Saturday | June 13, 2026 |

ಕಾವೇರಿ ವಸತಿಗೃಹ ಆವರಣದಲ್ಲಿ ಕಾಮಗಾರಿ, ಡಿಸಿಎಂ ವಸತಿಗೃಹಕ್ಕೆ ಪೀಠೋಪಕರಣ; 3.10 ಕೋಟಿ ವೆಚ್ಚ

Support THE-FILE

spot_img

ಬೆಂಗಳೂರು; ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕೊಠಡಿಯ ರಿಪೇರಿ, ದುರಸ್ತಿ ಮತ್ತು ನವೀಕರಿಸಲು ಅಂದಾಜು  2.50 ಕೋಟಿ ರು. ಮೊತ್ತದಲ್ಲಿ ನವೀಕರಿಸಿರುವ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿ ವಸತಿ ಗೃಹದ ಆವರಣವನ್ನೂ 2.65  ಕೋಟಿ ರು. ವೆಚ್ಚದಲ್ಲಿ ನವೀಕರಿಸಲು ಮುಂದಾಗಿದೆ.

 

ಅದೇ ರೀತಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರಿಗೆ ಕುಮಾರಕೃಪ ರಸ್ತೆಯಲ್ಲಿ ಹಂಚಿಕೆ ಮಾಡಿರುವ ವಸತಿ ಗೃಹಕ್ಕೆ ಅಗತ್ಯ ಪೀಠೋಪಕರಣ, ಆಪ್ತ ಕಾರ್ಯದರ್ಶಿ ಕೊಠಡಿ ನವೀಕರಣಕ್ಕೆ 45.10 ಲಕ್ಷ ರು. ವೆಚ್ಚ ಮಾಡಲು ಅನುಮತಿ ನೀಡಿದೆ.

 

ಈ ಎರಡೂ ಕಾಮಗಾರಿಗಳನ್ನೂ ನಿರ್ವಹಿಸಲು ಲೋಕೋಪಯೋಗಿ ಇಲಾಖೆಗೆ 4(ಜಿ) ವಿನಾಯಿತಿಯನ್ನು ನೀಡಿ 2025ರ ಫೆ.10 ಮತ್ತು  ಜನವರಿ 29ರಂದು ಆರ್ಥಿಕ ಇಲಾಖೆಯು ಅಧಿಸೂಚನೆ ಹೊರಡಿಸಿದೆ.

 

ಅನಗತ್ಯ ಖರ್ಚು ಮತ್ತು ದುಂದುವೆಚ್ಚಗಳಿಗೆ ಕಡಿವಾಣ ಹಾಕಿ ಆರ್ಥಿಕ ಶಿಸ್ತು ಕಾಪಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾವೇರಿ ವಸತಿಗೃಹದ ಆವರಣದಲ್ಲಿ 2.65 ಕೋಟಿ ರು ವೆಚ್ಚ ಮಾಡಲು ಮುಂದಾಗಿರುವುದು ಮುನ್ನೆಲೆಗೆ ಬಂದಿದೆ.

 

ಈ ಎರಡೂ ಅಧಿಸೂಚನೆಗಳ ಪ್ರತಿಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಿಧಾನಸೌಧದಲ್ಲಿನ  ಮುಖ್ಯಮಂತ್ರಿ ಕೊಠಡಿ ನವೀಕರಣಕ್ಕೆ ಅಂದಾಜು 2.50 ಕೋಟಿ ಮತ್ತು ಉಪ ಮುಖ್ಯಮಂತ್ರಿ ವಸತಿಗೃಹದ ಗಾರ್ಡನ್‌ ಲೈಟ್ಸ್‌ ಮತ್ತಿತರ ದುರಸ್ತಿಗೆ 1.38 ಕೋಟಿ ರು.ಗಳನ್ನು ಈಚೆಗಷ್ಟೇ ವೆಚ್ಚವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾವೇರಿ ಮತ್ತು ಡಿಸಿಎಂ ವಸತಿ ಗೃಹಕ್ಕೆ ಪೀಠೋಪಕರಣ ಮತ್ತು ಆಪ್ತ ಕಾರ್ಯದರ್ಶಿ ಕೊಠಡಿ ನವೀಕರಣಕ್ಕೆ 3.10 ಕೋಟಿ ರು ವೆಚ್ಚ ಮಾಡಲು ಹೊರಟಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಸಿಎಂ ಕಾವೇರಿಯಲ್ಲಿ ನವೀಕರಣ

 

ಬೆಂಗಳೂರಿನ ಕುಮಾರಕೃಪ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯ ಆವರಣದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು 265.20 ಲಕ್ಷ ರು ವೆಚ್ಚದಲ್ಲಿ ನೇರವಾಗಿ ಕೈಗೊಳ್ಳಲು ಕೆಟಿಪಿಪಿ ಕಾಯ್ದೆಯಡಿ 4(ಜಿ) ವಿನಾಯಿತಿಯನ್ನು ಲೋಕೋಪಯೋಗಿ ಇಲಾಖೆಗೆ ನೀಡಿದೆ.

 

 

ಕಾವೇರಿ ವಸತಿ ಗೃಹದ ಆವರಣದಲ್ಲಿ ಶೌಚಾಲಯ, ಸ್ಟೋರ್‍‌ ರೂಂ, ಸ್ಟೋರೇಜ್‌ ರ್‍ಯಾಕ್ಸ್‌, ಅಡುಗೆ ಉಪಕರಣಗಳು, ಎಲೆಕ್ಟ್ರಿಕಲ್‌ ಕಾಮಗಾರಿ, ಏರ್ ಕಂಡೀಷನ್‌ ಅಳವಡಿಕೆ ಕಾಮಗಾರಿಗಳಿಗೆ ಒಟ್ಟಾರೆ 2.65 ಕೋಟಿ ರು ವೆಚ್ಚ ಮಾಡಲಿದೆ.

 

 

ಅದೇ ರೀತಿ ಕುಮಾರಕೃಪ ರಸ್ತೆಯಲ್ಲಿ ಉಪ ಮುಖ್ಯಮಂತ್ರಿಗಳಿಗೆ ಹಂಚಿಕೆ ಮಾಡಿರುವ ವಸತಿಗೃಹಕ್ಕೆ ಅಗತ್ಯ ಪೀಠೋಪಕರಣ ಮತ್ತು ಆಪ್ತ ಕಾರ್ಯದರ್ಶಿ ಕೊಠಡಿ ನವೀಕರಣಕ್ಕೆ 45.10 ಲಕ್ಷ ರು. ವೆಚ್ಚ ಮಾಡಲು ಲೋಕೋಪಯೋಗಿ ಇಲಾಖೆಗೆ 4(ಜಿ) ವಿನಾಯಿತಿ ನೀಡಿ ಅಧಿಸೂಚನೆ ಹೊರಡಿಸಿದೆ.

 

 

ಎಸ್‌ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೊಠಡಿ ನವೀಕರಿಸಲಾಗಿತ್ತು. ಆ ನಂತರ ಬಂದ ಮುಖ್ಯಮಂತ್ರಿಗಳ ಅವಧಿಯಲ್ಲಿ  ವಿಧಾನಸೌಧದಲ್ಲಿನ 323ನೇ ಸಂಖ್ಯೆಯ ಕೊಠಡಿಯನ್ನು ನವೀಕರಿಸಿರಲಿಲ್ಲ. ಬದಲಿಗೆ ಕೊಠಡಿಗೆ ಸುಣ್ಣ, ಬಣ್ಣ ಮತ್ತು ಪೀಠೋಪಕರಣಗಳಿಗೆ ಪಾಲಿಷ್‌ ಮಾಡಲಾಗುತ್ತಿತ್ತೇ ವಿನಃ ಇಡೀ ಕೊಠಡಿಯನ್ನು ಸಂಪೂರ್ಣವಾಗಿ ನವೀಕರಿಸಿರಲಿಲ್ಲ.

 

ಅಲ್ಲದೇ ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿಯೂ ಈ ಕೊಠಡಿಯು ನವೀಕೃತಗೊಂಡಿರಲಿಲ್ಲ. ಆದರೀಗ ಈ ಕೊಠಡಿ ನವೀಕರಿಸಲು ಖುದ್ದು ಸಿದ್ದರಾಮಯ್ಯ ಅವರೇ ಅಧಿಕಾರಿಗಳನ್ನು ಕರೆದು ಇಡೀ ಕೊಠಡಿಯನ್ನು ನವೀಕರಿಸಲು ಮೌಖಿಕವಾಗಿ ಸೂಚಿಸಿದ್ದರು.

 

ವಿಧಾನಸೌಧದಲ್ಲಿನ ಸಿಎಂ ಕೊಠಡಿ ನವೀಕರಣಕ್ಕೆ ಮೌಖಿಕ ಸೂಚನೆ; ಅಂದಾಜು 2.50 ಕೋಟಿ ವೆಚ್ಚ?

ಮುಖ್ಯಮಂತ್ರಿಗಳ ಕೊಠಡಿಯಲ್ಲಿನ ಒಳಾಂಗಣವನ್ನು ಹೊಸ ವಿನ್ಯಾಸದೊಂದಿಗೆ ನವೀಕರಿಸಲಾಗುತ್ತಿದೆ. ಕೆಫೆಟೇರಿಯಾ, ಶೌಚಾಲಯ, ಕೊಠಡಿಯ ನೆಲ, ಗೋಡೆಗಳ ವಿನ್ಯಾಸ, ವಾಲ್‌ ಪೇಟಿಂಗ್‌, ವಿರಾಮ ಕೊಠಡಿ, ಅವರ ಕೊಠಡಿ, ಸಂದರ್ಶಕರ ಕೊಠಡಿಯನ್ನೂ ನವೀಕರಿಸಲಾಗಿದೆ ಎಂದು ತಿಳಿದು ಬಂದಿದೆ.

 

ಮುಖ್ಯಮಂತ್ರಿ ಕೊಠಡಿ ನವೀಕರಣ ಸಂಬಂಧ ಮುಖ್ಯಮಂತ್ರಿ ಸಚಿವಾಲಯದಿಂದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಯಾವುದೇ ಪತ್ರ ವ್ಯವಹಾರ ನಡೆದಿಲ್ಲ. ಇದಕ್ಕೂ ಮುನ್ನವೇ   ಕಾಮಗಾರಿಗಳು ಆರಂಭವಾಗಿದ್ದವು. ಇದೀಗ ಈ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ ಎಂದು ಗೊತ್ತಾಗಿದೆ.

 

ಡಿಸಿಎಂ ವಸತಿಗೃಹದ ಗಾರ್ಡ್‌ನ್‌ ಲೈಟ್ಸ್‌ ಸೇರಿ ದುರಸ್ತಿಗೆ 1.38 ಕೋಟಿ ವೆಚ್ಚ; ಬರಗಾಲದಲ್ಲೂ ದುಂದುವೆಚ್ಚ

 

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ಸರ್ಕಾರಿ ನಿವಾಸವನ್ನು ದುರಸ್ತಿ ಹೆಸರಿನಲ್ಲಿ ಈಗಾಗಲೇ  1.38 ಕೋಟಿ ರು. ವೆಚ್ಚದಲ್ಲಿ ಅಲಂಕರಿಸಲಾಗಿದೆ.

 

ಡಿಸಿಎಂ ವಸತಿಗೃಹದ ಗಾರ್ಡ್‌ನ್‌ ಲೈಟ್ಸ್‌ ಸೇರಿ ದುರಸ್ತಿಗೆ 1.38 ಕೋಟಿ ವೆಚ್ಚ; ಬರಗಾಲದಲ್ಲೂ ದುಂದುವೆಚ್ಚ

 

ಉಪ ಮುಖ್ಯಮಂತ್ರಿಯವರಿಗೆ ಹಂಚಿಕೆ ಮಾಡಲಾಗಿರುವ ವಸತಿಗೃಹ ಕೆ ಕೆ ದಕ್ಷಿಣ -1ರ ದುರಸ್ತಿ ಕಾಮಗಾರಿಗಳನ್ನು ಒಟ್ಟಾರೆ 1.38 ಕೋಟಿ ರು. ವೆಚ್ಚದಲ್ಲಿ ನೇರವಾಗಿ ಕೈಗೊಳ್ಳಲು ಕೆಟಿಪಿಪಿ ಕಾಯ್ದೆ 4 ಜಿ ವಿನಾಯಿತಿ ದೊರೆತಿತ್ತು.

 

 

ಏನೆಲ್ಲಾ ದುರಸ್ತಿ ಆಗಿತ್ತು?

 

ಕಿಚನ್‌ ಕ್ಯಾಬಿನೆಟ್‌, ವಾಲ್‌ ಪೆನಲಿಂಗ್‌, ಪೈಟಿಂಗ್‌, ಬಾಗಿಲು, ಕಿಟಕಿ, ಗ್ರಿಲ್‌, ಕರ್ಟನ್‌ ರಾಡ್‌, ಕಾರ್ಟ್‌ ಕ್ಲಾತ್‌, ಪೀಠೋಪಕರಣಗಳಿಗೆ 98 ಲಕ್ಷ ರು., ಎಲ್‌ಇಡಿ ಫಿಟ್ಟಿಂಗ್ಸ್‌, ಸ್ಟ್ರೀಟ್‌ ಲೈಟ್ಸ್‌, ಲಾನ್‌ ಲೈಟ್ಸ್‌, ಗಾರ್ಡ್‌ನ್‌ ಲೈಟ್ಸ್‌, ವಾಟರ್‌ ಹೀಟರ್ಸ್‌, ಸೀಲಿಂಗ್‌ ಫ್ಯಾನ್‌, ಇನ್ನಿತರೆ ಎಲೆಕ್ಟ್ರಿಕ್‌  ಉಪಕರಣಗಳು ಮತ್ತು ದುರಸ್ತಿಗಳಿಗೆ 40 ಲಕ್ಷ ರು ಸೇರಿ ಒಟ್ಟಾರೆ 1.38 ಕೋಟಿ ರು. ವೆಚ್ಚವಾಗಲಿದೆ.

 

 

ಕುಮಾರಕೃಪ ನಿವಾಸದಿಂದ ಕಾವೇರಿ ನಿವಾಸಕ್ಕೆ ಸ್ಥಳಾಂತರಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೂತನ ನಿವಾಸಕ್ಕೂ ಪೀಠೋಪಕರಣಗಳ ಪೂರೈಸಲು 3 ಕೋಟಿ ರು. ಖರ್ಚಾಗಿತ್ತು.

 

ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿತ ಸಚಿವರ ಕಚೇರಿ ದುರಸ್ತಿ ಮತ್ತು ಬಣ್ಣ ಬಳಿಯುವ ಹೆಸರಿನಲ್ಲಿ 3.80 ಕೋಟಿ ರು ಬಿಡುಗಡೆ ಮಾಡಲಾಗಿತ್ತು. ಸಚಿವರ ವಸತಿ ಗೃಹಗಳಿಗೆ ಗೃಹಪಯೋಗಿ ವಸ್ತು ಮತ್ತು ಪೀಠೋಪಕರಣಗಳ ಪೂರೈಕೆಗಾಗಿ 3.40 ಕೋಟಿ ರು. ಬಿಡುಗಡೆಯಾಗಿತ್ತು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img