Sunday | June 14, 2026 |

ದುಪ್ಪಟ್ಟು ದರದಲ್ಲಿ ವೆಂಟಿಲೇಟರ್‍‌ ಖರೀದಿ ಸೇರಿ ಹಲವು ಪ್ರಕರಣಗಳತ್ತ ಕಣ್ಣಾಡಿಸದ ಕುನ್ಹಾ ಸಮಿತಿ

Support THE-FILE

spot_img

ಬೆಂಗಳೂರು; ಕೋವಿಡ್‌ ಅವಧಿಯಲ್ಲಿ ನಡೆದಿದ್ದ ವಿವಿಧ ರೀತಿಯ ಅಕ್ರಮ, ಅವ್ಯವಹಾರಗಳ ಕುರಿತು ವಿಚಾರಣೆ ನಡೆಸಿರುವ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಮೈಕಲ್‌ ಕುನ್ಹಾ ಅವರು ಸಲ್ಲಿಸಿರುವ ವರದಿಗಳಲ್ಲಿ ಹಲವು ಪ್ರಕರಣಗಳ ಕುರಿತು ವಿಸ್ತೃತವಾದ ತನಿಖೆಯನ್ನೇ ನಡೆಸಿಲ್ಲ. ಅಲ್ಲದೇ ನಿರ್ದಿಷ್ಟ ಕಂಪನಿಗಳನ್ನು ತನಿಖಾ ವ್ಯಾಪ್ತಿಯಿಂದ ಹೊರಗಿಟ್ಟಿದೆ!

 

ಹೆಚ್ಚುವರಿ ದರದಲ್ಲಿ ಆರ್‍‌ಎನ್‌ಎ ಕಿಟ್‌ ಸರಬರಾಜು ಮಾಡಿದ್ದ ಕಂಪನಿಗಳ ಬಗ್ಗೆ ದೂರುಗಳಿದ್ದವು. ಆದರೆ ಆರ್‍‌ಎನ್‌ಎ ಕಿಟ್‌ ಸರಬರಾಜು ಬಗ್ಗೆ ವರದಿಯಲ್ಲಿ ಪ್ರಸ್ತಾಪ ಮಾಡಿದೆಯಾದರೂ ಫ್ಯಾಬ್‌ ಫಾರ್ಮಾಸ್ಯುಟಿಕಲ್ಸ್‌ ಗೆ ಹೆಚ್ಚುವರಿ ದರ ನೀಡಿರುವ ಕುರಿತು ವರದಿಯಲ್ಲಿ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ.

 

ಆರ್‍‌ಎನ್‌ಎ ಕಿಟ್‌ ಕುರಿತು ಫ್ಯಾಬ್‌ ಗೆ ಹೆಚ್ಚುವರಿ ದರದಲ್ಲಿ ಆದೇಶ ನೀಡಿತ್ತು. ಈ ಕುರಿತು ‘ದಿ ಫೈಲ್‌’ ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

 

ಆರ್‌ಟಿಪಿಸಿಆರ್‌ ಕಿಟ್‌ಗೆ 4 ಪಟ್ಟು ಹೆಚ್ಚುವರಿ ದರ: ಕೊಟೇಷನ್‌ನಲ್ಲಿ ಅಡಗಿದೆಯೇ ಸಂಚು?

 

ಆದರೆ ಕುನ್ಹಾ ವರದಿಯಲ್ಲಿ ಈ ಕಂಪನಿಯ ಹೆಸರಿಲ್ಲ. ಬದಲಿಗೆ ಟ್ರೈಯರ್‍‌ ಸೊಲ್ಯೂಷನ್ಸ್‌ ಇಂಕ್‌, ಜೆನೆಟಿಕ್ಸ್‌ ಬಯೋ ಟೆಕ್‌ ಏಷಿಯನ್‌ ಪ್ರೈವೈಟ್‌ ಲಿಮಿಟೆಡ್‌, ಬೆಂಗಳೂರು ಮೆಡಿಕಲ್‌ ಸಿಸ್ಟಂ ಹೆಸರು ಮಾತ್ರ ಇದೆ. ಫ್ಯಾಬ್‌ ಫಾರ್ಮಾಸ್ಯುಟಿಕಲ್ಸ್‌ನಿಂದ ಹೆಚ್ಚುವರಿ ದರದಲ್ಲಿ ಆರ್‍‌ಎನ್‌ಎ ಕಿಟ್‌ ಖರೀದಿಸಿರುವ ಕುರಿತು ತನಿಖಾ ಸಮಿತಿಯು ವಿಚಾರಣೆಯನ್ನೇಕೆ ನಡೆಸಿಲ್ಲ ಎಂಬ ಪ್ರಶ್ನೆಗಳೂ ಉದ್ಭವವಾಗಿವೆ.

 

 

ಅದೇ ರೀತಿ ಆಂಟಿಜೆನ್‌ ಟೆಸ್ಟ್‌ ಕಿಟ್‌ಗಳ ಖರೀದಿಯಲ್ಲಿ 10 ಕೋಟಿಗೂ ಹೆಚ್ಚು ನಷ್ಟವಾಗಿತ್ತು. ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಸಕಾಲದಲ್ಲಿ ಕಿಟ್‌ಗಳನ್ನು ಖರೀದಿಸಿರಲಿಲ್ಲ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕನಿಷ್ಠ 10 ಕೋಟಿಯಷ್ಟು ನಷ್ಟವಾಗಿತ್ತು. ಈ ಕುರಿತು ‘ದಿ ಫೈಲ್‌’ 2021ರ ಮೇ 31ರಂದು ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

 

‘ದಿ ಫೈಲ್‌’ ತನಿಖೆ; ಆ್ಯಂಟಿಜನ್ ಟೆಸ್ಟ್ ಕಿಟ್‌ ಖರೀದಿಯಲ್ಲಿ 10 ಕೋಟಿ ನಷ್ಟ?

 

ಆದರೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕುನ್ಹಾ ಅವರ ವರದಿಯಲ್ಲಿ ಆಂಟಿಜೆನ್‌ ಟೆಸ್ಟ್‌ ಕಿಟ್‌ಗಳನ್ನು ಸಕಾಲದಲ್ಲಿ ಖರೀದಿ ಮಾಡದೇ ಇದ್ದ ಕೆಎಸ್‌ಎಂಎಸ್‌ಸಿಎಲ್‌ನ ಧೋರಣೆ ಕುರಿತು ಪ್ರಸ್ತಾಪ ಮಾಡಿಲ್ಲ.

 

ಬದಲಿಗೆ ಆರ್‍‌ಟಿಪಿಸಿಆರ್‍‌ ಕಿಟ್‌ಗಳ ಬಗ್ಗೆ ಪ್ರಸ್ತಾಪ ಮಾಡಿರುವ ತನಿಖಾ ಸಮಿತಿಯು ಟ್ರಿವಿಟ್ರಾನ್‌ ಹೆಲ್ತ್‌ ಕೇರ್‍‌ ಕಂಪನಿಯಿಂದ 2.05 ಕೋಟಿ ರು.ಗಳನ್ನು ಬಡ್ಡಿ ಸಮೇತ ವಸೂಲು ಮಾಡಬೇಕು ಎಂದು ಶಿಫಾರಸ್ಸು ಮಾಡಿದೆ.

 

 

ಹಾಗೆಯೇ ಕೋವಿಡ್‌ ಸಂದರ್ಭದಲ್ಲಿ ಬಳಸಿ ಬಿಸಾಡಿದ್ದ ವೆಂಟಿಲೇಟರ್‍‌ಗಳನ್ನು ಸರ್ಕಾರವು ಖರೀದಿಸಿತ್ತು.

 

ಬಳಸಿ ಬಿಸಾಡಿದ್ದ ವೆಂಟಿಲೇಟರ್‌ ಖರೀದಿ!; ಭ್ರಷ್ಟತೆಯ ಮತ್ತೊಂದು ಮುಖ ಅನಾವರಣ

 

ಆದರೆ ಕುನ್ಹಾ ಸಮಿತಿಯು ಬಳಸಿ ಬಿಸಾಡಿದ್ದ ವೆಂಟಿಲೇಟರ್‍‌ ಖರೀದಿ ಕುರಿತು ಗಮನಿಸಿಲ್ಲ. ಆದರೆ ಸ್ಕ್ಯಾನ್‌ ರೇ ಟೆಕ್ನಾಲಜೀಸ್‌ ಖರೀದಿಸಿದ್ದ ವೆಂಟಿಲೇಟರ್‍‌ಗಳ ಕುರಿತು ಪ್ರಸ್ತಾಪಿಸಿದೆ. ಈ ಕಂಪನಿಯಿಂದ 2.25 ಕೋಟಿ ರು. ವಸೂಲು ಮಾಡಬೇಕು ಎಂದು ಶಿಫಾರಸ್ಸು ಮಾಡಿದೆ.

 

 

ಅಲ್ಲದೇ ದುಪ್ಪಟ್ಟು ದರದಲ್ಲಿ ವೆಂಟಿಲೇಟರ್‍‌ಗಳನ್ನು ಖರೀದಿಸಿದ್ದ ಪ್ರಕರಣದ ಕುರಿತು ಕುನ್ಹಾ ಸಮಿತಿ ಪರಿಗಣಿಸಿದಂತಿಲ್ಲ.

 

ವೆಂಟಿಲೇಟರ್‌ ಖರೀದಿಯಲ್ಲಿ ಭಾರೀ ಅಕ್ರಮ; ತಮಿಳುನಾಡಿನಲ್ಲಿ 4.78 ಲಕ್ಷ, ಕರ್ನಾಟಕದಲ್ಲಿ 18 ಲಕ್ಷ

 

ತಮಿಳುನಾಡಿನಲ್ಲಿ ವೆಂಟಿಲೇಟರ್‍‌ವೊಂದಕ್ಕೆ 4.78 ಲಕ್ಷ ರು. ದರವಿದ್ದರೂ ಸಹ ಕರ್ನಾಟಕದಲ್ಲಿ ವೆಂಟಿಲೇಟರ್‍‌ವೊಂದಕ್ಕೆ 18 ಲಕ್ಷ ರು. ನೀಡಿ ಖರೀದಿಸಿತ್ತು. ಈ ಕುರಿತು ಕುನ್ಹಾ ಸಮಿತಿ ಕಣ್ಣೆತ್ತಿಯೂ ನೋಡಿಲ್ಲ ಎಂದು ಗೊತ್ತಾಗಿದೆ.

 

ವಿಟಿಎಂ ಕಿಟ್‌ ಖರೀದಿ ಗುಜರಾತ್‌ ಕಂಪನಿ ವಿಳಂಬದಿಂದ 4 ಕೋಟಿ ನಷ್ಟ ಆಗಿತ್ತು.

 

ವಿಟಿಎಂ ಕಿಟ್‌ ಖರೀದಿ; ಗುಜರಾತ್‌ ಕಂಪನಿಯ ವಿಳಂಬದಿಂದ 4 ಕೋಟಿ ನಷ್ಟ?

 

ಈ ಪ್ರಕರಣದ ಕುರಿತು ಕುನ್ಹಾ ಕಮಿಟಿ ಗಮನಿಸಿಲ್ಲ ಎಂದು ತಿಳಿದು ಬಂದಿದೆ. ಆದರೆ ವಿಟಿಎಂ ಕಿಟ್‌ನಲ್ಲಿ ಮೆಟಾ ಡಿಸೈನ್‌, ಭಟ್‌ ಬಯೋಟೆಕ್‌ ಇಂಡಿಯಾ ಪ್ರೈವೈಟ್‌ ಲಿಮಿಟೆಡ್‌ ಕುರಿತು ವರದಿಯಲ್ಲಿ ಉಲ್ಲೇಖಿಸಿದೆ.

 

 

ಕೋವಿಡ್‌ ಅಕ್ರಮಗಳ ಕುರಿತು ‘ದಿ ಫೈಲ್‌’ ಸರಣಿ ವರದಿಗಳನ್ನು ಪ್ರಕಟಿಸಿತ್ತು. ಈ ವರದಿ ಆಧರಿಸಿ ಕರ್ನಾಟಕ ರಾಷ್ಟ್ರಸಮಿತಿಯು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ದೂರು ನೀಡಿತ್ತು. ಈ ದೂರನ್ನಾಧರಿಸಿ ಸಮಿತಿಯು ವಿಚಾರಣೆ ನಡೆಸಿ, ವಿಧಾನಸಭೆಗೆ ವರದಿಯನ್ನು ಮಂಡಿಸಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img