Monday | June 15, 2026 |

ಆರ್‍‌ಸಿಬಿ ಸಂಭ್ರಮಾಚರಣೆ; ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ಸಿಎಂ, ಇಂಡಿಯಾ ಟುಡೆ ವರದಿ

Support THE-FILE

spot_img

ಬೆಂಗಳೂರು; ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‍‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರನ್ನು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಹ್ವಾನಿಸಿದ್ದರು ಎಂದು ರಾಜಭವನ ಮೂಲಗಳನ್ನಾಧರಿಸಿ ಇಂಡಿಯಾ ಟುಡೆ ಜಾಲತಾಣವು ವರದಿ ಪ್ರಕಟಿಸಿದೆ.

ಆರ್‍‌ಸಿಬಿ ಸಂಭ್ರಮಾಚರಣೆಗೆ ರಾಜ್ಯಪಾಲರನ್ನು ಆಹ್ವಾನಿಸಿದ್ದು ಯಾರು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರನ್ನು ಮಾಧ್ಯಮಗಳು ಪ್ರಶ್ನಿಸಿದ್ದವು. ಆಗ ಡಿ ಕೆ ಶಿವಕುಮಾರ್‍‌ ಅವರು ರಾಜ್ಯಪಾಲರನ್ನೇ ಈ ಬಗ್ಗೆ ಕೇಳಿ ಎಂದು ಉತ್ತರಿಸಿ ಜಾರಿಕೊಂಡಿದ್ದರು.

ಇದೀಗ ಇಂಡಿಯಾ ಟುಡೆಯು ರಾಜಭವನ ಮೂಲಗಳನ್ನಾಧರಿಸಿ ಪ್ರಕಟಿಸಿರುವ ವರದಿಯಲ್ಲಿ ರಾಜ್ಯಪಾಲರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆರ್‍‌ಸಿಬಿ ಸಂಭ್ರಮಾಚರಣೆಗೆ ಅಧಿಕೃತವಾಗಿ ಆಹ್ವಾನಿಸಿದ್ದರು ಎಂದು ಹೇಳಲಾಗಿದೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿತವಾಗಿದ್ದ ಆರ್‍‌ಸಿಬಿ ಸಂಭ್ರಮಾಚರಣೆಯಲ್ಲಿ ರಾಜ್ಯಪಾಲರು ಭಾಗವಹಿಸಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ರಾಜ್ಯಪಾಲರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಖುದ್ದು ಆಹ್ವಾನಿಸಿದ್ದರು ಎಂಬ ಸಂಗತಿಯು ಈ ಪ್ರಕರಣವನ್ನು ಮತ್ತೊಂದು ಮಗ್ಗುಲಿಗೆ ಹೊರಳಿಸಿದೆ.

ಆರ್‌ಸಿಬಿ ಆಟಗಾರರನ್ನು ಅಭಿನಂದಿಸಲು ರಾಜಭವನಕ್ಕೆ ಆಹ್ವಾನಿಸಲು ಯೋಜಿಸಿದ್ದರು. ಆದರೆ ರಾಜ್ಯ ಸರ್ಕಾರವು ವಿಧಾನಸೌಧದಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದು ಅವರಿಗೆ ತಿಳಿಸಿತು ಎಂದು ರಾಜಭವನದ ಮೂಲಗಳು ಇಂಡಿಯಾ ಟುಡೇಗೆ ಪ್ರತ್ಯೇಕವಾಗಿ ತಿಳಿಸಿವೆ ಎಂದು ವರದಿಯಿಂದ ಗೊತ್ತಾಗಿದೆ.

ಮುಖ್ಯಮಂತ್ರಿಗಳು ವಿಧಾನಸೌಧ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಪಾಲರನ್ನು ಅಧಿಕೃತವಾಗಿ ಆಹ್ವಾನಿಸಿದ್ದಾರೆ ಎಂದು ರಾಜಭವನದ ಮೂಲಗಳು ಬಹಿರಂಗಪಡಿಸಿವೆ ಎಂದು ಇಂಡಿಯಾ ಟುಡೆಯು ಉಲ್ಲೇಖಿಸಿದೆ.

ಈ ಸನ್ಮಾನ ಸಮಾರಂಭವು ಸರ್ಕಾರಿ ಕಾರ್ಯಕ್ರಮವಲ್ಲ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ರಾಜ್ಯಪಾಲರನ್ನು ಆಹ್ವಾನಿಸಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದರು. ಆದರೀಗ ರಾಜಭವನ ಮೂಲಗಳು ಇಂಡಿಯಾ ಟುಡೆಗೆ ತಿಳಿಸಿರುವ ಪ್ರಕಾರ ರಾಜ್ಯಪಾಲರನ್ನು ಮುಖ್ಯಮಂತ್ರಿಯೇ ಆಹ್ವಾನಿಸಿದ್ದರು. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದಿನ ಹೇಳಿಕೆಗೆ ವಿರುದ್ಧವಾಗಿದೆ.

ಕಾರ್ಯಕ್ರಮ ನಡೆಸುವ ಬಗ್ಗೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯು ಮುಖ್ಯಮಂತ್ರಿಯೊಂದಿಗೆ ಮುಖ್ಯ ಕಾರ್ಯದರ್ಶಿಯು ಚರ್ಚಿಸಿದ್ದರು. ಪೊಲೀಸರು ಸಹ ಕಾರ್ಯಕ್ರಮ ಆಯೋಜಿಸಲು ಒಪ್ಪಿದ್ದರು. ನಾನು ಹಸಿರು ನಿಶಾನೆ ತೋರಿದೆ. ಅದಾದ ನಂತರ ಕೆಎಸ್‌ಸಿಎಯ ಖಜಾಂಚಿ ಮತ್ತು ಕಾರ್ಯದರ್ಶಿ ನನ್ನನ್ನು ಭಾಗವಹಿಸಲು ಆಹ್ವಾನಿಸಿದ್ದರು. ಅಲ್ಲಿ ನಡೆದ ಕಾರ್ಯಕ್ರಮವನ್ನು ಸರ್ಕಾರವು ಆಯೋಜಿಸಿರಲಿಲ್ಲ. ಅದು ಅವರ ಕಾರ್ಯಕ್ರಮವಾಗಿತ್ತು. ಮತ್ತು ಅವರೂ ಸಹ ರಾಜ್ಯಪಾಲರನ್ನು ಆಹ್ವಾನಿಸಿದ್ದರು. ಆದ್ದರಿಂದ ನಾನೂ ಭಾಗವಹಿಸಿದ್ದೆ. ಅದನ್ನು ಮೀರಿ ಇದರಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಎಂದು ಸಿದ್ದರಾಮಯ್ಯ ಅವರು ಭಾನುವಾರವಷ್ಟೇ ಹೇಳಿಕೆ ನೀಡಿದ್ದನ್ನು ಸ್ಮರಿಸಬಹುದು.

ಈ ಪ್ರಕರಣದಲ್ಲಿ ರಾಜಕೀಯ ಬೆರೆಸಲಾಗಿದೆ. ನಾನು ಪೊಲೀಸರಿಗೆ ಬೆದರಿಕೆ ಹಾಕಿದ್ದೇನೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಸುಳ್ಳು ಹೇಳುತ್ತಿದ್ದಾರೆ. ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮತ್ತು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ. ಹೀಗಾಗಿ ಸರ್ಕಾರ ಇದರಲ್ಲಿ ತಪ್ಪು ಮಾಡಿದೆ ಎಂಬ ಆರೋಪದಲ್ಲಿ ಹುರುಳಿಲ್ಲ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದರು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img