Monday | June 15, 2026 |

‘ನಾನು ಹೇಳಿದ ಹಾಗೆ ಕೇಳು, ರಾತ್ರಿ ಊಟಕ್ಕೆ ರೆಡಿ ಮಾಡು’; ನಿರ್ದೇಶಕರ ವಿರುದ್ಧ ಲೈಂಗಿಕ ಕಿರಕುಳ ಆರೋಪ

Support THE-FILE

spot_img

ಬೆಂಗಳೂರು; ‘ನಾನಿದ್ದೀನಮ್ಮ, ನಿನಗೇಕೆ ಚಿಂತೆ, ನಾನು ಹೇಳಿದ ಹಾಗೆ ನೀನು ಕೇಳು.  20 ಸಾವಿರ ಹಣ ನನಗೆ ಕೊಡು. ರಾತ್ರಿ ಊಟಕ್ಕೆ ರೆಡಿ ಮಾಡು, ಕರೆ ಮಾಡು ಬಂದು ಎಲ್ಲವನ್ನೂ ಸರಿ ಮಾಡುತ್ತೇನೆ,’

 

‘ಕೊಠಡಿಯ ಒಳಗಡೆ ಎಡಭಾಗಕ್ಕೆ ಇರುವ ಇನ್ನೊಂದು ಇನ್ನೊಂದು ಕೊಠಡಿಯಲ್ಲಿ 20,000 ಹಣ ಇಡು ಎಂದು ಹೇಳಿದಂತೆ ನಾನು ಹಣ ಇಟ್ಟಿದ್ದೆ. ನನ್ನ ಸಮಸ್ಯೆಯನ್ನು ಅವರು ಬಗೆಹರಿಸುತ್ತಾರೆ ಎಂದು ತಿಳಿದುಕೊಂಡಿದ್ದೆ. ಆದರೆ ನಾನು ಅವರು ಹೇಳಿದ ಹಾಗೆ ಊಟಕ್ಕೆ ರೆಡಿ ಮಾಡುವುದಕ್ಕೆ ನನಗೆ ಇಷ್ಟವಿಲ್ಲ. ಮತ್ತು ಅಂತಹ ಸಂಪ್ರದಾಯ ಕುಟುಂಬದಿಂದ ಬಂದವಳು ಅಲ್ಲ. ಈ ವಿಚಾರವಾಗಿ ಯಾವುದಕ್ಕೂ ಒಪ್ಪಿಕೊಳ್ಳದ ಕಾರಣ ನನ್ನ ಮೇಲೆ ದಿನನಿತ್ಯ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ನೀಡಿದ್ದಾರೆ.,’

 

ಇವಿಷ್ಟು ಗ್ರಂಥಾಲಯ ಸಹಾಯಕಿಯೊಬ್ಬರು ಕಳೆದ ಎರಡು ವರ್ಷದಿಂದ ಅನುಭವಿಸಿರುವ ಯಾತನೆಯ ಮಾತುಗಳು.

 

ತನ್ನ ಮೇಲಾಧಿಕಾರಿಯಾದ ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ ಕುಮಾರ್‌ ಎಸ್‌ ಹೊಸಮನಿ ಮತ್ತು ಇಲಾಖೆಯ ಇನ್ನಿತರೆ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ಆರ್‌ ಟಿ ನಗರದಲ್ಲಿರುವ ಗ್ರಂಥಾಲಯ ಸಹಾಯಕಿಯೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಗೆ ಲಿಖಿತವಾಗಿ 7 ಪುಟಗಳ ದೂರು ನೀಡಿದ್ದಾರೆ. ಈ ದೂರು, ಸಾರ್ವಜನಿಕ ಗ್ರಂಥಾಲಯದ ಇಲಾಖೆಯ ಮತ್ತೊಂದು ಮುಖವನ್ನು ತೆರೆದಿಟ್ಟಿದೆ.

 

ಗೌಪ್ಯತೆ ಕಾರಣಕ್ಕಾಗಿ ದೂರುದಾರಾರ ಹೆಸರನ್ನು ವರದಿಯಲ್ಲಿ ಬಹಿರಂಗಪಡಿಸುತ್ತಿಲ್ಲ.

 

ಈ ದೂರನ್ನಾಧರಿಸಿ ಕ್ರಮ ಕೈಗೊಳ್ಳಬೇಕು ಮತ್ತು ಇದನ್ನು ಸಚಿವರ ಗಮನಕ್ಕೆ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ ವೆಂಕಟೇಶಯ್ಯ ಅವರು ಶಾಲಾ ಶಿಕ್ಷಣ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಆಪ್ತ ಕಾರ್ಯದರ್ಶಿಗೆ ಟಿಪ್ಪಣಿ ಹಾಕಿದ್ದಾರೆ. ಈ ಟಿಪ್ಪಣಿಯ ಪ್ರತಿ ಮತ್ತು ಗ್ರಂಥಾಲಯ ಸಹಾಯಕಿ ನೀಡಿರುವ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ನಿರ್ದೇಶಕ ಸತೀಶ್‌ ಕುಮಾರ್‌ ಎಸ್‌ಹೊಸಮನಿ, ಉಪ ನಿರ್ದೇಶಕ ಚಂದ್ರಶೇಖರ್‌ ಹೆಚ್‌, ಅಧೀಕ್ಷಕ ಆನಂದ ಶಿವಪ್ಪ ಹಡಪದ, ಗ್ರಂಥಾಲಯ ಸಹಾಯಕ ನಾರಾಯಣಮೂರ್ತಿ, ದ್ವಿತೀಯ ದರ್ಜೆ ಸಹಾಯಕ ರಾಘವೇಂದ್ರ ಇವರು ಕೋವಿಡ್‌ ಸಂದರ್ಭದಿಂದಲೂ ಕಿರುಕುಳ ನೀಡುತ್ತಿದ್ದಾರೆ ಎಂದು ಗ್ರಂಥಾಲಯ ಸಹಾಯಕಿ ಅವರು ದೂರಿನಲ್ಲಿ ವಿವರಿಸಿದ್ದಾರೆ.

 

ರಸೀದಿ ಪುಸ್ತಕಗಳ ಸಂಖ್ಯೆಗೆ ಸಂಬಂಧಿಸಿದಂತೆ ಅನಗತ್ಯವಾಗಿ ಅಧಿಕಾರಿಗಳು ದಿನನಿತ್ಯ ನೋಟೀಸ್‌ ನೀಡುತ್ತಿದ್ದಾರೆ ಎಂದು ದೂರಿರುವ ಗ್ರಂಥಾಲಯ ಸಹಾಯಕಿ, ತಮ್ಮ ವಿರುದ್ಧದ ಆರೋಪಗಳ ಸಂಬಂಧ ನಡೆದಿದ್ದ ತನಿಖೆಯಲ್ಲಿಯೂ ತಮ್ಮ ಪಾತ್ರವಿಲ್ಲ ಎಂದು ಹೇಳಿದ್ದರೂ ವಿನಾ ಕಾರಣ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿರುವುದು ಗೊತ್ತಾಗಿದೆ.

 

 

 

ದೂರುದಾರರು ಈ ಸಂಗತಿಯನ್ನು ಇಲಾಖೆ ನಿರ್ದೇಶಕ ಸತೀಶ್‌ ಎಸ್‌ ಹೊಸಮನಿ ಅವರ ಗಮನಕ್ಕೂ ತಂದಿದ್ದಾರೆ. ಆ ವೇಳೆಯಲ್ಲಿ ಹೊಸಮನಿ ಅವರು ‘ನಾನಿದ್ದೀನಮ್ಮ, ನಿನಗೇಕೆ ಚಿಂತೆ, ನಾನು ಹೇಳಿದ ಹಾಗೆ ನೀನು ಕೇಳು. ನಾನು ಹೇಳಿದ ಹಾಗೆ ನೀನು ಕೇಳು. 20 ಸಾವಿರ ಹಣ ನನಗೆ ಕೊಡು. ರಾತ್ರಿ ಊಟಕ್ಕೆ ರೆಡಿ ಮಾಡು, ‘ಕರೆ ಮಾಡು ಬಂದು ಎಲ್ಲವನ್ನೂ ಸರಿ ಮಾಡುತ್ತೇನೆ,’ ಎಂದು ಹೇಳಿದ್ದರು ಎಂದು ದೂರಿನಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

ಗ್ರಂಥಾಲಯ ಇಲಾಖೆ ನಿರ್ದೇಶಕರ ಸೂಚನೆಯಂತೆಯೇ ಗ್ರಂಥಾಲಯ ಸಹಾಯಕಿಯು 20 ಸಾವಿರ ರುಪಾಯಿಗಳನ್ನು ಹಣವನ್ನು ಇರಿಸಿದ್ದರು. ಆದರೆ ಸಮಸ್ಯೆಯನ್ನು ನಿರ್ದೇಶಕರು ಬಗೆಹರಿಸಲಿಲ್ಲ ಎಂದು ಆರೋಪಿಸಿದ್ದಾರೆ.

 

ಅಲ್ಲದೇ ‘ನಾನು ಅವರು ಹೇಳಿದ ಹಾಗೆ ಹಣವನ್ನು ಇಟ್ಟಿದ್ದೆ. ನನ್ನ ಸಮಸ್ಯೆಯನ್ನು ಬಗೆಹರಿಸಲುತ್ತಾರೆ ಎಂದು ತಿಳಿದುಕೊಂಡಿರುತ್ತೇನೆ. ಆದರೆ ನಾನು ಅವರು ಹೇಳಿದ ಹಾಗೆ ಊಟಕ್ಕೆ ರೆಡಿ ಮಾಡುವುದಕ್ಕೆ ನನಗೆ ಇಷ್ಟವಿಲ್ಲ. ಅಂತಹ ಸಂಪ್ರದಾಯ ಕುಟುಂಬದಿಂದ ಬಂದವಳು ಅಲ್ಲ. ಈ ವಿಚಾರವಾಗಿ ಯಾವುದಕ್ಕೂ ಒಪ್ಪಿದಕೊಳ್ಳದ ಕಾರಣ ನನ್ನ ಮೇಲೆ ದಿನನಿತ್ಯ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ,’ ಎಂದು ದೂರಿನಲ್ಲಿ ನೋವನ್ನು ತೋಡಿಕೊಂಡಿರುವುದು ಗೊತ್ತಾಗಿದೆ.

ಡಿಸಿಎಂಗಳಿಗೆ 5 ಕೋಟಿ ಸಂಗ್ರಹಿಸಲು ತಾಕೀತು; ಗ್ರಂಥಾಲಯ ನಿರ್ದೇಶಕರೇ ವಸೂಲಿಗಿಳಿದರೇ?

 

ಈ ಕುರಿತು ಯಾರಿಗಾದರೂ ಹೇಳಿದರೆ ಅಮಾನತುಗೊಳಿಸಲಾಗುವುದು ಇಲ್ಲವೇ ದೂರದ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗುವುದು ಎಂದು ನಿರ್ದೇಶಕರು ಏರು ದನಿಯಲ್ಲಿ ಎಚ್ಚರಿಸಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿದೆ.

 

ಗ್ರಂಥಾಲಯ ಇಲಾಖೆ ಉಪ ನಿರ್ದೇಶಕ ಹೆಚ್‌ ಚಂದ್ರಶೇಖರ್‌ ಎಂಬುವರು ಗ್ರಂಥಾಲಯ ಸಹಾಯಕಿ ಮೇಲೆ ಕೈ ಹಾಕುವುದು, ಹಿಂದಿನಿಂದ ಬಂದು ತಬ್ಬಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿರುವುದು ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img