Sunday | June 14, 2026 |

583.15 ಎಕರೆಯಲ್ಲಿ 773 ನಕಲಿ ಹೆಸರುಗಳ ಸೇರ್ಪಡೆ; ತಹಶೀಲ್ದಾರ್‌ ಸೇರಿ 6 ಅಧಿಕಾರಿಗಳು ಭಾಗಿ

Support THE-FILE

spot_img

ಬೆಂಗಳೂರು; ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು ವ್ಯಾಪ್ತಿಯ ವಿವಿಧೆಡೆ ಒಟ್ಟು 583 ಎಕರೆ 15 ಗುಂಟೆ ಜಮೀನಿನಲ್ಲಿ 776 ನಕಲಿ ಹೆಸರುಗಳನ್ನು ಸೇರಿಸಿರುವುದನ್ನು  ಕೆಎಎಸ್‌ ಅಧಿಕಾರಿ ಸಂಗಪ್ಪ ನೇತೃತ್ವದ ತನಿಖಾ ತಂಡವು ಪತ್ತೆ ಹಚ್ಚಿದೆ. ಈ ಸಂಬಂಧ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ.

 

ಮಳವಳ್ಳಿ ತಾಲೂಕಿನಲ್ಲಿ  ವಿವಿಧ ಗೋಮಾಳ ಜಮೀನು, ಹುಲ್ಲುಬನ್ನಿ, ಗುಂಡುತೋಪು ಮತ್ತು ಹಲವು ಜಮೀನುಗಳನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಅಕ್ರಮವಾಗಿ ಖಾತೆ, ಪಹಣಿ ಸೃಷ್ಟಿಸಲಾಗಿದೆ ಎಂದು ಖುದ್ದು ಶಾಸಕ ಪಿ ಎಂ ನರೇಂದ್ರಸ್ವಾಮಿ ಅವರು ಸರ್ಕಾರದ ಗಮನಕ್ಕೆ ತಂದಿದ್ದರು. ಈ ಕುರಿತು ಸರ್ಕಾರವು ತನಿಖಾ ತಂಡವನ್ನು ರಚಿಸಿತ್ತು.

 

ಇದೀಗ ತನಿಖಾ ತಂಡವು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ವರದಿ ಆಧರಿಸಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಸಂಬಂಧ ವರದಿ ಸಲ್ಲಿಸಬೇಕು ಎಂದು 2025ರ ಮಾರ್ಚ್‌ 3ರಂದು ಕಂದಾಯ ಇಲಾಖೆಗೆ ನಿರ್ದೇಶನ ನೀಡಿದೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು  ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿರುವ ಮಳವಳ್ಳಿಯಲ್ಲಿ  ತಹಶೀಲ್ದಾರ್‌ ಅಗಿ ಕಾರ್ಯನಿರ್ವಹಿಸಿದ್ದ  ಎಂ ವಿಜಯಣ್ಣ, ಕುಮಾರ ಬಿ ವಿ, ಶಿರಸ್ತೆದಾರರಾದ ಅಶೋಕ್‌ ಕುಮಾರ್‌ ಎಚ್‌ ಎಂ, ಪಾಂಡವಪುರ ತಾಲೂಕು ಕಚೇರಿಯ ಪ್ರಥಮ ದರ್ಜೆ ಗುಮಾಸ್ತ ಪ್ರಕಾಶ್ ಜಿ ಎಂ, ಮಳವಳ್ಳಿ ತಾಲೂಕಿನ ಭೂಮಿ ಕೇಂದ್ರದ ಗ್ರಾಮ ಆಡಳಿತಾಧಿಕಾರಿ ಕಲಾವತಿ, ರಂಜಿತಾ, ರಾಜಸ್ವ ನಿರೀಕ್ಷಕ ಚಂದ್ರ, ಬಸವಲಿಂಗೇಗೌಡ ಅವರ ವಿರುದ್ಧ ದೋಷಾರೋಪಣೆ ಪಟ್ಟಿ ಜಾರಿಮಾಡಲು ಇಲಾಖೆಯು ಶಿಫಾರಸ್ಸು ಮಾಡಿರುವುದು ಗೊತ್ತಾಗಿದೆ.

 

 

 

ಮಳವಳ್ಳಿ ತಾಲೂಕಿನಲ್ಲಿ ಕಳೆದ 5 ವರ್ಷಗಳಲ್ಲಿ ಸರ್ಕಾರಿ ಜಮೀನುಗಳಿಗೆ ಅಕ್ರಮವಾಗಿ ಖಾತೆ, ಪಹಣಿ ಸೃಷ್ಟಿಸಲಾಗಿದೆ. ವಿವಿಧ ಗೋಮಾಳ ಜಮೀನು, ಹುಲ್ಲುಬನ್ನಿ, ಗುಂಡು ತೋಪು ಹಾಗೂ  ಹಲವು ಜಮೀನುಗಳನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ, ಪಹಣಿ ಸೃಷ್ಟಿಸಿ ವರ್ಗಾವಣೆ ಮಾಡಲಾಗಿತ್ತು. ಒಟ್ಟು 400 ಮ್ಯುಟೇಷನ್‌ಗಳಲ್ಲಿ ಅರ್ಜಿ ದಾಖಲು, ಲಾಗಿನ್‌ ಅನುಮೋದನೆ ನೀಡಿ ಪಹಣಿಯಲ್ಲಿ 776 ನಕಲಿ ಹೆಸರುಗಳನ್ನು ಸೇರಿಸಲಾಗಿತ್ತು ಎಂದು ತನಿಖಾ ವರದಿಯಲ್ಲಿ ಹೇಳಲಾಗಿದೆ.

 

 

ಈ ಪಟ್ಟಿಯಲ್ಲಿ ಕೇವಲ ಹೊಸದಾಗಿ ಹೆಸರನ್ನು ಸೇರಿಸಿರುವ ಪ್ರಕರಣಗಳನ್ನು ಮಾತ್ರ ಗುರುತಿಸಲಾಗಿದೆ. ವಿಸ್ತೀರ್ಣ ಬದಲಾವಣೆ ಇಲ್ಲದೇ ಅನಧಿಕೃತವಾಗಿ ಖಾಸಗಿ ಹೆಸರನ್ನು ಬದಲಾವಣೆ ಮಾಡಿರುವುದು, ಹಕ್ಕು ಮತ್ತು ಋಣಗಳನ್ನು ಅನಧಿಕೃತವಾಗಿ ಸೇರಿಸಲಾಗಿದೆ ಎಂದು ತನಿಖಾ ವರದಿಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಒಟ್ಟು 583 ಎಕರೆ 15 ಗುಂಟೆ ಪಹಣಿಯು ಅನಧಿಕೃತವಾಗಿ ನಮುದಾಗಿದೆ. ಇವೇ ಸರ್ವೆ ನಂಬರ್‌ಗಳಲ್ಲಿ ನಕಲಿ ಪೋಡಿ ಅರ್ಜಿ ದಾಖಲಿಸಲಾಗಿದೆ. ನಕಲಿಯಾಗಿ ಸೇರಿಸಿರುವ ಹೆಸರುಗಳನ್ನು ಬೇರೆ ಸರ್ಕಾರಿ ಸರ್ವೆ ನಂಬರ್‌ಗಳಿಗೆ ವರ್ಗಾಯಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಯಾವ್ಯಾವ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ತನಿಖಾ ವರದಿಯಲ್ಲಿ ವಿವರಿಸಿದೆ.

 

ಲಾಗಿನ್‌ ನೀಡಿರುವ ಅಧಿಕಾರಿಗಳನ್ನೂ ಸಹ ಕಕ್ಷಿದಾರರು ಎಂದು ಗುರುತಿಸಬೇಕು. ಕಡತ ಲಭ್ಯವಿಲ್ಲದ ಎಲ್ಲಾ ಪ್ರಕರಣಗಳನ್ನು ಅನಧಿಕೃತ ಎಂದು ವರದಿಯಲ್ಲಿ ನಮೂದಿಸಲಾಗಿದೆ. ಕೆಲವು ಸಂದರ್ಭಗಳಲ್ಲಿ ಈಗಿನ ವಿಷಯ ನಿರ್ವಾಹಕರು, ಅಭಿಲೇಖಾಯ ಸಿಬ್ಬಂದಿ ಕಡತವನ್ನು ಸರಿಯಾಗಿ ಹುಡುಕದೇ ಲಭ್ಯವಿಲ್ಲ ಎಂದು ವರದಿ ನೀಡಿರುವ ಸಾಧ್ಯತೆ ಇದೆ.

 

ಇನ್ನೂ ಕೆಲವು ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಗೆ ಸಿವಿಲ್‌ ನ್ಯಾಯಾಲಯಕ್ಕೆ ಕಡತವನ್ನು ರವಾನಿಸುವ ಸಾಧ್ಯತೆ ಇದೆ ಎಂದು ತನಿಖಾ ವರದಿಯಲ್ಲಿ ಪ್ರಸ್ತಾವಿಸಿರುವುದು ತಿಳಿದು ಬಂದಿದೆ.

 

‘ಯಾವುದೇ ದಾಖಲೆಗಳಿಲ್ಲದೇ ಹೆಸರುಗಳನ್ನು ದಾಖಲಿಸುವುದು ಸರ್ಕಾರಿ ನೌಕರರಿಗೆ ತರವಲ್ಲದ ವರ್ತನೆ ಆಗಿದೆ. ಇದು ಭಾರತೀಯ ನ್ಯಾಯ ಸಂಹಿತೆ 201, 340, 336ರಂತೆ ಅಪರಾಧವಾಗಿರುತ್ತದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 192 ಎ ರಂತೆ ಸಹ ಇದು ಅಪರಾಧವಾಗಿದೆ. ಆದ್ದರಿಂದ ತಪ್ಪಿತಸ್ಥ ಅಧಿಕಾರಿ, ಸಿಬ್ಬಂದಿ ಹಾಗೂ ಫಲಾನುಭವಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಬಹುದು,’ ಎಂದು ತನಿಖಾ ತಂಡವು ಶಿಫಾರಸ್ಸು ಮಾಡಿದೆ.

 

 

ತಾಲೂಕಿನ ವಿವಿಧೆಡೆ ಗೋಮಾಳ, ಹುಲ್ಲಬನ್ನಿ, ಗುಂಡು ತೋಪು ಸೇರಿದಂತೆ ಸಾವಿರಾರು ಎಕರೆ ಸರ್ಕಾರಿ ಜಮೀನುಗಳನ್ನು ಅಕ್ರಮವಾಗಿ ಖಾತೆ ಸೃಷ್ಟಿಸಿ ಬಲಾಢ್ಯರಿಗೆ ಖಾತೆ ಮಾಡಿಕೊಟ್ಟಿದೆ ಎಂದು ಶಾಸಕ ಪಿ ಎಂ ನರೇಂದ್ರಸ್ವಾಮಿ ಮತ್ತು ಸಾರ್ವಜನಿಕರು ದೂರು ನೀಡಿದ್ದರು.

 

ಸರ್ಕಾರಿ ಭೂಮಿಯನ್ನು ಕಂದಾಯ ಇಲಾಖೇಯ ವಿವಿಧ ಹಂತದ ಅಧಿಕಾರಿಗಳು, ನೌಕರರು ಶಾಮೀಲಾಗಿ ಖಾಸಗಿ ವ್ಯಕ್ತಿಗಳಿಗೆ ಹಕ್ಕು ಬದಲಾವಣೆ ಮಾಡುವ ರುದ್ದೇಶದಿಂದ ಪೊಡಿ ಮಾಡಲಾಗಿತ್ತು. ಐದುವ ರ್ಷಗಳಲ್ಲಿ ಸರ್ಕಾರಿ ಜಮೀನುಗಳನ್ನು ಅಕ್ರಮವಾಗಿ ರಾಜಕೀಯ ಪಕ್ಷಗಳ ಹಿಂಬಾಲಕರಿಗೆ ಹಾಗೂ ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿತ್ತು. ಅಕ್ರಮ ಖಾತೆ ಆಡಿ ಬೇರೆಯವರ ಹೆಸರಿಗೆ ವರ್ಗಾವಣೆ ಮಾಡಿರುವುದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img