Saturday | June 13, 2026 |

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ವಿಧಾನ ಪರಿಷತ್‌ ಸದಸ್ಯರ ನೇಮಕ; ಅಧಿನಿಯಮ ತಿದ್ದುಪಡಿಗೆ ಪ್ರಸ್ತಾವ

Support THE-FILE

spot_img

ಬೆಂಗಳೂರು; ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ವಿಧಾನ ಪರಿತ್‌ ಸದಸ್ಯರನ್ನು ಕಾನೂನಾತ್ಮಕವಾಗಿ ನೇಮಕ ಮಾಡಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧಿನಿಯಮ 1991ಕ್ಕೆ ತಿದ್ದುಪಡಿ ತರಲು ಹೊರಟಿದೆ.

 

ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯು ಸಚಿವ ಸಂಪುಟಕ್ಕೆ ಕಡತ (ಪಿಡಿಎಸ್‌ 15 ಮಪ್ರಮಂ 2019) ಮಂಡಿಸಿದೆ. ಇದೇ ತಿಂಗಳಾಂತ್ಯಕ್ಕೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಇಲಾಖೆಯು ಸಚಿವ ಸಂಪುಟಕ್ಕೆ ಮಂಡಿಸಿರುವ ರಹಸ್ಯ ಹಾಳೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ಕಾನೂನು ರೀತಿಯಲ್ಲಿ ವಿಧಾನ ಪರಿಷತ್‌ ಸದಸ್ಯರನ್ನು ನೇಮಕ ಮಾಡಲು ಮಂಡಳಿಯ ಅಧಿನಿಯಮ 1991ರಲ್ಲಿ ಅವಕಾಶವಿರಲಿಲ್ಲ. ಈ ಕುರಿತು ವಿಧಾನ ಪರಿಷತ್‌ ಸದಸ್ಯರು ಅಧಿನಿಯಮ ತಿದ್ದುಪಡಿಗೆ ಒತ್ತಾಯಿಸಿದ್ದರು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಹರೀಶ್‌ ಕುಮಾರ್ ಅವರು ವಿಧಾನಪರಿಷತ್‌ ಅಧಿವೇಶನದಲ್ಲಿ ಈ ಕುರಿತು ಪ್ರಶ್ನೆ ಕೇಳಿದ್ದರು.

 

 

ಆಗ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಕಾನೂನು ರೀತಿಯಲ್ಲಿ ಮಂಡಳಿಗೆ ವಿಧಾನ ಪರಿಷತ್ ಸದಸ್ಯರನ್ನು ನೇಮಕ ಮಾಡಲು ಅವಕಾಶವಿರುವುದಿಲ್ಲ ಎಂದು ಉತ್ತರಿಸಿದ್ದರು.

 

 

ಇದೀಗ ಕಾಂಗ್ರೆಸ್‌ ಸರ್ಕಾರವು ಮಂಡಳಿಯ ಈ ಅಧಿನಿಯಮಕ್ಕೆ ತಿದ್ದುಪಡಿ ತರಲು ಹೊರಟಿದೆ.

 

 

ಸಚಿವ ಸಂಪುಟ ಪ್ರಸ್ತಾವದಲ್ಲೇನಿದೆ?

 

ವಿಧಾನಸಭೆ ಸದಸ್ಯರಿಂದ ಚುನಾಯಿತರಾದ ವಿಧಾನ ಪರಿಷತ್‌ ಸದಸ್ಯರಿಗೆ ಚುನಾವಣೆ ಕ್ಷೇತ್ರವಿರುವುದಿಲ್ಲ. ವಿಧಾನ ಪರಿಷತ್‌ ಸದಸ್ಯರು ಮಂಡಳಿಯ ಅಧಿಕಾರ ವ್ಯಾಪ್ತಿಯೊಳಗಿನ ಜಿಲ್ಲೆಯನ್ನು ನೋಡಲ್‌ ಜಿಲ್ಲೆಯೆಂದು ಆಯ್ಕೆ ಮಾಡಿಕೊಂಡರೆ ಅಂತಹವರನ್ನು ಮಂಡಳಿಯ ಸದಸ್ಯರಂದು ಪರಿಗಣಿಸಿ ಅವರಿಗೂ ಇತರೆ ಸದಸ್ಯರಿಗೆ ದೊರೆಯುವ ಸ್ಥಾನಮಾನ, ಸೌಲಭ್ಯಗಳು, ಅನುದಾನ ಮತ್ತು ಮಾನ್ಯತೆ ದೊರೆಯುವಂತೆ ಮಾಡಬೇಕಿದೆ. ಹೀಗಾಗಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧಿನಿಯಮ 1991ಕ್ಕೆ ತಿದ್ದುಪಡಿ ತರಬೇಕು ಎಂದು ಯೋಜನೆ ಇಲಾಖೆಯು ಪ್ರಸ್ತಾವಿಸಿರುವುದು ಸಚಿವ ಸಂಪುಟದ ರಹಸ್ಯ ಹಾಳೆಯಿಂದ ತಿಳಿದು ಬಂದಿದೆ.

 

 

ಆರ್ಥಿಕ ಪರಿಣಾಮಗಳೇನು?

 

ಆಯವ್ಯಯದಲ್ಲಿ ಹಂಚಿಕೆಯಾಗುವ ಅನುದಾನವನ್ನು ಮಂಡಳಿ ವ್ಯಾಪ್ತಿಯ ಎಲ್ಲಾ ಸದಸ್ಯರುಗಳಿಗೆ ಹಂಚಿಕೆ ಮಾಡಲಾಗುವುದು. ಸಭೆಯಲ್ಲಿ ಭಾಗವಹಿಸುವ ಹೆಚ್ಚುವರಿ ಸದಸ್ಯರುಗಳಿಗೆ ಪ್ರತಿ ಸಭೆಗೆ ಆಸೀನ ಭತ್ಯೆ, ಪ್ರಯಾಣ ಭತ್ಯೆ ಮತ್ತು ಇತರೆ ವೆಚ್ಚಗಳು ಸೇರಿದಂತೆ ಒಟ್ಟು 2,00,000 ರು.ಗಳನ್ನು ಮಂಡಳಿಯ ಆಡಳಿತಾತ್ಮಕ ನಿಧಿಯಿಂದ ಭರಿಸಬೇಕಿದೆ.

 

ಆರ್ಥಿಕ ಇಲಾಖೆ ಅಭಿಪ್ರಾಯವೇನು?

 

ಆಡಳಿತ ಇಲಾಖೆಯು ನೀಡಿದ್ದ ಪ್ರಸ್ತಾವವನ್ನು ಆರ್ಥಿಕ ಇಲಾಖೆಯು ಪರಿಶೀಲಿಸಿದೆ. ಕರ್ನಾಟಕ ವಿಧಾನಸಭೆಯಿಂದ ಆಯ್ಕೆಗೊಂಡ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ಹೊಸದಾಗಿ ಸೇರ್ಪಡೆಯಾಗಬಹುದಾದ ವಿಧಾನ ಪರಿಷತ್‌ನ 5 ಸದಸ್ಯರುಗಳಿಗೆ ಸಭೆಯಗಳ ಅಸೀನತೆ ಶುಲ್ಕ ಮತ್ತು ಪ್ರಯಾಣ ಭತ್ಯೆಗೆ ಆಗುವ 2.00 ಲಕ್ಷ ರು ಗಳ ಆಡಳಿತಾತ್ಮಕ ವೆಚ್ಚವನ್ನು ಮಾತ್ರ ಭರಿಸುವ ಷರತ್ತಿಗೊಳಪಟ್ಟು ಆರ್ಥಿಕ ಇಲಾಖೆಯು ಈ ಪ್ರಸ್ತಾವನೆಗೆ ಸಹಮತಿಸಿರುವುದು ಗೊತ್ತಾಗಿದೆ.

 

 

ಮಲೆನಾಡು ಪ್ರದೇಶಶಾಭಿವೃದ್ಧಿ ಮಂಡಳಿಯ ಅಧಿನಿಯಮಕ್ಕೆ ತರಲು ಹೊರಟಿರುವ ತಿದ್ದುಪಡಿ ಕುರಿತು 2023ರ ಜೂನ್‌ 221 ಮತ್ತು 2025ರ ಸೆ.17ರಂದು ಪರಿಶೀಲನಾ ಸಮಿತಿಯಲ್ಲಿ ಚರ್ಚೆಯಾಗಿದೆ. ಈ ತಿದ್ದುಪಡಿ ವಿಧೇಯಕವು ಭಾರತ ಸಂವಿಧಾನದ 7ನೇ ಅನುಸೂಚಿಯ 2ನೇ ಪಟ್ಟಿಯ 5ನೇ ಮತ್ತು 32ನೇ ನಮೂನೆ ಅಡಿಯಲ್ಲಿ ಬರಲಿದೆ.

 

ಹೀಗಾಗಿ ಈ ವಿಧೇಯಕವನ್ನು ಮಂಡಿಸಲು ರಾಜ್ಯ ವಿಧಾನ ಮಂಡಲಕ್ಕೆ ಅಧಿಕಾರವಿದೆ. ಇದು ಕಾನೂನಿನ ವಿಧೇಯಕದ ಉಪಬಂಧಗಳಿಗೆ ವ್ಯತಿರಿಕ್ತವಾಗುವುದು ಕಂಡು ಬಂದಿಲ್ಲ. ಇದನ್ನು ರಾಷ್ಟ್ರಪತಿಗಳ ಪರ್ಯಾಲೋಚನೆಗಾಗಿ ಕಾಯ್ದಿರಿಸುವ ಅಗತ್ಯತೆ ಕಂಡು ಬಂದಿಲ್ಲ ಎಂದು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯು ಅಭಿಪ್ರಾಯ ನೀಡಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

 

 

 

ಈ ಪ್ರಸ್ತಾವವನ್ನು ಯೋಜನೆ, ಕಾರ್ಯಕ್ರಮ, ಸಾಂಖ್ಯಿಕ ಸಚಿವ ಡಿ ಸುಧಾಕರ್‍‌ ಅವರೂ ಸಹ ಅನುಮೋದನೆ ನೀಡಿರುವುದು ಗೊತ್ತಾಗಿದೆ.

 

 

ಮಂಡಳಿಯಲ್ಲಿ ನಾಮನಿರ್ದೇಶನಕ್ಕೆ ಮಾನದಂಡಗಳೇನು?

 

ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧಿನಿಯಮ 1991ರ ಪ್ರಕಾರ ನಾಮ ನಿರ್ದೇಶನಕ್ಕೆ ಹಲವು ಮಾನದಂಡಗಳನ್ನು ರೂಪಿಸಿದೆ. ಇದರ ಪ್ರಕಾರ ರಾಜ್ಯ ಸರ್ಕಾರದಿಂದ ನಾಮನಿರ್ದೇಶಿತರಾದ ಹತ್ತು ಮಂದಿಯನ್ನು ಮೀರದ ಸದಸ್ಯರು, ಅವರ ಪೈಕಿ ಇಬ್ಬರು ಅನುಸೂಚಿತ ಜಾತಿಗಳು ಮತ್ತು ಒಬ್ಬರು ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ವ್ಯಕ್ತಿಗಳು ಸದಸ್ಯರಾಗಿರಬೇಕು ಎಂದು ಹೇಳಿದೆ.

 

ಮಂಡಳಿಯ ಅಧಿನಿಯಮ ಅಧ್ಯಾಯ 2, ಸೆಕ್ಷನ್‌ 5ರ ಪ್ರಕಾರ ಹುದ್ದೆಯ ಸದಸ್ಯತ್ವಕಕೆ ಅನರ್ಹತೆ ಬಗ್ಗೆಯೂ ವಿವರಿಸಿದೆ. 2020ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದ ಹರೀಶ್‌ ಕುಮಾರ್‍‌, ರುದ್ರೇಗೌಡರು, ಎಸ್‌ ಎಲ್ ಧರ್ಮೇಗೌಡರು ಅವರು ಮಂಡಳಿಗೆ ನೇಮಕವಾಗಿರಲಿಲ್ಲ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img