Sunday | June 14, 2026 |

ಸಾಲಗಳಿಗೆ ಬಡ್ಡಿ ಸಹಾಯಧನಕ್ಕೆ ನಕಾರ; 44 ಕೋಟಿ ಹೊರೆ ಎಂದ ಸಹಕಾರ ಇಲಾಖೆ

Support THE-FILE

spot_img

ಬೆಂಗಳೂರು; ಮಧ್ಯಮಾವಧಿ ದೀರ್ಘಾವಧಿ ಕೃಷಿ ಸಾಲ ನೀಡುವ ಯೋಜನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿನ ಎಲ್ಲಾ ಬಗೆಯ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯಲು ಅವಕಾಶ ಇರುವುದರಿಂದ ಆಸಾಮಿ ಸಾಲಗಳಿಗೆ ಬಡ್ಡಿ ಸಹಾಯ ಧನ ನೀಡಲು ಪ್ರತ್ಯೇಕ ಯೋಜನೆ ಬೇಡಿಕೆಯನ್ನು ಸಹಕಾರ ಇಲಾಖೆ ತಿರಸ್ಕರಿಸಿದೆ.

ತೋಟಗಾರಿಕೆ ಉದ್ದೇಶಗಳ ಬಗ್ಗೆ ಕೃಷಿ ಪತ್ತಿನ ಸಹಕಾರ ಸಂಘಗಳು ಕೃಷಿಕರಿಗೆ ನೀಡುತ್ತಿರುವ ಆಸಾಮಿ ಸಾಲ/ಬಳಕೆ ಸಾಲ/ಕೃಷಿ ಅಲ್ಪಾವಧಿ ಸಾಲ ಮತ್ತಿತಿರೆ ಸಾಲಗಳನ್ನು ಕೃಷಿ ಸಾಲಗಳೆಂದು ಪರಿಗಣಿಸುವ ಬಗ್ಗೆ ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಈ ಕುರಿತು 2020ರ ಸೆ.14ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಸರ್ಕಾರದ ಶೇ.3ರ ಬಡ್ಡಿ ದರದಲ್ಲಿ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲ ನೀಡುವ ಯೋಜನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿನ ಎಲ್ಲಾ ಬಗೆಯ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯಲು ಅವಕಾಶವಿದೆ. ಹೀಗಾಗಿ ಆಸಾಮಿ ಸಾಲಗಳಿಗೆ ಬಡ್ಡಿ ಸಹಾಯ ಧನ ನೀಡಲು ಪ್ರತ್ಯೇಕ ಯೋಜನೆ ಜಾರಿಗೆ ಅವಶ್ಯಕತೆ ಇಲ್ಲ,’ ಎಂದು ಹೇಳಿರುವುದು ಪತ್ರದಿಂದ ತಿಳಿದು ಬಂದಿದೆ.

ಒಂದು ವೇಳೆ ಈ ಸಾಲಗಳಿಗೆ ಬಡ್ಡಿ ಸಹಾಯ ಧನ ನೀಡಿದ್ದಲ್ಲಿ ಪ್ರತಿ ವರ್ಷ 447 ಕೋಟಿ ರು. ಮೇಲೆ 44 ಕೋಟಿ (ಶೇ.10ರ ಬಡ್ಡಿ ದರ) ಬಡ್ಡಿ ಸಹಾಯಧನದ ಹೆಚ್ಚಿನ ಹೊರೆ ಬೀಳುತ್ತದೆ. ಹಾಗೆಯೇ ಇಂತಹ ಸಾಲಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಬಡ್ಡಿ ಮನ್ನಾ ಮಾಡಿದಲ್ಲಿ ಈ ಪ್ಯಾಕ್ಸ್‌ಗಳಲ್ಲಿ 20 ಕೋಟಿ ಸುಸ್ತಿಯಾಗಿದ್ದು, ಅಂದಾಜು 20 ಕೋಟಿ ರು.ಗಳ ಬಡ್ಡಿ ಹೊರೆ ಬೀಳುತ್ತದೆ ಎಂದೂ ಪತ್ರದಲ್ಲಿ ವಿವರಿಸಿದ್ದಾರೆ.

ಡಿಸಿಸಿ ಬ್ಯಾಂಕ್‌ನ ನೇತೃತ್ವದ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಇಯಲ್ಲಿ ಮತ್ತು ನಬಾರ್ಡ್‌ ಯುನಿಟ್‌ ಕಾಸ್ಟ್‌ ಪ್ರಕಾರ ಡಿಸಿಸಿ ಬ್ಯಾಂಕ್‌ ಅಲ್ಪಾವಧಿ ಮತ್ತು ಮಧ್ಯಮಾವಧಿ ಕೃಷಿ ಸಾಲ ನೀಡುತ್ತಿವೆ. ಈ ಸಾಲದ ನಿಯಮಾವಳಿಗಳ ಪ್ರಕಾರ ರೈತರಿಗೆ ಹೆಚ್ಚಿನ ಸಾಲ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಆಸಾಮಿ ಸಾಲದ ರೂಪದಲ್ಲಿ ಪ್ಯಾಕ್ಸ್‌ಗಳು ತಮ್ಮ ಸ್ವಂತ ಬಂಡವಾಳದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಸಾಲ ನೀಡುತ್ತಿದೆ. ಈ ಸಾಲಗಳನ್ನು ಕೃಷಿ ಸಾಲಗಳೆಂದು ಪರಿಗಣಿಸಿದಲ್ಲಿ ಬಡ್ಡಿ ಸಹಾಯಧನ, ಬಡ್ಡಿ ಮನ್ನಾ, ಸಾಲ ಮನ್ನಾ ಯೋಜನೆಗಳು ಅನ್ವಯವಾಗುವುದರಿಂದ ಈ ಬೇಡಿಕೆ ಇರುತ್ತದೆ ಎಂದು ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಆಸಾಮಿ ಸಾಲದ ವಿಷಯವು ಡಿಸಿಸಿ ಬ್ಯಾಂಕ್‌, ಪ್ಯಾಕ್ಸ್‌, ನಬಾರ್ಡ್ ಮತ್ತು ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಯಲ್ಲಿ ಇತ್ಯರ್ಥವಾಗಬೇಕಿದೆ. ಹೀಗಾಗಿ ಸರ್ಕಾರದ ಮಟ್ಟದಲ್ಲಿ ಜಿಲ್ಲಾ ಲೀಡ್‌ ಬ್ಯಾಂಕ್‌, ಕೃಷಿ ಇಲಾಖೆ, ಡಿಸಿಸಿ ಬ್ಯಾಂಕ್‌, ಪ್ಯಾಕ್ಸ್‌ಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕು ಎಂದೂ ನಿಬಂಧಕರು ಹೇಳಿದ್ದಾರೆ.

2020-21ನೇ ಸಾಲಿನಲ್ಲಿ ಮಾರುಕಟ್ಟೆ ಸಹಕಾರ ಸಂಘಗಳೂ ಸಹ ರೈತರಿಗೆ 2 ಲಕ್ಷದವರೆಗಿನ ದೀರ್ಘಾವಧಿ ಕೃಷಿ ಸಾಲವನ್ನು ಶೇ.5ರ ಬಡ್ಡಿ ಸಹಾಯಧನದೊಂದಿಗೆ ನೀಡಲಾಗುವುದು ಎಂದು ಆಯವ್ಯಯದಲ್ಲಿ ಹೇಳಲಾಗಿದೆ. ಈ ಕುರಿತು ಸರ್ಕಾರಿ ಆದೇಶ ಹೊರಡಿಸಲು ಪ್ರಸ್ತಾವನೆ ಸಲ್ಲಿಸಿರುವುದು ಪತ್ರದಿಂದ ಗೊತ್ತಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img