Sunday | June 14, 2026 |

ಬೆಡ್‌, ಉಪಕರಣಗಳ ಖರೀದಿ; ಲೆಕ್ಕಪತ್ರ ಪರಿಶೀಲನೆಗೆ ಅನುಮತಿ ಕೋರಿ ಸ್ಪೀಕರ್‌ಗೆ ಪತ್ರ

Support THE-FILE

spot_img

ಬೆಂಗಳೂರು; ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌ ಮತ್ತು ಆಸ್ಪತ್ರೆ ಬೆಡ್‌ಗಳ ಮತ್ತಿತರೆ ಉಪಕರಣಗಳ ಖರೀದಿ ಕುರಿತಂತೆ ಲೆಕ್ಕಪತ್ರ ಪರಿಶೀಲನೆ ಮತ್ತು ಸ್ಥಳ ಪರಿವೀಕ್ಷಣೆ ನಡೆಸಲು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮುಂದಾಗಿದೆ.

ಈಗಾಗಲೇ ಎಲ್ಲಾ ಸಮಿತಿಗಳ ಸಭೆಗಳನ್ನು ಮುಂದಿನ ಆದೇಶದವರೆಗೂ ಸ್ಥಗಿತಗೊಳಿಸಿ ಹೊರಡಿಸಿರುವ ಆದೇಶ ಮತ್ತು ಹೊರಡಿಸಿರುವ ಲಘು ಪ್ರಕಟಣೆಯನ್ನು ಹಿಂಪಡೆಯಬೇಕು ಎಂದು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷ ರಾಮಲಿಂಗಾರೆಡ್ಡಿ ಅವರು ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ 2021ರ ಮೇ 6 ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌ಗಳು, ಆಸ್ಪತ್ರೆ ಬೆಡ್‌ಗಳು ಮತ್ತಿತರೆ ಉಪಕರಣಗಳ ಖರೀದಿಗಳ ಕುರಿತಂತೆ ಚರ್ಚೆ, ಲೆಕ್ಕಪರಿಶೀಲನೆ ಮತ್ತು ಸ್ಥಳ ಪರಿವೀಕ್ಷಣೆ ನಡೆಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಅನಿವಾರ್ಯತೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗಿದೆ,’ ಎಂದು ಪತ್ರದಲ್ಲಿ ರಾಮಲಿಂಗಾರೆಡ್ಡಿ ಅವರು ಪ್ರಸ್ತಾಪಿಸಿದ್ದಾರೆ.

ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳು ನಿಯಮ 264ರ ಅನ್ವಯ ಸಮಿತಿಯು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅಡ್ಡಿಯಾಗಿದೆ. ಹೀಗಾಗಿ ಈಗಾಗಲೇ ಹೊರಡಿಸಿರುವ ಲಘು ಪ್ರಕಟಣೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದೂ ಪತ್ರದಲ್ಲಿ ಸ್ಪೀಕರ್‌ಗೆ ಮನವಿ ಮಾಡಿದ್ದಾರೆ.

ಲೆಕ್ಕಪತ್ರಗಳ ಪರಿಶೀಲನೆ ಮತ್ತು ಸ್ಥಳಪರಿಶೀಲನೆ ನಡೆಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ಸಮಿತಿಯ ಅಧ್ಯಕ್ಷ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಕೋವಿಡ್‌ ಮೊದಲ ಅಲೆಯ ಸಂದರ್ಭದಲ್ಲೂ ಪಿಪಿಇ ಕಿಟ್‌, ಸ್ಯಾನಿಟೈಸರ್‌, ವೆಂಟಿಲೇಟರ್‌, ಪಲ್ಸ್‌ ಆಕ್ಸಿಮೀಟರ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಕ್ರಮ ನಡೆದಿತ್ತು ಎಂಬ ಆರೋಪಗಳು ಕೇಳಿ ಬಂದಿದ್ದವು.

ಈ ಕುರಿತು ಪಿಎಸಿ ಹಿಂದಿನ ಅಧ್ಯಕ್ಷ ಎಚ್‌ ಕೆ ಪಾಟೀಲ್‌ ಅವರು ಸ್ಥಳ ಪರಿಶೀಲನೆ ಮತ್ತು ಲೆಕ್ಕಪತ್ರ ಪರಿಶೀಲನೆ ಮತ್ತು ತನಿಖೆಗೆ ಮುಂದಾಗಿದ್ದರು. ಆದರೆ ವಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇದಕ್ಕೆ ಸಹಕರಿಸಿರಲಿಲ್ಲ. ಸ್ಥಳಪರಿಶೀಲನೆ ನಡೆಸಲು ಅನುಮತಿಯನ್ನೂ ನೀಡಿರಲಿಲ್ಲ.

ಕೋವಿಡ್‌ ಮೊದಲ ಅಲೆಯ ಸಂದರ್ಭದಲ್ಲಿಯೂ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿತ್ತು ಎಂದು ಕರ್ನಾಟಕ ರಾಷ್ಟ್ರಸಮಿತಿ ನೀಡಿದ್ದ ದಾಖಲೆಗಳ ಸಮೇತ ದೂರಿನಲ್ಲಿ ಬಲವಾಗಿ ಆರೋಪಿಸಿತ್ತು. ಕೋವಿಡ್‌ ಭ್ರಷ್ಟಾಚಾರ ಕುರಿತಂತೆ ಸಮಿತಿಯು ಹಲವು ಸಭೆಗಳನ್ನು ನಡೆಸಿತ್ತು.

ಈ ಸಂಬಂಧ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಹಿಂದಿನ ಅಧ್ಯಕ್ಷ ಎಚ್‌ ಕೆ ಪಾಟೀಲ್‌ ಅವರು ಕೆಲವೆಡೆ ಸ್ಥಳ ಪರಿಶೀಲನೆ ನಡೆಸಿದ್ದರು. ಅಲ್ಲದೆ ದಾಖಲೆಗಳನ್ನಾಧರಿಸಿ ಮಧ್ಯಂತರ ವರದಿಯನ್ನೂ ಸಿದ್ಧಪಡಿಸಿದ್ದರು. ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಲು ಸ್ಪೀಕರ್‌ ಕಾಗೇರಿ ಅವರು ಅನುಮತಿ ನೀಡಿರಲಿಲ್ಲ. ಈ ವಿಚಾರವಾಗಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮತ್ತು ಕಾಗೇರಿ ಅವರ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿದ್ದನ್ನು ಸ್ಮರಿಸಬಹುದು.

ಇದರ ಮಧ್ಯೆ ಸಿಎಜಿಗೆ ಪತ್ರ ಬರೆದಿದ್ದ ಎಚ್‌ ಕೆ ಪಾಟೀಲ್‌ ಅವರು ಕೋವಿಡ್‌ ನಿಯಂತ್ರಣ ಸಂಬಂಧ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸಲು ಸೂಚಿಸಿದ್ದರು. ಆದರೆ ಈ ಸೂಚನೆಯನ್ನು ಸಿಎಜಿ ಪಾಲಿಸಿರಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಹಿಂದಿನ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ಸಿಎಜಿಯಿಂದ ಲೆಕ್ಕ ಪರಿಶೀಲನೆ ನಡೆಸಲು ಅನುಮತಿ ನೀಡಿರಲಿಲ್ಲ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img