 ಕೋಟಿ ರು ಬಾಕಿ

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿ 2023-24ನೇ ಸಾಲಿಗೆ  ಭೂ ಕಂದಾಯ, ನೀರಿನ ಕರ, ದಂಡ  ಮತ್ತು ಇತರೆ ಕಂದಾಯಗಳ ರೂಪದಲ್ಲಿ ಬೇಡಿಕೆ ಪ್ರಕಾರ 1,514.05 ಕೋಟಿ ರು  ವಸೂಲು ಮಾಡಬೇಕಿದ್ದ ಕಂದಾಯ ಇಲಾಖೆಯು ತನ್ನ ಗುರಿಯನ್ನು ಮುಟ್ಟುವಲ್ಲಿ ವಿಫಲವಾಗಿದೆ. ಒಟ್ಟು ಬೇಡಿಕೆ ಪೈಕಿ ಕೇವಲ 29.76 ಕೋಟಿ ರು ಮಾತ್ರ ವಸೂಲು ಮಾಡಿದೆ. ವಸೂಲಾತಿಗೆ ಇನ್ನೂ 1,484.29  ಕೋಟಿ ರು ಬಾಕಿ ಇರಿಸಿಕೊಂಡಿದೆ.

 

ಭೂ ಕಂದಾಯ ಹಾಗೂ ಇತರೆ ಕರ, ದಂಡಗಳ ವಸೂಲಾತಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಸಿದ್ಧಪಡಿಸಿರುವ ವಾರ್ಷಿಕ ವರದಿಯಲ್ಲಿ ಈ ವಿವರಗಳಿವೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ರೇರಾ ಕಾಯ್ದೆ ಮತ್ತು ನಿಯಮಗಳಡಿಯಲ್ಲಿ ರಾಜ್ಯದ ಬೆಂಗಳೂರು ನಗರ ಜಿಲ್ಲೆ ಸೇರಿದಂತೆ 7 ಜಿಲ್ಲೆಗಳಲ್ಲಿ 423.51 ಕೋಟಿ ರು.ಪ್ರಮಾಣದಲ್ಲಿ ಭೂ ಕಂದಾಯ ಬಾಕಿ ಇರುವುದರ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆಯ ವ್ಯಾಪ್ತಿಯೊಂದರಲ್ಲೇ 1,484.29  ಕೋಟಿ ರು ವಸೂಲಾತಿಗೆ ಬಾಕಿ ಇರುವ ವಿಚಾರವು ಮುನ್ನೆಲೆಗೆ ಬಂದಿದೆ.

 

2023-24ನೇ ಸಾಲಿನಲ್ಲಿ ಭೂ ಕಂದಾಯಕ್ಕೆ ಸಂಬಂಧಿಸಿಂತೆ ನಾಲ್ಕು ವಿಭಾಗಗಳಿಂದ 36.96 ಕೋಟಿ ರು ಬೇಡಿಕೆ ಇತ್ತು. ಈ ಪೈಕಿ 14.57 ಕೋಟಿ ರು ವಸೂಲಾಗಿದೆ. ಇನ್ನೂ 22.38 ಕೋಟಿ ರು ಬಾಕಿ ಇದೆ. ಒಟ್ಟಾರೆ ಶೇ.39.44ರಷ್ಟು ಮಾತ್ರ ಪ್ರಗತಿ ಸಾಧಿಸಿರುವುದು ವರದಿಯಿಂದ ಗೊತ್ತಾಗಿದೆ.

 

ಬೆಂಗಳೂರು ವಿಭಾಗದಲ್ಲಿ 4.84 ಕೋಟಿ ರು. ಬೇಡಿಕೆ ಇತ್ತು. ಈ ಪೈಕಿ 1.82 ಕೋಟಿ ಮಾತ್ರ ವಸೂಲಾಗಿದೆ. ಬಾಕಿ 3.02 ಕೋಟಿ ರು ಇದೆ. ಮೈಸೂರು ವಿಭಾಗದಲ್ಲಿ 12.68 ಕೋಟಿ ರು ಬೇಡಿಕೆ ಪೈಕಿ 11.81 ಕೋಟಿ ರು ವಸೂಲಾಗಿದೆ. 84.32 ಲಕ್ಷ ರು ಬಾಕಿ ಇದೆ. ಬೆಳಗಾವಿ ವಿಭಾಗದಲ್ಲಿ 3.31 ಕೋಟಿ ರು ಬೇಡಿಕೆ ಪೈಕಿ 24.17 ಲಕ್ಷ ರು ವಸೂಲಾಗಿದೆ. ಬಾಕಿ 3.07 ಕೋಟಿ ರು.ಇದೆ. ಕಲ್ಬುರ್ಗಿ ವಿಭಾಗದಲ್ಲಿ 16.11 ಕೋಟಿ ರು ಬೇಡಿಕೆ ಪೈಕಿ 67.37 ಲಕ್ಷ ರು ವಸೂಲಾಗಿದೆ. 15.44 ಕೋಟಿ ರು ಬಾಕಿ ಇರುವುದು ತಿಳಿದು ಬಂದಿದೆ.

 

ನೀರಿನ ಕರ ಮತ್ತು ದಂಡ ವಸೂಲಾತಿ ಸಂಬಂಧ 2023-24ನೇ ಸಾಲಿಗೆ ಒಟ್ಟಾರೆ  865.20 ಕೋಟಿ ರು ಬೇಡಿಕೆ ಅಂದಾಜಿಸಿತ್ತು. ನಾಲ್ಕು ವಿಭಾಗಗಳಿಂದ ಕೇವಲ  8.14 ಕೋಟಿ ರು ವಸೂಲಾಗಿದೆ. ವಸೂಲಾತಿಗೆ 85.70 ಕೋಟಿ ರು ಬಾಕಿ ಇದೆ.

 

ಬೆಂಗಳೂರು ವಿಭಾಗದಲ್ಲಿ 63.33 ಕೋಟಿ ರು ಬೇಡಿಕೆ ಪೈಕಿ  ಕೇವಲ 26.65 ಲಕ್ಷ ವಸೂಲಾಗಿದೆ. ವಸೂಲಾತಿಗೆ 63.06 ಕೋಟಿ ರು ಬಾಕಿ ಇದೆ. ಮೈಸೂರು ವಿಭಾಗದಲ್ಲಿ 37.71 ಕೋಟಿ ರು ಬೇಡಿಕೆ ಪೈಕಿ 4.25 ಕೋಟಿ ವಸೂಲಾಗಿದ್ದು 37.28 ಕೋಟಿ ರು ಬಾಕಿ ಇದೆ. ಬೆಳಗಾವಿ ವಿಭಾಗದಲ್ಲಿ 13.16 ಕೋಟಿ ರು ಬೇಡಿಕೆ ಪೈಕಿ ಕೇವಲ 2.07 ಲಕ್ಷ ರು ವಸೂಲಾಗಿದ್ದು ಇನ್ನೂ 13.14 ಕೋಟಿ ರು ಬಾಕಿ ಇದೆ. ಕಲ್ಬುರ್ಗಿ ವಿಭಾಗದಲ್ಲಿ 411.56 ಕೋಟಿ ರು ಬೇಡಿಕೆ ಪೈಕಿ ಕೇವಲ 3.60 ಕೋಟಿ ಮಾತ್ರ ವಸೂಲಾಗಿದ್ದು 407.95 ಕೋಟಿ ರು ವಸೂಲಾತಿಗೆ ಬಾಕಿ ಇರುವುದು ಗೊತ್ತಾಗಿದೆ.

 

 

ಇತರೆ ಬಾಕಿ ರೂಪದಲ್ಲಿಯೂ 2023-24ನೇ ಸಾಲಿನಲ್ಲಿ  611.9 ಕೋಟಿ ರು ಬೇಡಿಕೆ ಇತ್ತು. ಈ ಪೈಕಿ ಕೇವಲ 7.05 ಕೋಟಿ ಮಾತ್ರ ವಸೂಲಾಗಿದೆ. ವಸೂಲಾತಿಗೆ 604.85 ಕೋಟಿ ರು ಬಾಕಿ ಇದೆ. ಬೆಂಗಳೂರು ವಿಭಾಗದಲ್ಲಿ 88.97 ಕೋಟಿ ರು ಬೇಡಿಕೆ ಪೈಕಿ 3.13 ಕೋಟಿ ವಸೂಲಾಗಿದೆ ಇದೆ. ವಸೂಲಾತಿಗೆ 85.84 ಕೋಟಿ ರು ಬಾಕಿ ಇದೆ.

 

ಮೈಸೂರು ವಿಭಾಗದಲ್ಲಿ 120.21 ಕೋಟಿ ರು ಬೇಡಿಕೆ ಪೈಕಿ 64.20 ಲಕ್ಷ ರು ಮಾತ್ರ ವಸೂಲಾಗಿದೆ.  119.57 ಕೋಟಿ ರು ಬಾಕಿ ಇದೆ. ಬೆಳಗಾವಿ ವಿಭಾಗದಲ್ಲಿ 106.38 ಕೋಟಿ ರು ಬೇಡಿಕೆ ಪೈಕಿ 2.57 ಕೋಟಿ ವಸೂಲಾಗಿದ್ದು ಇನ್ನೂ 103.80 ಕೋಟಿ ರು ವಸೂಲಾತಿಗೆ ಬಾಕಿ ಇದೆ. ಕಲ್ಬುರ್ಗಿ ವಿಭಾಗದಲ್ಲಿ 296.33 ಕೋಟಿ ರು ಬೇಡಿಕೆ ಪೈಕಿ ಕೇವಲ 70.31 ಲಕ್ಷ ರು ಮಾತ್ರ ವಸೂಲಾಗಿದೆ. ಈ ಕುರಿತು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

 

ದಂಡ ಪರಿಹಾರದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ಪರಿಗಣಿಸಿ ವಸೂಲು ಮಾಡುವ ವಿಷಯವನ್ನು ಸಕಾಲ ವ್ಯಾಪ್ತಿಗೊಳಪಡಿಸುವ ಸಂಬಂಧ ರೇರಾ ಪ್ರಾಧಿಕಾರ 2023ರ ಸೆ.26ರಂದು ನಡೆಸಿದ್ದ ಸಭೆಯಲ್ಲಿ 423.51 ಕೋಟಿ ರು ಪ್ರಮಾಣದಲ್ಲಿ ಭೂ ಕಂದಾಯ ಬಾಕಿ ಇರುವ ವಿಚಾರವು ಚರ್ಚೆಗೆ ಬಂದಿತ್ತು.

 

ರೇರಾ ಕಾಯ್ದೆ ಅಡಿಯಲ್ಲಿ ವಿಧಿಸಲಾಗುವ ದಂಡ, ಪರಿಹಾರದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ವಸೂಲು ಮಾಡುವ ಪ್ರಕ್ರಿಯೆಗೆ ತಗುಲುವ ವೆಚ್ಚಗಳನ್ನು ಭರಿಸಲು ಮತ್ತು ವಸೂಲಾತಿ ಶುಲ್ಕಗಳನ್ನು ವಿಧಿಸಲು ರೇರಾ ನಿಯಮಗಳಲ್ಲಿ ಸೂಕ್ತ ತಿದ್ದುಪಡಿ ತರುವ ಬಗ್ಗೆ ಕ್ರಮ ವಹಿಸಲು ವಸತಿ ಇಲಾಖೆಗೆ ಸೂಚಿಸಿತ್ತು.

 

ಭೂ ಕಂದಾಯ ಬಾಕಿ ಉಳಿಸಿಕೊಂಡಿರುವ ಜಿಲ್ಲೆಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯು ಪ್ರಥಮ ಸ್ಥಾನದಲ್ಲಿದೆ. ಈ ಜಿಲ್ಲೆಯಲ್ಲಿ 415.73 ಕೋಟಿ ರು. ಬಾಕಿ ಇದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 73.46 ಲಕ್ಷ ರು., ಮೈಸೂರು ಜಿಲ್ಲೆಯಲ್ಲಿ 2.33 ಕೋಟಿ ರು., ಧಾರವಾಡದಲ್ಲಿ 27.33 ಲಕ್ಷ ರು., ಬೆಳಗಾವಿಯಲ್ಲಿ 69.29 ಲಕ್ಷ ರು., ದಕ್ಷಿಣ ಕನ್ನಡದಲ್ಲಿ 3.20 ಕೋಟಿ ರು., ಉಡುಪಿಯಲ್ಲಿ 53.26 ಲಕ್ಷ ರು. ಭೂ ಕಂದಾಯ ವಸೂಲಾತಿಗೆ ಬಾಕಿ ಇತ್ತು.

 

423.51 ಕೋಟಿ ಭೂ ಕಂದಾಯ ಬಾಕಿ; ವಸೂಲಾತಿ ಶುಲ್ಕ ನಿಗದಿಗೆ ಕಂದಾಯ ಇಲಾಖೆಗೆ ವಸತಿ ಇಲಾಖೆ ಪತ್ರ

‘ರೇರಾ ಕಾಯ್ದೆಯು ಕೇಂದ್ರ ಸರ್ಕಾರದ ಕಾಯ್ದೆಯಾಗಿದೆ. ಇದನ್ನು ಸಂಬಂಧಪಟ್ಟ ತಹಶೀಲ್ದಾರ್‍‌ಗಳೇ ರೇರಾ ಕಾಯ್ದೆಯಡಿ ವಿಧಿಸುವ ದಂಡದ ಮೊತ್ತವನ್ನು ಭೂ ಕಂದಾಯ ಎಂದು ವಸೂಲು ಮಾಡಬೇಕಾಗುತ್ತದೆ. ಆದರೆ ತಹಶೀಲ್ದಾರ್‍‌ರು ಅರೆ ನ್ಯಾಯಿಕ ಪ್ರಾಧಿಕಾರವಾಗಿದ್ದು ರೇರಾ ಕಾಯ್ದೆಯಡಿ ವಿಧಿಸುವ ದಂಡದ ಮೊತ್ತವನ್ನು ಭೂ ಕಂದಾಯ ಎಂದು ವಸೂಲು ಮಾಡುವಲ್ಲಿ ಹಲವಾರು ಕಾನೂನಾತ್ಮಕ ತೊಡಕುಗಳೀವೆ,’ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚರ್ಚಿಸಿದ್ದರು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img