Monday | June 15, 2026 |

ಕೃಷ್ಣಾಭಾಗ್ಯ ಜಲನಿಗಮದಲ್ಲಿ 1,136.63 ಕೋಟಿ ಭ್ರಷ್ಟಾಚಾರ; ವಿಚಕ್ಷಣಾ ದಳದಿಂದ ತನಿಖೆಗೆ ಆದೇಶ

Support THE-FILE

spot_img

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಅನುಕೂಲವಾಗದ ಮತ್ತು ಅವರ ಅಭಿವೃದ್ಧಿಗೆ ಪೂರಕವಾಗದ ಹಾಗೂ ಫಲಾನುಭವಿಗಳೇ ಇಲ್ಲದ ಕಾಮಗಾರಿಗಳನ್ನು ನಿರ್ವಹಿಸುವ ಮೂಲಕ ಕುಷ್ಟಗಿ ಉಪ ವಿಭಾಗ, ಕೃಷ್ಣ ಭಾಗ್ಯ ಜಲ ನಿಗಮದಲ್ಲಿ 1,136.63 ಕೋಟಿ ರು. ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಮೇಲ್ನೋಟಕ್ಕೆ ನಿಜವಾಗಿದೆ ಎಂದು ಜಲ ಸಂಪನ್ಮೂಲ ಇಲಾಖೆಯು ಒಪ್ಪಿಕೊಂಡಿರುವುದು ಇದೀಗ ಬಹಿರಂಗವಾಗಿದೆ.

 

ಈ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎಂದು ಹೇಳಲಾಗಿರುವ ನಿಗಮದ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ್‌ ಎಂ ಚಿಣಿ ಅವರ ವಿರುದ್ಧದ ಆರೋಪಗಳು ಮತ್ತು ಪ್ರಕರಣದ ಸತ್ಯಾಸತ್ಯತೆಯನ್ನು ಅರಿಯಲು ವಿವರವಾದ ತನಿಖೆ ನಡೆಸಲು ಇಲಾಖೆಯು ಕ್ರಮ ಕೈಗೊಂಡಿದೆ. ಅಲ್ಲದೆ ಇಡೀ ಪ್ರಕರಣದ ಕುರಿತು ತನಿಖೆ ನಡೆಸಲು ಜಲ ಸಂಪನ್ಮೂಲ ಇಲಾಖೆಯ ವಿಚಕ್ಷಣಾ ದಳಕ್ಕೆ ವಹಿಸಿ 2022ರ ಫೆ.16ರಂದು ಆದೇಶ ಹೊರಡಿಸಿದೆ. ಈ ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ತನಿಖೆ ನಡೆಸಲು ಹೊರಡಿಸಿರುವ ಆದೇಶದ ಪ್ರತಿ

 

ಆದೇಶದಲ್ಲೇನಿದೆ?

 

ಸಣ್ಣ ನೀರಾವರಿ ಇಲಾಖೆಯ ಕುಷ್ಟಗಿ ವಿಭಾಗದಲ್ಲಿ ಎಸ್‌ ಸಿ ಪಿ ಮತ್ತು ಟಿಎಸ್‌ಪಿ ಯೋಜನೆಯಡಿಯಲ್ಲಿ ಕಳಪೆ ಗುಣಮಟ್ಟದ ಚೆಕ್‌ ಡ್ಯಾಂಗಳನ್ನು ನಿರ್ಮಿಸಿರುವ ಮತ್ತು ಯಾವುದೇ ಚೆಕ್‌ ಡ್ಯಾಂ ನಿರ್ಮಿಸದೇ ಬೋಗಸ್‌ ದಾಖಲೆಗಳನ್ನು ಸೃಷ್ಟಿಸಿ ಸುಮಾರು 50.00 ಕೋಟಿ ರು. ಅನುದಾನವನ್ನು ದುರ್ಬಳಕೆ ಮಾಡಲಾಗಿದೆ. ಕೃಷ್ಣಾ ಭಾಗ್ಯ ಜಲನಿಗಮದಲ್ಲಿ 2019-20ರವರೆಗೆ ಬಳಕೆಯಾಗದೇ ಉಳಿದಿದ್ದ 401.77ಕೋಟಿ ಹಾಗೂ 2020-21ನೇ ಸಾಲಿನಲ್ಲಿ ಬಿಡುಗಡೆಯಾದ 384.86 ಕೋಟಿ ರು. ಹಣವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸಂಬಂಧ ಪಡದ ಇತರೆ ಕಾಮಗಾರಿಗಳಿಗೆ ಉಪಯೋಗಿಸಿಕೊಳ್ಳಲಾಗಿದೆ.

 

ಈ ಗುತ್ತಿಗೆಯನ್ನು ಕಾನೂನಿನ ನಿರ್ದೇಶನಗಳನ್ನು ಉಲ್ಲಂಘಿಸಿ ಸ್ವಜಾತಿ ಮತ್ತು ತಮ್ಮ ಸಂಬಂಧಿ ಗುತ್ತಿಗೆದಾರರಿಗೆ ನೀಡಿ ನೂರಾರು ಕೋಟಿ ಅವ್ಯವಹಾರ ನಡೆಸಿದ್ದಾರೆ ಎಂಬ ಆಪಾದನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜೆಯಲ್ಲಿ ಭೂ ಸ್ವಾಧೀನ ಹಾಗೂ ಪುನರ್‌ ವಸತಿ, ಪುನರ್‌ ನಿರ್ಮಾಣ ಯೋಜನೆ ಅನುಷ್ಠಾನಕ್ಕೆ 2017-18 ಮತ್ತು 2018-19ನೇ ಸಾಲಿನಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಾಗಿ ಮೀಸಲಿರಿಸಿದ್ದ 300 ಕೋಟಿ ರು.ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸಂಬಂಧಪಡದ ಕಾಮಗಾರಿಗಳಿಗೆ ಪಾವತಿಸಿ ಕರ್ತವ್ಯ ಲೋಪವೆಸಗಿ ಭ್ರಷ್ಟಾಚಾರ ಮಾಡಿರುವ ಆರೋಪಗಳು ಮೇಲ್ನೋಟಕ್ಕೆ ನಿಜವೆಂದು ಕಂಡು ಬರುತ್ತಿದೆ.

 

ಈ ಹಿನ್ನೆಲೆಯಲ್ಲಿ ಪ್ರಕರಣದ ಸತ್ಯಾಸತ್ಯತೆಯನ್ನು ಅರಿಯಲು ವಿವರವಾದ ತನಿಖೆ ಕೈಗೊಳ್ಳುವುದು ಅವಶ್ಯಕವಾಗಿದೆ. ಹೀಗಾಗಿ ಪ್ರಕರಣವನ್ನು ಸಮಗ್ರವಾಗಿ ಪರಿಶೀಲಿಸಿ ವಿವರವಾದ ತನಿಖೆ ನಡೆಸಿ ತಕ್ಷಣವೇ ಸರ್ಕಾರಕ್ಕೆ ವರದಿ ಸಲ್ಲಿಸಲು ಪ್ರಕರಣವನ್ನು ಜಲಸಂಪನ್ಮೂಲ ಇಲಾಖೆಯ ವಿಚಕ್ಷಣಾ ದಳಕ್ಕೆ ವಹಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ. ಈ ಆದೇಶವನ್ನು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಅನುಮೋದಿಸಿದ್ದಾರೆ.

 

ಕೃಷ್ಣಾಭಾಗ್ಯ ಜಲನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅನುದಾನ ಮಾರ್ಗಪಲ್ಲಟಗೊಳಿಸಿರುವ ಸಂಬಂಧ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಮಾಜಿ ಅಧ್ಯಕ್ಷ ಭವಾನಿ ಮಠ ಎಂಬುವರು ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ದೂರನ್ನಾಧರಿಸಿ ಕ್ರಮ ಕೈಗೊಳ್ಳಬೇಕು ಎಂದು ಆಯೋಗವು ಸರ್ಕಾರಕ್ಕೆ ಸೂಚಿಸಿತ್ತು.

 

850 ಕೋಟಿ ದುರ್ಬಳಕೆ

 

2017-18ನೇ ಸಾಲಿನಿಂದ ಕೃಷ್ಣ ಭಾಗ್ಯ ಜಲನಿಗಮದಲ್ಲಿ ಭೂ ಸ್ವಾಧೀನ ಮತ್ತು ಪುನರ್‌ವಸತಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅನುಷ್ಠಾನಗೊಳಿಸಲು ಪ್ರತ್ಯೇಕ ಲೆಕ್ಕಶೀರ್ಷಿಕೆಯಡಿ ಎಸ್‌ಸಿಸಪಿ ಟಿಎಸ್‌ಪಿ ಯೋಜನೆ ಒಳಗೊಂಡಂತೆ ಅನುದಾನ ಕಲ್ಪಿಸಲಾಗಿದೆ. ಆದರೆ ಇದುವರೆಗೂ ಎಸ್‌ಸಿ ಎಸ್‌ಟಿ ಸಮುದಾಯಗಳಿಗೆ ಮನೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಅನುದಾನವನ್ನು ಖರ್ಚು ಮಾಡಿಲ್ಲ ಎಂದು ದೂರಿನಲ್ಲಿ ಪ್ರಸ್ತಾಪಿಸಿದ್ದರು.

 

2017-18ನೇ ಸಾಲಿನಿಂದ 2019-20ನೇ ಸಾಲಿನವರೆಗೆ ಬಿಡುಗಡೆ ಮಾಡಲಾದ ಅನುದಾನ 631.59 ಕೋಟಿ ಪೈಕಿ 214.16 ಕೋಟಿ ರು. 7(ಡಿ) ಅಡಿ ವೆಚ್ಚ ಮಾಡಲಾಗಿದೆ. ಇದಲ್ಲದೆ 91 ಕೋಟಿ ರು.,ನಲ್ಲಿ ರಸ್ತೆ, ಚರಂಡಿ, ಸಮುದಾಯ ಭವನ ಕಾಮಗಾರಿಗಳಿಗೆ ಅನಮೋದನೆ ನೀಡಲಾಗಿದೆ. ಒಟ್ಟು 305.10 ಕೋಟಿ ಅನುದಾನ ಉಪಯೋಗಿಸಲಾಗಿದೆ. ಆದರೆ ಕಳೆದ 2 ವರ್ಷಗಳಿಂದ ಮನೆಗಳ ನಿರ್ಮಾಣದ ಕುರಿತು ಫಲಾನುಭವಿಗಳ ಪಟ್ಟಿಯನ್ನು ಸಂಬಂಧದಪಟ್ಟ ವಿಭಾಗದಿಂದ ಮತ್ತು ಸಕ್ಷಮ ಪ್ರಾಧಿಕಾರದಿಂದ ಅಂತಿಮಗೊಳಿಸದೇ ಇರುವುದರಿಂದ ಈ ಮನೆಗಳ ನಿರ್ಮಾಣಕ್ಕಾಗಿ ಇನ್ನೂ ಸಹ ಟೆಂಡರ್‌ ಕರೆದಿಲ್ಲ ಹೀಗಾಗಿ ಅನುದಾನ ಖರ್ಚು ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಭವಾನಿಮಠ ಅವರು ದೂರಿನಲ್ಲಿ ವಿವರಿಸಿದ್ದರು.

 

ಈ ಪ್ರಕರಣದಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯ ಎಲ್ಲಾ ನಿಯಮಾವಳಿಗಳನ್ನು ಮತ್ತು ಕಾನೂನುಗಳನ್ನು ಅತ್ಯಂತ ಚಾಣಾಕ್ಷತನದಿಂದ ಉಲ್ಲಂಘಿಸಲಾಗಿದೆ. 401.77ಕೋಟಿ ಮತ್ತು 384.86 ಕೋಟಿ ರು.ಗಳ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಯಾವುದೇ ಅನುಕೂಲವಾಗದ ಅವರ ಅಭಿವೃದ್ಧಿಗೆ ಪೂರಕವಾಗದ ಮತ್ತು ಫಲಾನುಭವಿಗಳೇ ಇಲ್ಲದ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ ಎಂಬ ದೂರಿದ್ದರು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img