Thursday | June 18, 2026 |

ಹೆಚ್‌ಎಂಟಿ ಪ್ರಕರಣ; ಸರ್ಕಾರದ ವಿರುದ್ಧವೇ ಆರೋಪ, ರಕ್ಷಣೆ ಕೋರಿ ಸಿಬಿಐಗೆ ಐಎಫ್‌ಎಸ್‌ ಗೋಕುಲ್‌ ಪತ್ರ

Support THE-FILE

spot_img

ಬೆಂಗಳೂರು; ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಿರುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತ ಅಧಿಕಾರಿ ಐಎಫ್‌ಎಸ್‌ ಆರ್‍‌ ಗೋಕುಲ್‌ ಅವರು ಇದೀಗ ಸರ್ಕಾರದ ವಿರುದ್ಧವೇ ಆರೋಪ ಮಾಡಿದ್ದಾರೆ. ಅಲ್ಲದೇ ರಕ್ಷಣೆ ಕೋರಿ ಸಿಬಿಐಗೂ ಪತ್ರವನ್ನು ಬರೆದಿದ್ದಾರೆ.

 

ಈ ಸಂಗತಿಯನ್ನು ‘ದಿ ಫೈಲ್‌’, ಇದೀಗ ದಾಖಲೆ ಸಹಿತ ಹೊರಗೆಡವುತ್ತಿದೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಕಡತದ (FEE/107/FLL/2025 COMPUTER NUMBER 1772747) ಟಿಪ್ಪಣಿ ಹಾಳೆಗಳು ಲಭ್ಯವಾಗಿವೆ.

 

 

ಬೇಲಿಕೇರಿ ಕಬ್ಬಿಣದ ಅದಿರು ಕಳವು ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಅವರಿಗೆ ನ್ಯಾಯಾಲಯವು ಸಜೆ ವಿಧಿಸಿತ್ತು. ಕೆಲವೇ ಕೆಲವು ದಿನಗಳ ಅಂತರದಲ್ಲಿ ಇದೇ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ಸಾಕ್ಷಿಯಾಗಿರುವ ಐಎಫ್‌ಎಸ್‌ ಅಧಿಕಾರಿ ಗೋಕುಲ್‌ ಅವರಿಗೆ,  ಹೆಚ್‌ಎಂಟಿಯು ಅರಣ್ಯ ಜಮೀನನ್ನು ಅನಧಿಕೃತವಾಗಿ ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವ ಪ್ರಕರಣದಲ್ಲಿ ನೋಟೀಸ್‌ ನೀಡಿತ್ತು. ಈ ಪ್ರಕರಣದಲ್ಲಿ ಸರ್ಕಾರವು ತಮ್ಮನ್ನು ಬಲಿಪಶು ಮಾಡಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ ಎಂದು ಗೊತ್ತಾಗಿದೆ.

 

ಸರ್ಕಾರದ ವಿರುದ್ಧವೇ ಗಂಭೀರ ಆರೋಪ ಮಾಡುವ ಮೂಲಕ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸರ್ಕಾರವನ್ನು ಗೋಕುಲ್‌ ಅವರು ಬೆದರಿಸುತ್ತಿದ್ದಾರೆ ಎಂದು ಅರಣ್ಯ ಇಲಾಖೆಯ ಅಧಿಕಾರಿವರ್ಗವು ಇದಕ್ಕೆ ತಿರುಗೇಟು ನೀಡಿದೆ.

 

ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಿರುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತ ಅಧಿಕಾರಿ ಐಎಫ್‌ಎಸ್‌ ಆರ್‍‌ ಗೋಕುಲ್‌ ಅವರು ‘ ಈ ಪ್ರಕರಣದಲ್ಲಿ ತಮ್ಮನ್ನು ಬಲಿಪಶು ಮಾಡಲಾಗುತ್ತಿದೆ,’ ಎಂದು ಮುಖ್ಯ ಕಾರ್ಯದರ್ಶಿಗೆ ಬರೆದಿದ್ದಾರೆ ಎನ್ನಲಾಗಿರುವ ಪತ್ರವು ರಾಜಕೀಯ ವಲಯದಲ್ಲಿ ಮತ್ತೊಂದು ಸುತ್ತಿನ ಚರ್ಚೆಗೆ ಗ್ರಾಸವಾಗಲಿದೆ.

 

ಹೆಚ್ಎಂಟಿ ವಶದಲ್ಲಿರುವ ಅರಣ್ಯ ಜಮೀನಿಗೆ ಸಂಬಂಧಿಸಿದಂತೆ ವ್ಯಾಜ್ಯ ನಿರ್ವಹಣಾಧಿಕಾರಿಯಾಗಿ ನೇಮಕಗೊಂಡ ನಂತರ ಡಿನೋಟಿಫಿಕೇಷನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಅರಣ್ಯ ಸಚಿವಾಲಯವು ನೋಟೀಸ್‌ ಜಾರಿಗೊಳಿಸಿತ್ತು.

 

ಈ ನೋಟೀಸ್‌ಗೆ ಉತ್ತರ, ಸಮಜಾಯಿಷಿ ನೀಡಿರುವ ಗೋಕುಲ್‌ ಅವರು ‘Concerns and Victimization,‘ ಎಂದು ಮುಖ್ಯಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿರುವುದು ಗೊತ್ತಾಗಿದೆ. ಈ ಮೂಲಕ ಸರ್ಕಾರದ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ ಎಂದು ಟಿಪ್ಪಣಿ ಹಾಳೆಯಲ್ಲಿ ಅಧಿಕಾರಿಗಳು ವಿವರಿಸಿದ್ದಾರೆ.

 

 

ನೋಟೀಸ್‌ ನೀಡಿರುವ ಸಂದರ್ಭವನ್ನು ಬೇಲಿಕೇರಿ ಬಂದರಿನಲ್ಲಿ ಕಬ್ಬಿಣ ಅದಿರು ಕಳವು ಪ್ರಕರಣ, ಆಡಳಿತ ಪಕ್ಷದ ಶಾಸಕರಿಗೆ ನ್ಯಾಯಾಲಯವು ಸಜೆ ವಿಧಿಸಿರುವ ತೀರ್ಪಿನ ಸಂದರ್ಭಕ್ಕೂ ತಳಕು ಹಾಕಿರುವುದು ತಿಳಿದು ಬಂದಿದೆ.

 

ಬಲಿಪಶುವೇ?

 

ಗೋಕುಲ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಬರೆದಿರುವ ತಮ್ಮ ಪತ್ರದಲ್ಲಿ ‘Concerns and Victimization,’ ಎಂದು ಉಲ್ಲೇಖಿಸಿ, ಬೇಲಿಕೇರಿ ಕಬ್ಬಿಣದ ಅದಿರು ಕಳವು ಪ್ರಕರಣದಲ್ಲಿ ತಾವು ಪ್ರಾಸಿಕ್ಯೂಷನ್‌ ಸಾಕ್ಷಿಯಾಗಿದ್ದು, ಹಾಲಿ ಆಡಳಿತ ಪಕ್ಷದ ಒಬ್ಬರು ಶಾಸಕರಿಗೆ 2024ರ ಅಕ್ಟೋಬರ್‍‌ 24ರಂದು ಸಜೆ ಆಗಿರುತ್ತದೆ. ಅದಾದ ಕೆಲವೇ ದಿನಗಳಲ್ಲಿ ಅಂದರೆ 2024ರ ನವೆಂಬರ್‍‌ 11ರಂದು ತಾವು ನೋಟೀಸ್‌ ನೀಡಿರುವುದಾಗಿ ಉಲ್ಲೇಖಿಸಿ ಸರ್ಕಾರದ ವಿರುದ್ಧವೇ ಗಂಭೀರ ಆರೋಪ ಮಾಡಿರುತ್ತಾರೆ ಎಂದು ಟಿಪ್ಪಣಿ ಹಾಳೆಯಲ್ಲಿ ಹೇಳಲಾಗಿದೆ.

 

ಬೆದರಿಕೆ ತಂತ್ರವೋ?

 

ಗೋಕುಲ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿನ ಅಂಶಗಳನ್ನು ಅರಣ್ಯ ಇಲಾಖೆಯು ತಳ್ಳಿ ಹಾಕಿದೆ. ನೋಟೀಸ್‌ ನೀಡಿರುವುದಕ್ಕೂ ಹಿಂದಿನ ಬೆಳವಣಿಗೆಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಸಾಬೀತುಪಡಿಸುವ ಅಂಶಗಳನ್ನು ಟಿಪ್ಪಣಿ ಹಾಳೆಯಲ್ಲಿ ಚರ್ಚಿಸಿರುವುದು ಗೊತ್ತಾಗಿದೆ.

 

ಅರಣ್ಯ ಸಚಿವರ ಕಾರ್ಯಾಲಯದ ಟಿಪ್ಪಣಿ (2024ರ ಸೆ. 24, ಟಿಪ್ಪಣಿ ಸಂಖ್ಯೆ ಅಜೀಪ/984/2024-25 e-8604601/2024 )ಯನ್ನು ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕಳಿಸಿತ್ತು. ಇದರಲ್ಲಿ ಸಚಿವರ ಮತ್ತು ಸಚಿವ ಸಂಪುಟದ ಪೂರ್ವಾನುಮತಿ ಪಡೆಯದೇ ಸಾವಿರಾರು ಕೋಟಿ ರುಪಾಯಿ ಮೌಲ್ಯದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಐ ಎ ಹಾಕಿರುವ ಎಲ್ಲ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್‌ ನೀಡಿ 7 ದಿನಗಳ ಒಳಗಾಗಿ ಉತ್ತರ ಪಡೆದು ಮುಂದಿನ ಕ್ರಮ ಜರುಗಿಸಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿರುತ್ತದೆ ಎಂದು ವಿವರಣೆ ನೀಡಿರುವುದು ತಿಳಿದು ಬಂದಿದೆ.

 

 

‘ಅಂದರೇ ಆಡಳಿತ ಪಕ್ಷದ ಹಾಲಿ ಶಾಸಕರ ವಿರುದ್ಧವಾಗಿ ನ್ಯಾಯಾಲಯ ತೀರ್ಪು ಪ್ರಕಟಿಸುವ ಒಂದು ತಿಂಗಳುಗಳ ಮೊದಲೇ ಈ ಸೂಚನೆ ಅರಣ್ಯ ಸಚಿವಾಲಯದಿಂದ ಬಂದಿದ್ದು, ಆರ್‍‌ ಗೋಕುಲ್‌ ಅವರು ತಮ್ಮ ಕರ್ತವ್ಯ ಲೋಪ ಮುಚ್ಚಿಕೊಳ್ಳಲು ಸರ್ಕಾರದ ವಿರುದ್ಧವೇ ಗಂಭೀರ ಸ್ವರೂಪದದ ಮತ್ತು ಆಧಾರ ರಹಿತ ಆರೋಪ ಮಾಡುವಂತಹ ಉದ್ಧಟತನ ಪ್ರದರ್ಶಿಸಿರುತ್ತಾರೆ,’ ಎಂದು ವಿವರಿಸಿರುವುದು ಗೊತ್ತಾಗಿದೆ.

 

ಅಲ್ಲದೇ ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯದೇ ಸರ್ಕಾರದ ವಿರುದ್ಧವೇ ಆರೋಪ ಮಾಡಿ ರಕ್ಷಣೆ ಕೋರಿ ಸಿಬಿಐಗೆ ಪತ್ರ ಬರೆದಿದ್ದಾರೆ. ಇದು ಕೂಡ ಅಶಿಸ್ತಿನ ಪರಮಾವಧಿಯಾಗಿದೆ. ನಿಯಮಬಾಹಿರವಾಗಿದೆ ಮತ್ತು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಅನುಸರಿಸುತ್ತಿರುವ ಬೆದರಿಕೆ ತಂತ್ರವೆಂದೇ ಪರಿಗಣಿಸಬೇಕಾಗುತ್ತದೆ ಎಂದೂ ಟಿಪ್ಪಣಿ ಹಾಳೆಯಲ್ಲಿ ದಾಖಲಿಸಿರುವುದು ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img