Saturday | September 12, 2026 |

ಹೆಚ್‌ಡಿಕೆ, ಜೊಲ್ಲೆ, ನಿರಾಣಿ, ರೆಡ್ಡಿ ವಿರುದ್ಧ ವಿಚಾರಣೆ; ಆರ್‍‌ಟಿಐ ಅರ್ಜಿ ತಿರಸ್ಕೃತ, ರಾಜ್ಯಪಾಲರಿಂದ ತಾರತಮ್ಯ?

Support THE-FILE

spot_img

ಬೆಂಗಳೂರು;  ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ, ಮುರುಗೇಶ್‌ ಆರ್‍‌ ನಿರಾಣಿ, ಶಶಿಕಲಾ ಜೊಲ್ಲೆ, ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ವಿಚಾರಣೆಗೆ ಸಂಬಂಧಿಸಿದ ಯಾವುದೇ ಕಡತವೂ   ಕಚೇರಿಯಲ್ಲಿಲ್ಲ ಎಂದು ಕೇವಲ ಒಂಬತ್ತೇ ಒಂಬತ್ತು ದಿನದಲ್ಲಿ  ಆರ್‍‌ಟಿಐ ಅಡಿಯಲ್ಲಿ ಟಿ ಜೆ ಅಬ್ರಾಹಂ ಅವರಿಗೆ  ಮಾಹಿತಿ ಒದಗಿಸಿದ್ದ ರಾಜ್ಯಪಾಲರ ಕಚೇರಿಯು ಇದೀಗ ಇದೇ ಮಾಹಿತಿ ಕೋರಿ ಮತ್ತೊಬ್ಬ ಸಾಮಾಜಿಕ ಹೋರಾಟಗಾರ  ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

 

ಥಾವರ್‍‌ ಚಂದ್‌ ಗೆಹ್ಲೋಟ್‌ ಅವರು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಇಲ್ಲಿಯವರೆಗೆ ಎಚ್‌ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಬಿ ಎಸ್‌ ಯಡಿಯೂರಪ್ಪ, ಮುರುಗೇಶ್‌ ನಿರಾಣಿ ಅವರ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ವಿಷಯದಲ್ಲಿ ರಾಜ್ಯಪಾಲರ ಮುಂದೆ ವಿಚಾರಣೆಗೆ ಅನುಮತಿ ಕೋರಿ ರಾಜ್ಯದ ಸಕ್ಷಮ ಪ್ರಾಧಿಕಾರ, ದೂರುದಾರರು, ನಾಗರೀಕರು, ಲೋಕಾಯುಕ್ತರು, ಸಿಐಡಿ, ಸಿಬಿಐ ಮತ್ತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಕಚೇರಿಯಿಂದ ಸಲ್ಲಿಸಿದ ಅರ್ಜಿಯ ಪ್ರತಿಗಳನ್ನು ನೀಡುವುದು ಮತ್ತು ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ಪಪತ್ರದ ಪ್ರತಿಯನ್ನು ನೀಡಬೇಕು ಎಂದು ಹೆಚ್‌ ಎಂ ವೆಂಕಟೇಶ್‌ ಅವರು ಕೋರಿದ್ದರು.

 

 

 

ಆದರೆ ರಾಜ್ಯಪಾಲರ ಕಚೇರಿಯು    8(1) (ಹೆಚ್‌) ಅನ್ವಯ ಈ ಅರ್ಜಿಯನ್ನು  ನಿರಾಕರಿಸಿದೆ. ಈ ವಿಚಾರದಲ್ಲಿ  ರಾಜ್ಯಪಾಲರ ಇಬ್ಬಂದಿ ನೀತಿ ಅನುಸರಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

ರಾಜಭವನ ನೀಡಿದ ಉತ್ತರದಲ್ಲೇನಿದೆ?

 

ಮಾಹಿತಿ ಹಕ್ಕು ಅಧಿನಿಯಮ 2005ರ ನಿಯಮ 8(1) (ಹೆಚ್‌) ಅನ್ವಯ ತನಿಖಾ ಕ್ರಮಕ್ಕೆ ಅಥವಾ ಪ್ರಾಸಿಕ್ಯೂಷನ್‌ ಕಾರ್ಯಕ್ಕೆ ಅಡಚಣೆಯನ್ನುಂಟು ಮಾಡುವಂತಹ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸುವುದರಿಂದ ವಿನಾಯಿತಿ ಇರುತ್ತದೆ. ಆದ್ದರಿಂದ ತಾವು ಕೋರಿರುವ ಮಾಹಿತಿಯು ಮಾಹಿತಿ ಹಕ್ಕು ಅಧಿನಿಯಮ 2005ರ ನಿಯಮ 2(ಎಫ್‌) ಅನ್ವಯ ಮಾಹಿತಿ ಪರಿಭಾಷೆಯ ವ್ಯಾಪ್ತಿಗೆ ಒಳಪಡುವುದಿಲ್ಲವಾದ್ದಂರಿದ ನ ಇಮ್ಮ ಮನವಿಯನ್ನು ಪರಿಗಣಿಸಲು ಸಾಧ್ಯವಿರುವುದಿಲ್ಲ ಎಂದು ತಿರಸ್ಕರಿಸಿದೆ.

 

‘ನಾನು ಕೇಳಿರುವ ಮಾಹಿತಿಯು ಅಬ್ರಾಹಂ ಅವರು  ಮಾಹಿತಿಯು ಒಂದೇ ರೀತಿಯಲ್ಲಿದೆ. ಆದರೆ   ಅಬ್ರಾಹಂ  ಕೇಳಿದ್ದ  ಮಾಹಿತಿಯನ್ನು ರಾಜ್ಯಪಾಲರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಒಂಬತ್ತು ದಿನಗಳ ಒಳಗೆ ಅವರಿಗೆ ಸಂಪೂರ್ಣ ಮಾಹಿತಿಯನ್ನು ನೀಡಿದೆ.   ಆದರೆ ನನ್ನ ಅರ್ಜಿಗೆ ತನಿಖೆ ನಡೆಸಲು ಅಥವಾ ಅಪರಾಧಿಗಳ ದಸ್ತಗಿರಿಗೆ ಅಥವಾ prosecution ಕಾರ್ಯಕ್ಕೆ ಅಡಚಣೆ ಉಂಟಾಗುತ್ತದೆ.  ಮಾಹಿತಿಗಳನ್ನು ಒದಗಿಸಲು ಸಾಧ್ಯವಿಲ್ಲ ಎಂದು ಹೇಳಿರುವುದು ರಾಜ್ಯಪಾಲರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯ ತಾರತಮ್ಯ ಧೋರಣೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ,’ ಎನ್ನುತ್ತಾರೆ ಹೆಚ್‌ ಎಂ ವೆಂಕಟೇಶ್‌.
ಕರ್ನಾಟಕ ರಾಜಕೀಯ ವಿವಿಧ ಪಕ್ಷಗಳ ನಾಯಕರುಗಳ ಹಗರಣಗಳಿಗೆ ರಾಜ್ಯಪಾಲರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯು ನ್ಯಾಯ ಸಮ್ಮತವಾಗಿ ನನಗೆ ಮಾಹಿತಿ ಕೊಡಬೇಕಾಗಿತ್ತು.  ಅವರು ಕೂಡ  ಏಕ ಪಕ್ಷಿಯವಾಗಿ, ತಾರತಮ್ಯ ಧೋರಣೆಯಿಂದ ವರ್ತಿಸುತ್ತಿರುವುದನ್ನು ನೋಡಿದರೆ ರಾಜ್ಯಪಾಲರ ಕಚೇರಿಯು ರಾಜಕೀಯ ಪಕ್ಷದ ಕಚೇರಿ ಅಂತ ಆಗಿದೆಯೇ ಎಂದು ವೆಂಕಟೇಶ್‌ ಅವರು ಅನುಮಾನ ವ್ಯಕ್ತಪಡಿಸುತ್ತಾರೆ.

 

ವಿವಿಧ ಸಕ್ಷಮ ಪ್ರಾಧಿಕಾರಗಳು ವಿಚಾರಣೆಗೆ ಅನುಮತಿ ಕೋರಿರುವ ಪ್ರಸ್ತಾವನೆಗಳ ಬಾಕಿ ಇರುವ ಕುರಿತಂತೆ  ರಾಜ್ಯಪಾಲರ ಕಚೇರಿಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ವಿಶೇಷವೆಂದರೇ ಅಬ್ರಾಹಂ ಅವರು ಅರ್ಜಿ ಸಲ್ಲಿಸಿದ್ದ 9 ದಿನದೊಳಗೇ ರಾಜಭವನ ಕಚೇರಿಯು ಮಾಹಿತಿ ಒದಗಿಸಿತ್ತು.

 

 

ಹೆಚ್‌ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ, ಮುರುಗೇಶ್‌ ನಿರಾಣಿ ಅವರ ವಿರುದ್ಧ ವಿಚಾರಣೆಗೆ ಅನುಮತಿ ಕೋರಿರುವ ಯಾವ ಕಡತವೂ ರಾಜ್ಯಪಾಲರ ಕಚೇರಿಯಲ್ಲಿ ಇಲ್ಲ ಎಂದು ಮಾಹಿತಿ ನೀಡಿತ್ತು.

 

ಅಬ್ರಾಹಂ ಅವರಿಗೆ  ರಾಜಭವನ ಕಚೇರಿ ನೀಡಿದ್ದ  ಮಾಹಿತಿಯಲ್ಲೇನಿತ್ತು?

 

ಮುರುಗೇಶ್‌ ನಿರಾಣಿ ಅವರ ವಿರುದ್ಧ ತನಿಖೆಗೆ ಸಂಬಂಧಿಸಿದಂತೆ ರಾಜಭವನ ಕಚೇರಿಯು 2024ರ ಫೆ.26ರಂದು ಸ್ವೀಕೃತವಾಗಿದೆ. ಮತ್ತು ಇದನ್ನು 2024ರ ಮಾರ್ಚ್‌ 26ರಂದು ಸಕ್ಷಮ ಪ್ರಾಧಿಕಾರಕ್ಕೆ ಕಡತವನ್ನು ಹಿಂದಿರುಗಿಸಿದೆ. ಇದೇ ಪ್ರಕರಣದಲ್ಲಿ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ವಿಚಾರಣೆ (ಡಬ್ಲ್ಯೂ ಪಿ 22356/2024) ನಡೆಯುತ್ತಿದೆ. 2024ರ ಆಗಸ್ಟ್‌ 19ರಂದು ವಿಚಾರಣೆ ನಡೆದಿದೆ. ಹೀಗಾಗಿ ಈ ಸಂಬಂಧಿತ ಕಡತವು ರಾಜ್ಯಪಾಲರ ಕಚೇರಿಯಲ್ಲಿಲ್ಲ ಎಂದು ಉತ್ತರ ನೀಡಿತ್ತು.

 

ಹೆಚ್‌ಡಿಕೆ ಸೇರಿ ಮತ್ತಿತರ ವಿರುದ್ಧ ವಿಚಾರಣೆ ಪ್ರಕರಣ; ಕಡತ ಲಭ್ಯವಿಲ್ಲವೆಂದ ರಾಜಭವನ, ಸುಳ್ಳು ಹೇಳಿತೇ ಕಾಂಗ್ರೆಸ್‌?

ಹೆಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕಚೇರಿಯಲ್ಲಿ ಕಡತವನ್ನು 2023ರ ನವೆಂಬರ್‍‌ 21ರಂದು ಸ್ವೀಕೃತವಾಗಿದ್ದ ಕಡತವನ್ನು ಸಕ್ಷಮ ಪ್ರಾಧಿಕಾರಕ್ಕೆ 2024ರ ಜುಲೈ 29ಕ್ಕೆ ಹಿಂದಿರುಗಿಸಲಾಗಿದೆ. ಈ ಸಂಬಂಧ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ( ಸಂಖ್ಯೆ 22356/2024) ಸಲ್ಲಿಕೆಯಾಗಿದೆ. ಹೀಗಾಗಿ ಈ ಪ್ರಕರಣವು ರಾಜ್ಯಪಾಲರ ಕಚೇರಿಯಲ್ಲಿ ಪೆಂಡಿಂಗ್ ಇರುವುದಿಲ್ಲ ಮತ್ತು ಈ ಸಂಬಂಧಿತ ಕಡತವೂ ರಾಜಭವನದ ಕಚೇರಿಯಲ್ಲಿ ಲಭ್ಯವಿಲ್ಲ ಎಂದು ಮಾಹಿತಿ ನೀಡಿತ್ತು.

 

ಜನಾರ್ದನ ರೆಡ್ಡಿ ಅವರ ಪ್ರಕರಣದಲ್ಲಿಯೂ 2024ರ ಮೇ 13ರಂದು ಕಡತವನ್ನು ರಾಜಭವನ ಕಚೇರಿಯು ಸ್ವೀಕರಿಸಿತ್ತು. ಈ ಕಡತವನ್ನು ಸಕ್ಷಮ ಪ್ರಾಧಿಕಾರದ ಕೋರಿಕೆ ಮೇರೆಗೆ 2024ರ ಜೂನ್‌ 27ರಂದು ಹಿಂದಿರುಗಿಸಲಾಗಿದೆ. ಮತ್ತು ರಿಟ್‌ ಅರ್ಜಿ (22356/2024)ಯು ಹೈಕೋರ್ಟ್‌ನಲ್ಲಿ 2024ರ ಆಗಸ್ಟ್‌ 19ರಂದು ಪ್ರಸ್ತುತಪಡಿಸಲಾಗಿದೆ. ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದ ಕಡತವು ರಾಜಭವನ ಕಚೇರಿಯಲ್ಲಿಲ್ಲ ಎಂದು ಉತ್ತರಿಸಿತ್ತು.

 

1988ರ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 218ರ ಅಡಿಯಲ್ಲಿ ಸಿಎಂ ವಿರುದ್ಧ ಮೂವರು ಸಾಮಾಜಿಕ ಕಾರ್ಯಕರ್ತರು ಸಲ್ಲಿಸಿರುವ ದೂರುಗಳಲ್ಲಿ ಉಲ್ಲೇಖಿಸಿರುವ ಅಪರಾಧ ಕುರಿತ ತನಿಖೆ ನಡೆಸಿ, ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಆಗಸ್ಟ್ 16ರಂದು ಅನುಮತಿ ನೀಡಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img