Monday | June 15, 2026 |

ವಿಧಾನಸೌಧದಲ್ಲಿನ ಸಿಎಂ ಕೊಠಡಿ ನವೀಕರಣಕ್ಕೆ ಮೌಖಿಕ ಸೂಚನೆ; ಅಂದಾಜು 2.50 ಕೋಟಿ ವೆಚ್ಚ?

Support THE-FILE

spot_img

ಬೆಂಗಳೂರು; ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕೊಠಡಿಯ ರಿಪೇರಿ, ದುರಸ್ತಿ ಮತ್ತು ನವೀಕರಿಸಲು  2.50 ಕೋಟಿ ರು. ಮೊತ್ತದಲ್ಲಿ ಲೋಕೋಪಯೋಗಿ ಇಲಾಖೆಯು  ಅಂದಾಜು  ವೆಚ್ಚ ಸಿದ್ಧಪಡಿಸಿದೆ.  ಸುಮಾರು  15 ಕ್ಕೂ ಹೆಚ್ಚು ವರ್ಷಗಳಿಂದ ಮುಖ್ಯಮಂತ್ರಿ ಕೊಠಡಿಯನ್ನು ನವೀಕರಿಸಿರಲಿಲ್ಲ. ಹೀಗಾಗಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಠಡಿಯನ್ನು ನವೀಕರಿಸಲು  ಮೌಖಿಕವಾಗಿ ಸೂಚಿಸಿದ್ದರು ಎಂದು ಹೇಳಲಾಗಿದೆ.

 

ಮುಖ್ಯಮಂತ್ರಿ ಸೂಚನೆ ಮೇರೆಗೆ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‍‌ಗಳು ಕೊಠಡಿ ನವೀಕರಣ ಕಾಮಗಾರಿಗೆ ಮುಂದಾಗಿದ್ದಾರೆ ಎಂದು  ಗೊತ್ತಾಗಿದೆ.

 

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವ ಬೆನ್ನಲ್ಲೇ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ 323ನೇ ಸಂಖ್ಯೆಯಲ್ಲಿರುವ ಮುಖ್ಯಮಂತ್ರಿಗಳ  ಕೊಠಡಿಯನ್ನು ನವೀಕರಣದ  ಕಾಮಗಾರಿಯು  ಮುನ್ನೆಲೆಗೆ ಬಂದಿದೆ.

 

ಅನಗತ್ಯ ಖರ್ಚು ಮತ್ತು ದುಂದುವೆಚ್ಚಗಳಿಗೆ ಕಡಿವಾಣ ಹಾಕಿ ಆರ್ಥಿಕ ಶಿಸ್ತು ಕಾಪಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದೀಗ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿಯನ್ನು ಅಂದಾಜು  2.50 ಕೋಟಿ ರು. ವೆಚ್ಚದಲ್ಲಿ ನವೀಕರಿಸಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಎಸ್‌ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೊಠಡಿ ನವೀಕರಿಸಲಾಗಿತ್ತು. ಆ ನಂತರ ಬಂದ ಮುಖ್ಯಮಂತ್ರಿಗಳ ಅವಧಿಯಲ್ಲಿ  ವಿಧಾನಸೌಧದಲ್ಲಿನ 323ನೇ ಸಂಖ್ಯೆಯ ಕೊಠಡಿಯನ್ನು ನವೀಕರಿಸಿರಲಿಲ್ಲ. ಬದಲಿಗೆ ಕೊಠಡಿಗೆ ಸುಣ್ಣ, ಬಣ್ಣ ಮತ್ತು ಪೀಠೋಪಕರಣಗಳಿಗೆ ಪಾಲಿಷ್‌ ಮಾಡಲಾಗುತ್ತಿತ್ತೇ ವಿನಃ ಇಡೀ ಕೊಠಡಿಯನ್ನು ಸಂಪೂರ್ಣವಾಗಿ ನವೀಕರಿಸಿರಲಿಲ್ಲ.

 

ಅಲ್ಲದೇ ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿಯೂ ಈ ಕೊಠಡಿಯು ನವೀಕೃತಗೊಂಡಿರಲಿಲ್ಲ. ಆದರೀಗ ಈ ಕೊಠಡಿ ನವೀಕರಿಸಲು ಖುದ್ದು ಸಿದ್ದರಾಮಯ್ಯ ಅವರೇ ಅಧಿಕಾರಿಗಳನ್ನು ಕರೆದು ಇಡೀ ಕೊಠಡಿಯನ್ನು ನವೀಕರಿಸಲು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

 

ಮುಖ್ಯಮಂತ್ರಿಗಳ ಕೊಠಡಿಯಲ್ಲಿನ ಒಳಾಂಗಣವನ್ನು ಹೊಸ ವಿನ್ಯಾಸದೊಂದಿಗೆ ನವೀಕರಿಸಲಾಗುತ್ತಿದೆ. ಕೆಫೆಟೇರಿಯಾ, ಶೌಚಾಲಯ, ಕೊಠಡಿಯ ನೆಲ, ಗೋಡೆಗಳ ವಿನ್ಯಾಸ, ವಾಲ್‌ ಪೇಟಿಂಗ್‌, ವಿರಾಮ ಕೊಠಡಿ, ಅವರ ಕೊಠಡಿ, ಸಂದರ್ಶಕರ ಕೊಠಡಿಯನ್ನೂ ನವೀಕರಿಸಲಾಗುತ್ತದೆ  ಎಂದು ಮುಖ್ಯಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಖಚಿತಪಡಿಸಿದ್ದಾರೆ.

 

ಮುಖ್ಯಮಂತ್ರಿ ಕೊಠಡಿ ನವೀಕರಣ ಸಂಬಂಧ ಮುಖ್ಯಮಂತ್ರಿ ಸಚಿವಾಲಯದಿಂದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಯಾವುದೇ ಪತ್ರ ವ್ಯವಹಾರ ನಡೆದಿಲ್ಲ. ಇದಕ್ಕೂ ಮುನ್ನವೇ   ಕಾಮಗಾರಿಗಳು ಆರಂಭವಾಗಿವೆ.  ಕಾಮಗಾರಿ ಪೂರ್ಣಗೊಂಡ ನಂತರ ಇಲಾಖೆಯು  4(ಜಿ)ಗೆ ಘಟನೋತ್ತರ ಅನುಮೋದನೆ ಪಡೆಯಲಿದೆ  ಎಂದು ಗೊತ್ತಾಗಿದೆ.

 

ಈ ಸಂಬಂಧ  ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸತ್ಯನಾರಾಯಣ  ಮತ್ತು ಎಕ್ಸಿಕ್ಯೂಟಿವ್‌ ಇಂಜಿನಿಯರ್‍‌ ಅವರಿಗೆ ವಾಟ್ಸಾಪ್‌ ಮೂಲಕ ‘ದಿ ಫೈಲ್‌’  ಮಾಹಿತಿ ಕೋರಿತ್ತು.  ಆದರೆ ಇಬ್ಬರೂ ಸಹ ಇದುವರೆಗೂ ಯಾವುದೇ ಮಾಹಿತಿ, ಪ್ರತಿಕ್ರಿಯೆ ನೀಡಿಲ್ಲ. ಅವರು ಪ್ರತಿಕ್ರಿಯೆ ನೀಡಿದ ನಂತರ ಇದೇ ವರದಿಯನ್ನು ನವೀಕರಿಸಲಿದೆ.

 

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ಸರ್ಕಾರಿ ನಿವಾಸವನ್ನು ದುರಸ್ತಿ ಹೆಸರಿನಲ್ಲಿ 1.38 ಕೋಟಿ ರು. ವೆಚ್ಚದಲ್ಲಿ ಅಲಂಕರಿಸಲಾಗಿದೆ.  ಉಪ ಮುಖ್ಯಮಂತ್ರಿಗಳಿಗೆ ಹಂಚಿಕೆಯಾಗಿರುವ ಸರ್ಕಾರಿ ನಿವಾಸವನ್ನು ನವೀಕರಿಸುತ್ತಿರುವುದು ತೆರಿಗೆ ಹಣ ದುಂದುವೆಚ್ಚಕ್ಕೆ ದಾರಿಮಾಡಿಕೊಟ್ಟಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

 

ಡಿಸಿಎಂ ವಸತಿಗೃಹದ ಗಾರ್ಡ್‌ನ್‌ ಲೈಟ್ಸ್‌ ಸೇರಿ ದುರಸ್ತಿಗೆ 1.38 ಕೋಟಿ ವೆಚ್ಚ; ಬರಗಾಲದಲ್ಲೂ ದುಂದುವೆಚ್ಚ

 

ಉಪ ಮುಖ್ಯಮಂತ್ರಿಯವರಿಗೆ ಹಂಚಿಕೆ ಮಾಡಲಾಗಿರುವ ವಸತಿಗೃಹ ಕೆ ಕೆ ದಕ್ಷಿಣ -1ರ ದುರಸ್ತಿ ಕಾಮಗಾರಿಗಳನ್ನು ಒಟ್ಟಾರೆ 1.38 ಕೋಟಿ ರು. ವೆಚ್ಚದಲ್ಲಿ ನೇರವಾಗಿ ಕೈಗೊಳ್ಳಲು ಕೆಟಿಪಿಪಿ ಕಾಯ್ದೆ 4 ಜಿ ವಿನಾಯಿತಿ ದೊರೆತಿತ್ತು.

 

 

ಏನೆಲ್ಲಾ ದುರಸ್ತಿ ಆಗಿತ್ತು?

 

ಕಿಚನ್‌ ಕ್ಯಾಬಿನೆಟ್‌, ವಾಲ್‌ ಪೆನಲಿಂಗ್‌, ಪೈಟಿಂಗ್‌, ಬಾಗಿಲು, ಕಿಟಕಿ, ಗ್ರಿಲ್‌, ಕರ್ಟನ್‌ ರಾಡ್‌, ಕಾರ್ಟ್‌ ಕ್ಲಾತ್‌, ಪೀಠೋಪಕರಣಗಳಿಗೆ 98 ಲಕ್ಷ ರು., ಎಲ್‌ಇಡಿ ಫಿಟ್ಟಿಂಗ್ಸ್‌, ಸ್ಟ್ರೀಟ್‌ ಲೈಟ್ಸ್‌, ಲಾನ್‌ ಲೈಟ್ಸ್‌, ಗಾರ್ಡ್‌ನ್‌ ಲೈಟ್ಸ್‌, ವಾಟರ್‌ ಹೀಟರ್ಸ್‌, ಸೀಲಿಂಗ್‌ ಫ್ಯಾನ್‌, ಇನ್ನಿತರೆ ಎಲೆಕ್ಟ್ರಿಕ್‌  ಉಪಕರಣಗಳು ಮತ್ತು ದುರಸ್ತಿಗಳಿಗೆ 40 ಲಕ್ಷ ರು ಸೇರಿ ಒಟ್ಟಾರೆ 1.38 ಕೋಟಿ ರು. ವೆಚ್ಚವಾಗಲಿದೆ.

 

 

ಕುಮಾರಕೃಪ ನಿವಾಸದಿಂದ ಕಾವೇರಿ ನಿವಾಸಕ್ಕೆ ಸ್ಥಳಾಂತರಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೂತನ ನಿವಾಸಕ್ಕೂ ಪೀಠೋಪಕರಣಗಳ ಪೂರೈಸಲು 3 ಕೋಟಿ ರು. ಖರ್ಚಾಗಿತ್ತು.

 

ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿತ ಸಚಿವರ ಕಚೇರಿ ದುರಸ್ತಿ ಮತ್ತು ಬಣ್ಣ ಬಳಿಯುವ ಹೆಸರಿನಲ್ಲಿ 3.80 ಕೋಟಿ ರು ಬಿಡುಗಡೆ ಮಾಡಲಾಗಿತ್ತು. ಸಚಿವರ ವಸತಿ ಗೃಹಗಳಿಗೆ ಗೃಹಪಯೋಗಿ ವಸ್ತು ಮತ್ತು ಪೀಠೋಪಕರಣಗಳ ಪೂರೈಕೆಗಾಗಿ 3.40 ಕೋಟಿ ರು. ಬಿಡುಗಡೆಯಾಗಿತ್ತು.

 

ಅನಗತ್ಯ ಖರ್ಚು ಮತ್ತು ದುಂದುವೆಚ್ಚಗಳಿಗೆ ಕಡಿವಾಣ ಹಾಕಿ ಆರ್ಥಿಕ ಶಿಸ್ತು ಕಾಪಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img