Monday | September 14, 2026 |

ಜಿಲ್ಲಾಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜನೆಗೆ ನಿರ್ದೇಶನ;ದುಂದುವೆಚ್ಚಕ್ಕೆ ದಾರಿ?

Support THE-FILE

spot_img

ಬೆಂಗಳೂರು; ಕೇಂದ್ರ ಮತ್ತು ರಾಜ್ಯ ಸರ್ಕಾರವು ಆಯವ್ಯಯದಲ್ಲಿ ಘೋಷಿಸಿದ್ದ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನದಲ್ಲಿ ಹಿಂದೆ ಬಿದ್ದಿದ್ದರೂ ವಿಧಾನಸಭೆ ಚುನಾವಣೆಗಿನ್ನು ಮೂರ್ನಾಲ್ಕು ತಿಂಗಳು ಇರುವಾಗಲೇ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಜಿಲ್ಲಾಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜಿಸಲು ಮುಂದಾಗಿದೆ.

ಈಗಾಗಲೇ ಕಲ್ಬುರ್ಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರವು ಆಯೋಜಿಸಿದ್ದ ಬೃಹತ್‌ ಸಮ್ಮೇಳನ, ಸಮಾವೇಶಕ್ಕೆ ಪ್ರಧಾನಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ಘಟಕದ ಹಲವು ಧುರೀಣರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಕೋಟ್ಯಂತರ ರುಪಾಯಿ ಖರ್ಚು ಮಾಡಿ ದುಂದುವೆಚ್ಚ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿರುವ ಹೊತ್ತಿನಲ್ಲೇ ಜಿಲ್ಲಾ ಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜಿಸಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ತನ್ನ ಬಲಾಬಲವನ್ನು ಪ್ರದರ್ಶಿಸುವುದು ಮತ್ತು ಫಲಾನುಭವಿಗಳನ್ನು ಓಲೈಸುವುದು ಸಮ್ಮೇಳನದ ಉದ್ದೇಶವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

ಜಿಲ್ಲಾಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜಿಸಬೇಕು ಎಂದು ಎಲ್ಲಾ ಇಲಾಖೆಗಳ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಇಲಾಖಾ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು 2023ರ ಫೆ.10ರಂದು ನಿರ್ದೇಶಿಸಿ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಮುಖ್ಯ ಕಾರ್ಯದರ್ಶಿ ಬರೆದಿರುವ ಪತ್ರದಲ್ಲೇನಿದೆ?

ದೇಶದ ಪ್ರಜೆಗಳೆಲ್ಲರ ಸರ್ವತೋಮುಖ ಅಭಿವೃದ್ಧಿಗೆ ಕಂಕಣಬದ್ಧವಾಗಿ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ. ಪ್ರಸ್ತುತ ಭಾರತ ಸರ್ಕಾರದ ಪ್ರಾಯೋಜಕತ್ವದ ಯೋಜನೆಗಳು ಹಾಗೂ ಸ್ವಯಂ ರಾಜ್ಯ ಸರ್ಕಾರದ ಹಲವು ಯೋಜನೆಗಳ ಮೂಲಕ ಸಮಾಜದ ಕಟ್ಟ ಕಡೆಯ ನಾಗರೀಕರನ್ನು ತಲುಪಲು ನಮ್ಮ ಸರ್ಕಾರವು ಅವಿರತವಾಗಿ ಕ್ರಮ ವಹಿಸಿದೆ.

ಮುಖ್ಯ ಕಾರ್ಯದರ್ಶಿ ಹೊರಡಿಸಿರುವ ಸುತ್ತೋಲೆ ಪ್ರತಿ

ಕೇಂದ್ರ ಸರ್ಕಾರದ ಪ್ರಾಯೋಜಿತ/ಸ್ವಯಂ ರಾಜ್ಯ ಸರ್ಕಾರದ ಫಲಾನುಭವಿ ಆಧಾರಿತ ಯಲವು ಯೋಜನೆಗಳಿಗೆ ಸಂಪೂರ್ಣವಾಗಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ಅಯಾ ಇಲಾಖೆಗಳ ಸಹಯೋಗದಲ್ಲಿ ಆಂದೋಲನ ರೂಪದಲ್ಲಿ ಚಾಲನೆ ನೀಡಲು ತಿಳಿಸಿದೆ. ಈ ಪ್ರಕ್ರಿಯೆಯಲ್ಲಿ ಎಲ್ಲಾ ಫಲಾನುಭವಿ ಆಧರಿತ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ವಹಿಸಬೇಕು.

ಫಲಾನುಭವಿಗಳ ಆಧಾರಿತ ಯೋಜನೆಗಳ ಎಲ್ಲಾ ಅರ್ಹ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರನ್ನು ಒಳಗೊಂಡಂತೆ ಫಲಾನುಭವಿಗಳ ಸಮ್ಮೇಳನವನ್ನು ಶೀಘ್ರವಾಗಿ ಆಯೋಜಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ನಿರ್ದೇಶಿಸಿದ್ದಾರೆ.

ಕಂದಾಯ ಗ್ರಾಮಗಳಲ್ಲಿ ವಾಸಿಸುತ್ತಿರುವ ಮಂದಿಗೆ ಹಕ್ಕುಪತ್ರಗಳನ್ನು ಸ್ಥಳೀಯ ತಹಶೀಲ್ದಾರ್‌ಗಳು ನಿಯಮಾನುಸಾರ ವಿತರಿಸುತ್ತಾರೆ. ಚುನಾವಣೆ ವರ್ಷವಾಗಿರುವ ಕಾರಣ ಹಕ್ಕುಪತ್ರಗಳ ವಿತರಣೆಯನ್ನು ರಾಜಕೀಯಕರಣಗೊಳಿಸಲಾಗುತ್ತಿದೆಯಲ್ಲದೇ ಇದರ ಹೆಸರಿನಲ್ಲಿ ಕೋಟ್ಯಂತರ ರುಪಾಯಿ ದುಂದುವೆಚ್ಚ ಮಾಡಲಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಬೊಕ್ಕಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹೀಗಿದ್ದರೂ ಜಿಲ್ಲಾಮಟ್ಟದಲ್ಲಿ ಫಲಾನುಭವಿಗಳ ಸಮಾವೇಶ ನಡೆಸಲು ಹೊರಡಿಸಿರುವ ಸುತ್ತೋಲೆಯು ಬೊಕ್ಕಸದಲ್ಲಿ ಉಳಿದಿರುವ ಹಣವನ್ನೂ ಬರಿದಾಗಿಸಲಿದೆ ಎನ್ನುತ್ತಾರೆ ಉನ್ನತ ಅಧಿಕಾರಿಯೊಬ್ಬರು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img