Sunday | September 13, 2026 |

60;40 ರ ಬದಲಿಗೆ 50;50 ಅನುಪಾತದಲ್ಲಿ ಬದಲಿ ನಿವೇಶನ; ಸಿದ್ದರಾಮಯ್ಯರ ಮೊದಲ ಅವಧಿಯಲ್ಲೇ ಚಮತ್ಕಾರ!

Support THE-FILE

spot_img

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಬದಲಿ ನಿವೇಶನಗಳನ್ನು 60;40ರ ಅನುಪಾತದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು 2014ರಲ್ಲೇ ತಿಳಿವಳಿಕೆ ಪತ್ರ ನೀಡಿತ್ತು. ಆದರೂ 50;50 ರ ಅನುಪಾತದಲ್ಲಿ ಬದಲಿ ನಿವೇಶನ ಹಂಚಿಕೆ ಮಾಡಿತ್ತು  ಎಂಬ ಹೊಸ ದಾಖಲೆಯೊಂದು ಬಿಡುಗಡೆಯಾಗಿದೆ.

50;50 ರ ಅನುಪಾತದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ಬದಲಿ ನಿವೇಶನಗಳ ಹಂಚಿಕೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ದಾಖಲೆಗಳು ಬಿಡುಗಡೆಯಾಗುತ್ತಿರುವ ಹೊತ್ತಿನಲ್ಲೇ ಇದೀಗ ಮುಡಾವು ಪಾರ್ವತಿ ಅವರಿಗೆ ನೀಡಿದ್ದ ತಿಳಿವಳಿಕೆ ಪತ್ರವೂ ಮುನ್ನೆಲೆಗೆ ಬಂದಿದೆ.

ವಿಶೇಷವೆಂದರೇ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ನ್ಯಾಯಾಲಯದಲ್ಲಿ ಸಲ್ಲಿಸಿರುವ ರಿಟ್‌ ಅರ್ಜಿಯಲ್ಲಿಯೇ ಇದೆ.  ಈ ಸಂಗತಿಯನ್ನು ಸ್ನೇಹಮಯಿ ಕೃಷ್ಣ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮೈಸೂರು ತಾಲೂಕು ಕೆಸರೆ ಗ್ರಾಮದ ಸರ್ವೆ ನಂಬರ್‌ 464ರ 3-16 ಎಕರೆ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಬದಲಿ ಜಮೀನು ನೀಡಬೇಕು ಎಂದು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು 2014ರ ಜೂನ್‌ 23ರಂದು ಮೂಡಾಕ್ಕೆ ಮನವಿ ಸಲ್ಲಿಸಿದ್ದರು.

ಈ ಮನವಿಯನ್ನು ಪರಿಶೀಲಿಸಿದ್ದ ಮುಡಾವು ಪಾರ್ವತಿ ಅವರಿಗೆ ತಿಳಿವಳಿಕೆ ಪತ್ರ ನೀಡಿತ್ತು.

ತಿಳಿವಳಿಕೆ ಪತ್ರದಲ್ಲೇನಿದೆ?

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರವು ದೇವನೂರು ಮೂರನೇ ಹಂತದ ಬಡಾವಣೆಗಾಗಿ ಸರ್ಕಾರವು 1997ರ ಆಗಸ್ಟ್‌ 20ರಂದು ಅಂತಿಮ ಅಧಿಸೂಚನೆ ಹೊರಡಿಸಿದ ಕೆಸರೆ ಗ್ರಾಮದ ಸರ್ವೆ ನಂಬರ್‌ 464ರ 3-16 ಎಕರೆ ಜಮೀನನ್ನು ಸರ್ಕಾರವು 1998ರ ಮೇ 18ರಂದು ಅಧಿಸೂಚನೆ ಮೂಲಕ ಭೂ ಸ್ವಾಧೀನ ಕ್ರಮದಿಂದ ಮೇಲ್ಕಂಡ ಜಮೀನನ್ನು ಕೈ ಬಿಟ್ಟು ಅಧಿಸೂಚನೆ ಹೊರಡಿಸಲಾಗಿತ್ತು.

ಆದರೆ ಸರ್ಕಾರದ ಡಿನೋಟಿಫಿಕೇಷನ್‌ ನಡವಳಿಯು ಪ್ರಾಧಿಕಾರದ ತಾಂತ್ರಿಕ ಸಾಖೆಯ ಗಮನಕ್ಕೆ ಬಾರದೇ ಇರುವುದರಿಂದ ಈ ಜಮೀನನ್ನು ಪೂರ್ಣ ಪ್ರಮಾಣದಲ್ಲಿ ಪ್ರಾಧಿಕಾರವು ಅಭಿವೃದ್ಧಿ ಪಡಿಸಲಾಗಿತ್ತು.

ತಮ್ಮ ಕೋರಿಕೆಯಂತೆ ತಮ್ಮ ಜಮೀನಿಗೆ ಬದಲಾಗಿ ಭೂ ಸ್ವಾಧೀನ ಪಡಿಸಿದ ಜಮೀನನ್ನು ನೀಡಲು ಪ್ರಾಧಿಕಾರದ ವಶದಲ್ಲಿ ಹಾಲಿ ಜಮೀನು ಲಭ್ಯವಿರುವುದಿಲ್ಲ. ಆದ್ದರಿಂದ ನಿಮ್ಮ ಜಮೀನಿಗೆ ಮಾರುಕಟ್ಟೆ ದರದಲ್ಲಿ ದರವನ್ನು ನಿಗದಿಪಡಿಸಿ ಭೂಮಿಯ ಪರಿಹಾರ ನೀಡಲು ಅಥವಾ 60;40ರ ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ತತ್ಸಮಾನ ಬಡಾವಣೆಗಳಲ್ಲಿ ನೀಡಲು ಪ್ರಾಧಿಕಾರವು ಪರಿಶೀಲಿಸಿ ನಿಮ್ಮ ಕೋರಿಕೆಯನ್ನು ಪರಿಗಣಿಸಲಾಗುವುದು.

ಈ ಎರಡೂ ಅಂಶಗಳ ವಿಚಾರದಲ್ಲಿ ತಮ್ಮ ಸ್ಪಷ್ಟ ಅಭಿಪ್ರಾಯವನ್ನು ಕೂಡಲೇ ತಿಳಿಸಬೇಕು ಎಂದು ಎಂದು 2014ರ ಆಗಸ್ಟ್ 18ರಂದು ಮೂಡಾ ಆಯುಕ್ತರು ಪಾರ್ವತಿ ಅವರಿಗೆ ಪತ್ರ ಬರೆದಿದ್ದರು.

60;40 ರ ಅನುಪಾತದಲ್ಲಿ ನಿವೇಶನ ನೀಡಲಾಗುವುದು ಎಂದು ಮುಡಾ ಪಾರ್ವತಿ ಅವರಿಗೆ ತಿಳಿವಳಿಕೆ ಪತ್ರ ಹೊರಡಿಸಿತ್ತು. ಇದಾದ ನಂತರ ಸರ್ಕಾರದಿಂದ 2015ರಲ್ಲಿ  ಅಧಿಸೂಚನೆ  ಆದೇಶ ಹೊರಡಿಸಿತ್ತು.

ಈ ಅಧಿಸೂಚನೆಯಲ್ಲಿಯೂ  ಎಡವಟ್ಟು ನಡೆದಿದೆ ಎಂದು ಸ್ನೇಹಮಯಿ ಕೃಷ್ಣ ಅವರು ಬೆಳಕಿಗೆ ತಂದಿದ್ದಾರೆ.

‘ಈ ಆದೇಶದಲ್ಲಿನ ಎಡವಟ್ಟು ಏನೆಂದರೆ 40 ಎನ್ನುವುದನ್ನು, 50 ಎಂದು ತಿದ್ದುಪಡಿ ಮಾಡಿಕೊಳ್ಳಲು ತಿಳಿಸಲಾಗಿದೆ. 60 ಎನ್ನುವುದನ್ನು 50 ಎಂದು ತಿದ್ದುಪಡಿ ಮಾಡಿಕೊಳ್ಳಲು ತಿಳಿಸಿರುವುದಿಲ್ಲ. ಅಲ್ಲಿಗೆ “ಪ್ರಾಧಿಕಾರ” ಗಳು 60;40 ಅನುಪಾತದಲ್ಲಿ ನಿವೇಶನಗಳನ್ನು ಹಂಚಬೇಕು. ಈ ಚಮತ್ಕಾರ ಹೇಗೆ ಸಾಧ್ಯವಾಗುತ್ತದೆ,’ ಎಂದು ಸ್ನೇಹಮಯಿ ಕೃಷ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img