Saturday | June 13, 2026 |

ನವ ನಗರೋತ್ಥಾನ; 15 ತಿಂಗಳಾದರೂ ಬಿಡುಗಡೆಯಾಗದ ಅನುದಾನ, ಬರಿದಾದ ಬೊಕ್ಕಸ?

Support THE-FILE

spot_img

ಬೆಂಗಳೂರು; ಮುಖ್ಯಮಂತ್ರಿ ನವ ನಗರೋತ್ಥಾನ ಕ್ರಿಯಾ ಯೋಜನೆಗೆ 15 ತಿಂಗಳ ಹಿಂದೆಯೇ ಅನುಮೋದನೆ ದೊರೆತಿದ್ದರೂ ನಗರಾಭಿವೃದ್ಧಿ ಇಲಾಖೆಯು ಅನುದಾನ ಬಿಡುಗಡೆ ಮಾಡುತ್ತಿಲ್ಲ. ಈ ಅನುದಾನಕ್ಕಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರು ವಿಕಾಸಸೌಧ ಮತ್ತು ವಿಧಾನಸೌಧ ಮೆಟ್ಟಿಲು ಹತ್ತಿ ಬಸವಳಿದು ಹೋಗಿದ್ದಾರೆ.

 

ರಾಜಧಾನಿಯ ಅಭಿವೃದ್ಧಿಗಾಗಿ ಈ ಹಿಂದಿನ ಬಿಜೆಪಿ ಸರ್ಕಾರವು ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಒದಗಿಸಿದ್ದ 8149.27 ಕೋಟಿ ರೂ. ಪೈಕಿ 485.06 ಕೋಟಿ ವೆಚ್ಚದ ಕಾಮಗಾರಿಗಳನ್ನು ಈಗಿನ ಕಾಂಗ್ರೆಸ್‌ ಸರಕಾರವು ಕೈಬಿಟ್ಟಿರುವ ನಡುವೆಯೇ ಪ್ರತಿಪಕ್ಷಗಳ ಶಾಸಕರು ಪ್ರತಿನಿಧಿಸಿರುವ ಕ್ಷೇತ್ರಗಳಿಗೆ 15 ತಿಂಗಳಾದರೂ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ವಿಚಾರವು ಮುನ್ನೆಲೆಗೆ ಬಂದಿದೆ.

 

ಮುಖ್ಯಮಂತ್ರಿ ನವ ನಗರೋತ್ಥಾನ ಯೋಜನೆಯಡಿಯಲ್ಲಿ ಅನುದಾನ ಬಿಡುಗಡೆ ಮಾಡುವಲ್ಲಿ ನಗರಾಭಿವೃದ್ಧಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಈ ಸಂಬಂಧ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಲವು ಶಾಸಕರು ಮನವಿ, ದೂರುಗಳನ್ನು ಸಲ್ಲಿಸಿದ್ದಾರೆ. ಈ ದೂರುಗಳ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಕ್ರಿಯಾ ಯೋಜನೆಗಳಿಗೆ ಅನುಮೋದನೆ ದೊರೆತಿರುವ ಪ್ರಸ್ತಾವನೆಗಳಿಗೆ ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಕಮಿಷನ್‌ ಗಾಗಿ ಬೇಡಿಕೆ ಇರಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

 

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಹಲವು ಕ್ಷೇತ್ರಗಳಿಗೆ ಅನುದಾನದ ಪ್ರಸ್ತಾವನೆಗಳಿಗೆ ಅನುಮೋದನೆ ದೊರೆತಿರುವ ಅನುದಾನವನ್ನು ಕಾಂಗ್ರೆಸ್‌ ಸರ್ಕಾರವು ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡಿಲ್ಲ.
ಈ ಸಂಬಂಧ ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕ ಎಸ್‌ ಮುನಿರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 2024ರ ಮೇ 8ರಂದೇ ಪತ್ರ ಬರೆದಿದ್ದಾರೆ. ಅಲ್ಲದೇ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರ ಗಮನಕ್ಕೂ ತಂದಿದ್ದಾರೆ ಎಂದು ಗೊತ್ತಾಗಿದೆ.

 

ಪತ್ರದಲ್ಲೇನಿದೆ?

 

ಬೆಂಗಳೂರಿನ ದಾಸರಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬಿಬಿಎಂಪಿ 8 ವಾರ್ಡ್‌ಗಳ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ದೊರೆತಿತ್ತು. ಸರ್ಕಾರದ ಆದೇಶದಂತೆ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿಲ್ಲಿ 110 ಕೋಟಿ ರು. ಅಂದಾಜು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ಸಿಕ್ಕಿತ್ತು.

 

110 ಕೋಟಿ ರು ಅನುದಾನದ ಪೈಕಿ ಈಗಾಗಲೇ ಬೃಹತ್‌ ರಸ್ತೆ ವಿಭಾಗದ ವತಿಇಂದ ಚೊಕ್ಕಸಂದ್ರ ವಾರ್ಡ್‌ ನಂ 39ರಲ್ಲಿ 20 ಕೋಟಿ ರು.ಗಳ ಕಾಮಗಾರಿಗಳಿಗೆ ಕಾರ್ಯಾದೇಶವಾಗಿದ್ದು ಕೆಲಸ ಪ್ರಗತಿಯಲ್ಲಿದೆ. ಇತ್ತೀಚೆಗೆ ಉಳಿದ 90 ಕೋಟಿ ರು.ಗಳ ಅನುದಾನದ ಪೈಕಿ 12 ಕೋಟಿ ರು.ಗಳ ಅನುದಾನದ ಪ್ರಸ್ತಾವನೆಗೆ ಮಂಜೂರಾತಿಯಾಗಿರುವುದು ಪತ್ರದಿಂದ ತಿಳಿದು ಬಂದಿದೆ.

 

ಉಳಿಕೆ 78 ಕೋಟಿ ರು. ಅನುದಾನಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ 2023ರ ಜನವರಿ 12ರಲ್ಲಿ ನಗರಾಭಿವೃದ್ಧಿ ಇಲಾಖೆಗೆ ಅನುಮೋದನೆ ಕೋರಿ ಪ್ರಸ್ತಾವನೆ ಸಲ್ಲಿಸಿರುವುದು ಗೊತ್ತಾಗಿದೆ.

 

ಒಟ್ಟು 5 ಪ್ರಸ್ತಾವನೆಗಳಿಗೆ ಸುಮಾರು 15 ತಿಂಗಳು ಕಳೆದರೂ ಸಹ ನಗರಾಭಿವೃದ್ಧಿ ಇಲಾಖೆಯಿಂದ ಅನುಮೋದನೆ ದೊರೆತಿರುವುದಿಲ್ಲ. ಸರ್ಕಾರವು ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದರೂ ಸಹ ಇದುವರೆಗೂ ನಗರಾಭಿವೃದ್ಧಿ ಇಲಾಖೆಯಿಂದ ಪ್ರಸ್ತಾವನೆಗೆ ಅನುಮೋದನೆ ನೀಡದೇ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

 

‘ಈ ಪ್ರಸ್ತಾವನೆಗಳಿಗೆ ತುರ್ತಾಗಿ ಅನುಮೋದನೆ ನೀಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ನಗರಾಭಿವೃದ್ಧಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು,’ ಎಂದು ದಾಸರಹಳ್ಳಿ ಶಾಸಕ ಎಸ್‌ ಮುನಿರಾಜು ಅವರು 2024ರ ಮೇ 28ರಂದೇ ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ಗೊತ್ತಾಗಿದೆ.

 

ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯ ಐದು ಹಳ್ಳಿಗಳ ರಸ್ತೆ ಅಭಿವೃದ್ಧಿ ಮತ್ತು ದುರಸ್ತಿಗೆ ಹೆಚ್ಚುವರಿಯಾಗಿ ಒದಗಿಸಿದ್ದ 25 ಕೋಟಿ ರೂ. ವೆಚ್ಚದ ಕಾಮಗಾರಿಗಳ ಟೆಂಡರ್‌ಗೆ ನೀಡಲಾಗಿದ್ದ ಅನುಮೋದನೆಯನ್ನೂ ಹಿಂಪಡೆದಿರುವುದನ್ನು ಸ್ಮರಿಸಬಹುದು.

 

ಅಕ್ಟೋಬರ್ 2021 ರಲ್ಲಿ, ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಬಿಜೆಪಿ ಸರ್ಕಾರವು ಬೆಂಗಳೂರಿಗೆ ಅಮೃತ್ ನಗರೋತ್ಥಾನ ಯೋಜನೆಯಡಿ ರೂ.6,000 ಕೋಟಿ ಅನುದಾನವನ್ನು ಘೋಷಿಸಿತ್ತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ರಸ್ತೆ ಮೂಲಸೌಕರ್ಯ, ಕೆರೆಗಳು, ಮಳೆನೀರು ಚರಂಡಿಗಳು, ಆಸ್ಪತ್ರೆಗಳು ಮುಂತಾದ ಕ್ಷೇತ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿತ್ತು.

 

ಅಮೃತ್‌ ನಗರೋತ್ಥಾನ ಯೋಜನೆಯಡಿ 2,146 ಕಿ.ಮೀ ರಸ್ತೆಗಳ ಅಭಿವೃದ್ಧಿ (ಒಳಚರಂಡಿ ಸೇರಿದಂತೆ), 67 ಕೆರೆಗಳು ಮತ್ತು 11 ಹೊಸ ಉದ್ಯಾನಗಳ ಅಭಿವೃದ್ಧಿ, ಅಸ್ತಿತ್ವದಲ್ಲಿರುವ 15 ಉದ್ಯಾನವನಗಳ ನವೀಕರಣ, 42 ಹೊಸ ಶಾಲಾ ಕಟ್ಟಡಗಳು ಮತ್ತು ಅಸ್ತಿತ್ವದಲ್ಲಿರುವ 26 ಶಾಲೆಗಳ ನವೀಕರಣ, ನಿರ್ಮಾಣ 40 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 84 ಹಳೆಯ ಪ್ರಾಥಮಿಕ ಕೇಂದ್ರಗಳ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿತ್ತು.

 

2022-23ರಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿ ಹೊಸ ಶಾಲಾ ಕಟ್ಟಡಗಳ ನಿರ್ಮಾಣದ ರೂಪದಲ್ಲಿ ಬಿಬಿಎಂಪಿ ಶಾಲೆಗಳ ನವೀಕರಣವನ್ನು ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿಯ ಬಜೆಟ್‌ನಲ್ಲಿ ಉಲ್ಲೇಖಿಸಿತ್ತು. ಅಸ್ತಿತ್ವದಲ್ಲಿರುವ ಶಾಲೆಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಮತ್ತು ತರಗತಿ ಕೊಠಡಿಗಳನ್ನು ನಿರ್ಮಿಸಲು ಕಟ್ಟಡಗಳನ್ನು ಖಚಿತಪಡಿಸಿಕೊಳ್ಳಲು ಬಳಸಲಾಗಿದೆ ಎಂದು ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img